ಮುಂಬೈ: 2008ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಸೇರಿ ಎಲ್ಲಾ 7 ಆರೋಪಿಗಳಿಗೂ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ತನಿಖೆಯೇ ಸರಿಯಾಗಿ ನಡೆದಿಲ್ಲ ಎಂದು ಎನ್‍ಐಎ ವಿಶೇಷ ಕೋರ್ಟ್ ತೀರ್ಪು ಪ್ರಕಟಿಸಿದ್ದು, ಎಲ್ಲಾ ಆರೋಪಿಗಳನ್ನು ಖುಲಾಸೆಗೊಳಿಸಿದೆ.
ಏಪ್ರಿಲ್ 19ರಂದು ಪ್ರಕರಣದ ವಿಚಾರಣೆ ಮುಗಿಸಿದ್ದ ಕೋರ್ಟ್, ಮೇ 8ರಂದು ಕೋರ್ಟ್‌ನಲ್ಲಿ ಹಾಜರಿರುವಂತೆ ಆರೋಪಿಗಳಿಗೆ ಸೂಚಿಸಿತ್ತು. ನ್ಯಾಯಾಧೀಶರಾದ ಎ.ಕೆ.ಲಾಹೋಟಿ ಅವರು, ತೀರ್ಪು ಪ್ರಕಟಿಸಲು ಹೆಚ್ಚಿನ ಸಮಯ ಬೇಕು. ಜುಲೈ 31ರಂದು ಎಲ್ಲಾ ಆರೋಪಿಗಳು ಹಾಜರಿರಬೇಕು’ ಎಂದು ಆರೋಪಿಗಳಿಗೆ ತಿಳಿಸಿದ್ದರು.
ಏನಿದು ಪ್ರಕರಣ?
2008ರ ಸೆ.29ರಂದು ರಂಜಾನ್ ಮಾಸದಲ್ಲಿ ನವರಾತ್ರಿ ಆಚರಣೆಗೆ ಮುಂಚಿನ ದಿನ ಬಾಂಬ್ ಸ್ಫೋಟ ನಡೆದಿತ್ತು. ಈ ಸ್ಫೋಟದಲ್ಲಿ 6 ಜನರು ಮೃತಪಟ್ಟು, 100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.
ಈ ಪ್ರಕರಣವನ್ನು ಮುಂಬೈ ಭಯೋತ್ಪಾದಕ ನಿಗ್ರಹ ಪಡೆ ಪ್ರಾಥಮಿಕ ತನಿಖೆ ನಡೆಸಿತ್ತು. ನಂತರ ತನಿಖೆಯ ಹೊಣೆಯನ್ನು ಎನ್‌ಐಎ ವಹಿಸಿಕೊಂಡಿತ್ತು. ಬಿಜೆಪಿ ಮಾಜಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್, ಮಾಜಿ ಸೇನಾಧಿಕಾರಿ ಪ್ರಸಾದ್ ಪುರೋಹಿತ್ (ನಿವೃತ್ತ), ಮೇಜರ್ ರಮೇಶ್ ಉಪಾಧ್ಯಾಯ (ನಿವೃತ್ತ) ಸೇರಿದಂತೆ ಏಳು ಮಂದಿ ಆರೋಪಿಗಳ ಮೇಲೆ ಐಪಿಸಿ, ಯುಎಪಿಎ ಅನ್ವಯ ಆರೋಪ ಹೊರಿಸಲಾಗಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…