ನವದೆಹಲಿ : ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರವು ಮೋಟಾರು ವಾಹನ ತಿದ್ದುಪಡಿ ವಿಧೇಯಕ 2019 ರಲ್ಲಿ ಅಪಘಾತ ಎಸಗಿದವರೇ ಸಂತ್ರಸ್ತರಿಗೆ ಪರಿಹಾರ ಕೊಡಬೇಕು ಎಂಬ ನಿಯಮದ ಬಗ್ಗೆ ಲೋಕಸಭೆಯಲ್ಲಿ ಮಂಡಿಸಿದೆ.
ರಸ್ತೆ ಅಪಘಾತ ಪ್ರಕರಣದಲ್ಲಿ ಮೃತರಿಗೆ ವಾಹನ ಮಾಲೀಕರು ಅಥವಾ ವಿಮೆದಾರರು ಗರಿಷ್ಠ 5 ಲಕ್ಷ ರೂ. ಪರಿಹಾರ ನೀಡಬೇಕು. ಒಂದು ವೇಳೆ ಗಂಭೀರವಾಗಿ ಗಾಯಗೊಂಡವರಿಗೆ ಅಪಘಾತ ಮಾಡಿದದವರೇ 2.5 ಲಕ್ಷ ರೂ. ಕನಿಷ್ಠ ಆರ್ಥಿಕ ನೆರವು ನೀಡಬೇಕು. ಹಾಗೆಯೇ ವಾಹನ ಪರವಾನಗಿ ನವೀಕರಣದ ಅವಧಿಯಲ್ಲಿ 3 ವರ್ಷದಿಂದ 5 ವರ್ಷಕ್ಕೆ ಏರಿಸಲಾಗಿದೆ. ಜೊತೆಗೆ ವಿಶೇಷ ಚೇತನರಿಗೆ ಲೈಸನ್ಸ್ ನೀಡಲು ಸಾರಿಗೆ ಇಲಾಖೆಗೆ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ ಎನ್ನುವ ಬಗ್ಗೆ ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ.
2019 ರ ಮೋಟಾರು ವಾಹನ ತಿದ್ದುಪಡಿ ವಿಧೇಯಕದಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿದವರಿಗೆ ಭಾರಿ ದಂಡ ವಿಧಿಸಲಾಗುತ್ತದೆ. ಹಾಗೆಯೇ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದವರಿಗೆ ಹಾಗೂ ಗಾಯಾಳುಗಳಿಗೆ ಹೆಚ್ಚಿನ ಪರಿಹಾರ ನೀಡುವುದು, ಮಾನವೀಯ ದೃಷ್ಟಿಯಲ್ಲಿ ಗಾಯಾಳುಗಳ ಸಹಾಯಕ್ಕೆ ಬರುವ ಸಾರ್ವಜನಿಕರಿಗೆ ಪೊಲೀಸ್ ವಿಚಾರಣೆಯ ಕಿರಿಕಿರಿಯಿಂದ ವಿನಾಯಿತಿ ನೀಡುವುದು, ಹೀಗೆ ಹಲವು ಸುಧಾರಣಾ ಕ್ರಮಗಳ ಬಗ್ಗೆ ತಿದ್ದುಪಡಿಯಲ್ಲಿ ಉಲ್ಲೇಖಿಸಲಾಗಿದೆ.
ಯಾವ ನಿಯಮ ಉಲ್ಲಂಘಿಸಿದರೆ ಎಷ್ಟು ದಂಡ?
ಚಾಲನಾ ಪರವಾನಗಿ (ಡಿಎಲ್) ಇಲ್ಲದೆ ವಾಹನ ಚಲಾಯಿಸುವವರಿಗೆ 5,000 ರೂ. ದಂಡ ವಿಧಿಸಲಾಗುವುದು. ಹಾಗೆಯೇ ರಸ್ತೆಯಲ್ಲಿ ಸಾಗುವಾಗ ಆಂಬ್ಯುಲೆನ್ಸ್‍ಗೆ ದಾರಿ ಬಿಡದ ವಾಹನ ಸವಾರರಿಗೆ 10,000 ರೂ. ದಂಡ ಹಾಕಲಾಗುತ್ತದೆ. ಅತಿ ವೇಗದ ಚಾಲನೆಗೆ 2,000 ರೂ. ದಂಡ, ಹೆಲ್ಮೆಟ್ ಹಾಕದೆ ದ್ವಿಚಕ್ರ ಚಲಾಯಿಸಿದರೆ 1,000 ರೂ. ದಂಡದ ಜೊತೆಗೆ 3 ತಿಂಗಳು ಡಿಎಲ್ ರದ್ದುಗೊಳಿಸಲಾಗುತ್ತದೆ. ಜೊತೆಗೆ ವಿಮೆ ಇಲ್ಲದೆ ವಾಹನ ಓಡಿಸಿದರೆ 2,000 ರೂ. ಹಾಗೂ ಕುಡಿದು ವಾಹನ ಚಲಾವಣೆ( ಡ್ರಿಂಕ್ ಆ್ಯಂಡ್ ಡ್ರೈವ್) ಮಾಡಿದರೆ 10,000 ರೂ. ದಂಡ ಕಟ್ಟಬೇಕು ಎಂದು ಮೋಟಾರು ವಾಹನ ತಿದ್ದುಪಡಿ ವಿಧೇಯಕ -2019ದಲ್ಲಿ ತಿಳಿಸಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…