Featured

2019ರ ಲೋಕಸಭಾ ಚುನಾವಣೆಯಲ್ಲಿ ಮುಸ್ಲಿಮರ ನೆಚ್ಚಿನ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ: ಷಹನವಾಜ್‌ ಹುಸೇನ್‌

ಹೊಸದಿಲ್ಲಿ: 2019ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರು ಮುಸ್ಲಿಂ ಸಮುದಾಯದವರ ಅಚ್ಚುಮೆಚ್ಚಿನ ಪ್ರಧಾನಿ ಅಭ್ಯರ್ಥಿಯಾಗಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಷಹನವಾಜ್‌ ಹುಸೇನ್‌ ಹೇಳಿದ್ದಾರೆ.

ಮುಸ್ಲಿಂ ಸಮುದಾಯದವರಲ್ಲಿ ಅದರಲ್ಲೂ ವಿಶೇಷವಾಗಿ ಮುಸ್ಲಿಂ ಮಹಿಳೆಯರು ಪ್ರಧಾನಿ ಮೋದಿ ಅವರ ಮೇಲೆ ಇಟ್ಟಿರುವ ನಂಬಿಕೆ ಹೆಚ್ಚಿದೆ ಮತ್ತು ಹೆಚ್ಚುತ್ತಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ತಮ್ಮ ರಾಜಕೀಯ ಬೆಳೆ ಬೇಯಿಸಿಕೊಳ್ಳಲು ವಿರೋಧ ಪಕ್ಷಗಳು ಅಲ್ಪಸಂಖ್ಯಾತ ಸಮುದಾಯದಲ್ಲಿ ಮೋದಿ ಅವರ ಬಗ್ಗೆ ಭಯ ಹುಟ್ಟಿಸುವ ಕೆಲಸ ಮಾಡಿದ್ದವು. ಆದರೆ, ಈ ಭಯ ಹೋಗಲಾಡಿಸುವಲ್ಲಿ ಸಫಲರಾಗಿರುವ ಮೋದಿ ಅವರು ಮುಸ್ಲಿಂ ಸಮುದಾಯದಲ್ಲಿ ತಮ್ಮ ಬಗೆಗಿನ ನಂಬಿಕೆಯನ್ನು ಹೆಚ್ಚಿಸಿಕೊಂಡಿದ್ದಾರೆ, ಎಂದು ಹುಸೇನ್ ತಿಳಿಸಿದರು.

ದೇಶದ ಪ್ರಧಾನಿಯಾಗಿರುವ ಮೋದಿಯವರು 132 ಕೋಟಿ ಜನರನ್ನು ಭಾರತೀಯರೆಂಬ ದೃಷ್ಟಿಕೋನದಿಂದ ನೋಡುತ್ತಾರೆ. ಆದರೆ ಇತರೆ ರಾಜಕೀಯ ಪಕ್ಷಗಳು ಮುಸ್ಲಿಂ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್ ರೀತಿಯಲ್ಲಿ ನೋಡುತ್ತವೆ. ಈಗಾಗಲೇ ಈ ಬಗ್ಗೆ ಮುಸ್ಲಿಂ ಸಮುದಾಯ ಸೇರಿದಂತೆ ಭಾರತೀಯರಿಗೂ ಅರ್ಥವಾಗಿದೆ. ಹೀಗಾಗಿಯೇ ಪ್ರಧಾನಿ ಮೋದಿಯವರು ಎಲ್ಲರ ಅಚ್ಚು-ಮೆಚ್ಚಿನ ನಾಯಕ ಎಂದು ತಿಳಿಸಿದರು.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅವರು, ದೇಶದಲ್ಲಿ ಮುಸ್ಲಿಂ ಸಮುದಾಯ ಹಿಂದುಳಿದಿರುವುದು ಹಾಗೂ ಬಡತನದ ಸುಳಿಯಲ್ಲಿ ಸಿಲುಕಲು ಕಾಂಗ್ರೆಸ್ಸೇ ನೇರ ಕಾರಣ. ಇಂದು ಪ್ರಧಾನಿ ಮೋದಿಯವರು ಮುಸ್ಲಿಂ ಸಮುದಾಯಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡುತ್ತಿದ್ದಾರೆ. ಅವರು ಜಾರಿಗೆ ತಂದ ತ್ರಿವಳಿ ತಲಾಖ್ ರದ್ದು ಮುಸ್ಲಿಂ ಸಮುದಾಯದ ಮಹಿಳೆಯರಿಗೆ ಭದ್ರತೆಯನ್ನು ಒದಗಿಸಿದೆ ಎಂದು ಹೇಳಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago