Featured

2019ರ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ, ರಾಹುಲ್ ಪಿಎಂ ಆಗ್ತಾರೆ : ಪರಮೇಶ್ವರ್ ಭವಿಷ್ಯ

ಬೆಂಗಳೂರು,: 2019ರ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದ್ದು , ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು ಪ್ರಧಾನಿಯಾಗಬೇಕೆಂಬ ಆಶಯ ಈಡೇರಿಲಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಇಂದಿಲ್ಲಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ವರ್ಷ ಅಂದರೆ 2019ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಅಧಿಕಾರ ಹಿಡಿಯಲಿದೆ. ರಾಹುಲ್ ಗಾಂಧಿ ಅವರೇ ದೇಶದ ಪ್ರಧಾನಿಯಾಗಬೇಕೆಂಬುದು ನಮ್ಮೆಲ್ಲರ ಆಶಯ. ಅವರಿಗೆ ಯುವಜನರ ಆಶೋತ್ತರಗಳ ಪರಿಚಯವಿದೆ. ಅಂಥವರು ಪ್ರಧಾನಿಯಾಗುವ ಅಗತ್ಯವಿದೆ. ನಮ್ಮ ಆಶಯವೂ ಈಡೇರಲಿದೆ ಎಂದರು.

ಈಗಾಗಲೇ ಚುನಾವಣೆ ಪೂರ್ವ ಮೈತ್ರಿ ಸಂಬಂಧವೂ ಚರ್ಚೆ ನಡೆಯುತ್ತಿದೆ. ಸ್ಥಳೀಯವಾಗಿ ಹಾಗೂ ರಾಜಕೀಯವಾಗಿ ಹಲವಾರು ಹೊಂದಾಣಿಕೆ ಮಾಡಿಕೊಳ್ಳಲಾಗುವುದು. ಕಾಂಗ್ರೆಸ್ ಎಷ್ಟು ಸ್ಥಾನಗಳನ್ನು ಗಳಿಸಲಿದೆ ಎಂಬ ವರದಿಯೂ ಇದೆ. ವರದಿ ಏನೇ ಹೇಳಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಚಿವ ಡಿ.ಕೆ.ಶಿವಕುಮಾರ್ ರಾಜೀನಾಮೆ ಕೇಳುವುದು ಅವೈಜ್ಞಾನಿಕ ಎಂದ ಅವರು, ಜಾರಿ ನಿರ್ದೇಶನಾಲಯ, ಸಿಬಿಐ, ಆದಾಯ ತೆರಿಗೆ ಇಲಾಖೆ ತನ್ನ ಅಧಿಕಾರವನ್ನು ಸಂಪೂರ್ಣ ದುರುಪಯೋಗಪಡಿಸಿಕೊಳ್ಳುತ್ತಿವೆ. ಈ ಹಿಂದೆಯೂ ಅವರ ಮೇಲೆ ಐಟಿ ದಾಳಿ ನಡೆದಿತ್ತು. ಅದು ದುರುದ್ದೇಶ ಹಾಗೂ ರಾಜಕೀಯ ಪ್ರೇರಿತ ಎಂದು ಹೇಳಿದರು.

ಅವರ ಮೇಲೆ ಐಟಿ ದಾಳಿ ಹೊಸದಲ್ಲ. ಡಿ.ಕೆ.ಶಿವಕುಮಾರ್ ಅವರು ಸಹ ತಮ್ಮ ಬಳಿ ಇರುವ ಮಾಹಿತಿ ಕೊಡುವುದಾಗಿ ಹೇಳಿದ್ದಾರೆ. ಆದರೆ ಕಾನೂನುಕ್ರಮ ಕೈಗೊಳ್ಳುವ ಬಗ್ಗೆ ನಮ್ಮ ಆಕ್ಷೇಪಣೆ ಏನಿಲ್ಲ. ಆದರೆ ಜವಾಬ್ದಾರಿಯುತ ಸಂಸ್ಥೆಗಳಿಂದ ಅಧಿಕಾರ ದುರುಪಯೋಗವಾಗುತ್ತಿರುವುದಕ್ಕೆ ಆಕ್ಷೇಪವಿದೆ. ಡಿ.ಕೆ.ಶಿವಕುಮಾರ್ ಅವರೊಂದಿಗೆ ಕಾಂಗ್ರೆಸ್ ಸದಾ ಇರುತ್ತದೆ ಎಂದು ತಿಳಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago