2019ರ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸುವುದೇ ನಮ್ಮ ಏಕೈಕ ಗುರಿ: ದೇವೇಗೌಡ
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ನರೇಂದ್ರ ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷ ನಾಲ್ಕು ವರ್ಷ ಪೂರೈಸಿ ಐದನೇ ವರ್ಷಕ್ಕೆ ಕಾಲಿಟ್ಟಿದ್ದು, ಮುಂದಿನ ವರ್ಷ ಲೋಕಸಭಾ ಚುನಾವಣೆ ನಡೆಯಲಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿಯನ್ನು ಸೋಲಿಸುವುದೇ ಏಕೈಕ ಗುರಿ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ಬೆಂಗಳೂರಿನ ತಮ್ಮ ಜಾತ್ಯಾತೀತ ಜನತಾದಳದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ನಾವು ಎಷ್ಟು ಸೀಟು ಗೆಲ್ಲುತ್ತೇವೆ ಎಂಬುದು ಮುಖ್ಯವಲ್ಲ. ಕಾಂಗ್ರೆಸ್ ಜೊತೆ ಸೇರಿ ಬಿಜೆಪಿಯ ಹಿನ್ನಡೆಗೆ ನಾವು ಮುಂದಾಗಬೇಕು. ಬಿಜೆಪಿ ಸೋಲಿಸುವುದು ನಮ್ಮ ಗುರಿ ಎಂದು ಸ್ಪಷ್ಟಪಡಿಸಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ನಮ್ಮಲ್ಲಿರುವವರೇ ಕಾರಣ. ಆದಷ್ಟು ಬೇಗ ಅನ್ಯಾಯ ಮಾಡಿದವರನ್ನು ಪಕ್ಷದಿಂದ ಹೊರ ಹಾಕುವೆ ಎಂದು ಈ ಸಂದರ್ಭದಲ್ಲಿ ಅವರು ಎಚ್ಚರಿಕೆ ನೀಡಿದರು.

One thought on “2019ರ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸುವುದೇ ನಮ್ಮ ಏಕೈಕ ಗುರಿ: ದೇವೇಗೌಡ”
ಒಳ್ಳೆಯದು ದೇವೇಗೌಡರೇ, ಈಗ ಜನತೆಗೆ ಸರಿಯಾದ ಆಯ್ಕೆಗೆ ಅವಕಾಶ ಕಲ್ಪಿಸಿದ್ದೀರಿ. ಅಸೆಂಬ್ಲಿ ಚುನಾವಣೆಯಲ್ಲಿ ಕೂಡಾ ಇದೇ ರೀತಿ ಮಾಡುತ್ತಿದ್ದರೆ, ತ್ರಿಶಂಕು ವಿಧಾನಸಭೆ ಅವಕಾಶವಿರುತ್ತಿರಲಿಲ್ಲ..
Comments are closed.