Featured

200 ಕೋಟಿ ಆಸ್ತಿ ದಾನ ಮಾಡಿ ಸನ್ಯಾಸತ್ವ ಸ್ವೀಕರಿಸಿದ ಗುಜರಾತ್‌ನ ಶ್ರೀಮಂತ ಉದ್ಯಮಿ ದಂಪತಿ – Vishwanews24

200 ಕೋಟಿ ಆಸ್ತಿ ದಾನ ಮಾಡಿ ಸನ್ಯಾಸತ್ವ ಸ್ವೀಕರಿಸಿದ ಗುಜರಾತ್‌ನ ಶ್ರೀಮಂತ ಉದ್ಯಮಿ ದಂಪತಿ

ಗಾಂಧಿನಗರ: ಗುಜರಾತ್‌ನ ಶ್ರೀಮಂತ ಉದ್ಯಮಿ ತಮ್ಮ 200 ಕೋಟಿ ರೂ. ಬೆಲೆಬಾಳುವ ಆಸ್ತಿಯನ್ನು ದಾನ ಮಾಡುವ ಮೂಲಕ ಪತ್ನಿಯೊಂದಿಗೆ ಸನ್ಯಾಸತ್ವ ಸ್ವೀಕರಿಸಲು ಮುಂದಾಗಿದ್ದಾರೆ.

ಸಬರ್ಕಾಂತ ಜಿಲ್ಲೆಯ ಹಿಮ್ಮತ್‌ನಗರದ ಉದ್ಯಮಿ ಭವೇಶ್ ಭಾಯ್ ಭಂಡಾರಿ ಮತ್ತು ಅವರ ಪತ್ನಿ ಜೈನ ದೀಕ್ಷೆ ತೆಗೆದುಕೊಂಡು ಸನ್ಯಾಸಿಯಾಗಲಿದ್ದಾರೆ.

ಸನ್ಯಾಸತ್ವ ಸ್ವೀಕಾರ ಹಿನ್ನೆಲೆ ಫೆಬ್ರವರಿಯಲ್ಲಿ ತಮ್ಮ 200 ಕೋಟಿ ರೂ. ಸಂಪತ್ತನ್ನು ದತ್ತಿ ಸಂಸ್ಥೆಗೆ ದಾನ ಮಾಡಿದ್ದು, ಈ ತಿಂಗಳ ಕೊನೆಯಲ್ಲಿ ಅಧಿಕೃತವಾಗಿ ಸನ್ಯಾಸತ್ವ ಸ್ವೀಕರಿಸಲಿದ್ದಾರೆ.ಭವೇಶ್ ದಂಪತಿಯ ಮಕ್ಕಳು ಸಹ 2 ವರ್ಷಗಳ ಹಿಂದೆ ದೀಕ್ಷೆ ಪಡೆದಿದ್ದರು. ಮಕ್ಕಳಿಂದ ಸ್ಫೂರ್ತಿ ಪಡೆದ ದಂಪತಿ ಕೂಡ ಇದೀಗ ಆಸ್ತಿ ಸಂಪತ್ತನ್ನು ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಲಿದ್ದಾರೆ.

ಏಪ್ರಿಲ್ 22ರಂದು ಭವೇಶ್ ದಂಪತಿ ಸನ್ಯಾಸತ್ವ ತೆಗೆದುಕೊಳ್ಳಲಿದ್ದು, ಬಳಿಕ ಲೌಕಿಕ ಜೀವನವನ್ನು ತ್ಯಜಿಸಲಿದ್ದಾರೆ. ಜೈನ ಸಮಾಜದಲ್ಲಿ ದೀಕ್ಷೆಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ದೀಕ್ಷೆ ತೆಗೆದುಕೊಳ್ಳುವವರು ಭಿಕ್ಷೆ ಬೇಡುವ ಮೂಲಕ ಜೀವನ ಸಾಗಿಸಬೇಕು. ಐಷಾರಾಮಿ ಜೀವನವನ್ನು ತ್ಯಜಿಸಬೇಕು. ಅಷ್ಟೇ ಅಲ್ಲದೇ ಜೀವನ ಪರ್ಯಂತ ಬರಿಗಾಲಿನಲ್ಲಿ ಇಡೀ ಭಾರತದಾದ್ಯಂತ ತಿರುಗಾಡಬೇಕಾಗುತ್ತದೆ.

ಹುಟ್ಟಿನಿಂದಲೇ ಶ್ರೀಮಂತ ಮನೆತನದಲ್ಲಿ ಬೆಳೆದ ಭವೇಶ್ ಭಂಡಾರಿ ಅವರ ಸನ್ಯಾಸತ್ವದ ನಿರ್ಧಾರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. .ಭವೇಶ್ ದಂಪತಿ ಇತರೆ ಮಂದಿಯೊಂದಿಗೆ ಸುಮಾರು 4 ಕಿ.ಮೀ ಮೆರವಣಿಗೆ ತೆರಳಿ ಬಳಿಕ ತಮ್ಮಲ್ಲಿದ್ದ ಮೊಬೈಲ್ ಸೇರಿದಂತೆ ಸಮಸ್ತ ಆಸ್ತಿಯನ್ನು ದಾನ ಮಾಡಿದ್ದಾರೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

18 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago