Featured

2 ಲಕ್ಷ ರೂ.ವರೆಗಿನ ರೈತರ ಸಾಲಮನ್ನಾ ಘೋಷಣೆ

ಬೆಂಗಳೂರು: ಬಹುನಿರೀಕ್ಷಿತ ರೈತರ ಸಾಲಮನ್ನಾ ಘೋಷಣೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಜೆಟ್​ ಅಧಿವೇಶನದಲ್ಲಿ ಗುರುವಾರ ಪ್ರಕಟಿಸಿದ್ದು, 2 ಲಕ್ಷ ರೂ. ವರೆಗಿನ ಸಾಲವನ್ನು ಮನ್ನಾ ಮಾಡಿದ್ದಾರೆ. ಈ ಕ್ರಮದಿಂದಾಗಿ ಸರಕಾರಕ್ಕೆ 34 ಸಾವಿರ ಕೋಟಿ ರೂ. ಹೊರೆಯಾಗಲಿದೆ.

ಮೈತ್ರಿ ಸರ್ಕಾರ ರಚನೆಯಾದಂದಿನಿಂದ ಜೆಡಿಎಸ್‌ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕೆಂಬ ಕೂಗು ಕೇಳಿಬಂದಿತ್ತು. ಇದರ ಹಿನ್ನೆಲೆಯಲ್ಲಿಯೇ ಮುಖ್ಯಮಂತ್ರಿ ತಮ್ಮ ಮೊದಲ ಬಜೆಟ್‌ನಲ್ಲಿ ಸಾಲಮನ್ನಾ ಘೋಷಣೆ ಮಾಡಿದ್ದಾರೆ.

ಮೊದಲ ಹಂತದಲ್ಲಿ ರಾಷ್ಟ್ರೀಯ ಮತ್ತು ಸಹಕಾರ ಬ್ಯಾಂಕುಗಳ ಸುಸ್ತಿ ಬೆಳೆ ಸಾಲಮನ್ನಾ ಘೋಷಣೆ ಮಾಡಿದ್ದು, ಡಿಸೆಂಬರ್‌ವರೆಗಿನ ರೈತರ ಸುಸ್ತಿ ಬೆಳೆ ಸಾಲಮನ್ನಾ ಮಾಡಲು ತೀರ್ಮಾನಿಸಿದೆ. ಸಕಾಲದಲ್ಲಿ ಸಾಲ ಮರುಪಾವತಿ ಮಾಡಿರುವ, ಸುಸ್ತಿದಾರರಲ್ಲದ ರೈತರ ಸಾಲದ ಖಾತೆಗಳಿಗೆ 25 ಸಾವಿರ ತುಂಬಲು ನಿರ್ಧರಿಸಲಾಗಿದೆ.

ಈ ಬೆಳೆ ಸಾಲ ಮನ್ನಾ ಯೋಜನೆಯಿಂದ ಸುಮಾರು 34,000 ಕೋಟಿ ರೂ. ಗಳ ಮೊತ್ತದ ಪ್ರಯೋಜನ ರೈತರಿಗೆ ದೊರೆಯಲಿದೆ. ಸರ್ಕಾರಿ ಅಧಿಕಾರಿಗಳು ಮತ್ತು ಸಹಕಾರಿ ಕ್ಷೇತ್ರದ ಅಧಿಕಾರಿಗಳ ಕುಟುಂಬಗಳು ಹಾಗೂ ಕಳೆದ 3 ವರ್ಷಗಳಲ್ಲಿ ಆದಾಯ ತೆರಿಗೆ ಕಟ್ಟಿರುವಂತಹ ರೈತರುಗಳು ಹಾಗೂ ಇತರೆ ಅನರ್ಹ ಕೃಷಿ ಸಾಲಗಾರರು ಈ ಸಾಲ ಮನ್ನಾ ಯೋಜನೆಯಿಂದ ಹೊರಗೆ ಇರಲಿದ್ದಾರೆ.

ರೈತರಿಗೆ ಹೊಸ ಸಾಲ ಪಡೆಯಲು ಅನುಕೂಲವಾಗುವಂತೆ ಸರ್ಕಾರವು ಅವರ ಸುಸ್ತಿ ಖಾತೆಯಲ್ಲಿರುವ ಬಾಕಿಯನ್ನು ಮನ್ನಾ ಮಾಡಿ ಋಣಮುಕ್ತ ಪತ್ರವನ್ನು ನೀಡಲು ಕ್ರಮ ಕೈಗೊಳ್ಳಲಿದೆ. ಈ ಉದ್ದೇಶಕ್ಕಾಗಿ 2018-19ರ ಆಯವ್ಯಯದಲ್ಲಿ 6,500 ಕೋಟಿ ರೂ. ನಿಗದಿಪಡಿಸಿರುತ್ತೇನೆ. ಇದಲ್ಲದೆ ಹಿಂದಿನ ಸರ್ಕಾರವು ಸಹಕಾರಿ ಬ್ಯಾಂಕ್ ಗಳಲ್ಲಿ ರೈತರು ಮಾಡಿದ ಸುಮಾರು 8,165 ಕೋಟಿ ರೂ. ಸಾಲ ಮನ್ನಾ ಮಾಡಿ ಅದರಲ್ಲಿ 4,165 ಕೋಟಿ ರೂ.ಗಳನ್ನು ಹಿಂದಿನ ವರ್ಷ ಬಿಡುಗಡೆ ಮಾಡಿದೆ. ಉಳಿದ 4,000 ಕೋಟಿ ರು.ಗಳನ್ನು ಸಹ ಪಾವತಿ ಮಾಡಲು ಈ ಆಯವ್ಯಯದಲ್ಲಿ ಅವಕಾಶ ಕಲ್ಪಿಸಲಾಗಿದೆ.

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

23 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago