ನವದೆಹಲಿ: 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 300ಕ್ಕೂ ಸ್ಥಾನಗಳನ್ನು ಗೆಲ್ಲಲ್ಲಿದ್ದು, ಎನ್‌ಡಿಎ ಸರ್ಕಾರ ಎರಡನೇ ಅವಧಿಗೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಪಿಯೂಶ್ ಗೊಯಲ್ ಶುಕ್ರವಾರ ಭವಿಷ್ಯ ನುಡಿದಿದ್ದಾರೆ.
ಹಿಂದೂಸ್ತಾನ್ ಟೈಮ್ಸ್ ಪತ್ರಿಕೆ ಆಯೋಜಿಸಿದ್ದ ನಾಯಕತ್ವ ಶಿಬಿರ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಜಾಗತಿಕ ಆರ್ಥಿಕ ಹಿಂಜರಿತದ ನಡುವೆಯೂ ಎನ್‌ಡಿಎ ಸರ್ಕಾರ ಸಮತೋಲನ ಕಾಯ್ದುಕೊಂಡು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ಆಡಳಿತ ಮತ್ತು ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಆರ್ಥಿಕ ನೀತಿಗಳ ಪರಿಣಾಮ ಭಾರತದ ಅರ್ಥ ವ್ಯವಸ್ಥೆ ಬಲಗೊಂಡಿದೆ ಎಂದು ಪಿಯೂಶ್ ಗೊಯಲ್ ತಿಳಿಸಿದರು.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂಬ ಆರೋಪವನ್ನು ಪಿಯೂಶ್ ಗೊಯಲ್ ತಳ್ಳಿಹಾಕಿದರು.
ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದೆ, ಎರಡಂಕಿ ಇದ್ದ ಹಣದುಬ್ಬರ ಒಂದಂಕಿಗೆ ತಲುಪಿದೆ, ಬ್ಯಾಂಕಿಂಗ್ ವಲಯವನ್ನು ಬಲಪಡಿಸಲಾಗಿದೆ, ಕಳೆದ ಐದು ವರ್ಷಗಳಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ ಕೇವಲ ಐದು ರೂಪಾಯಿ ಮಾತ್ರ ಕುಸಿತವಾಗಿರುವುದು ಎಂದು ಚಾವ್ಲಾ ತಿಳಿಸಿದರು..
ಪ್ರವಾಸಿ ಬೋಟ್ ದುರಂತ: ಮೃತರ ಸಂಖ್ಯೆ 9ಕ್ಕೆ ಏರಿಕೆ ಜಬಲ್ಪುರ : ಮಧ್ಯಪ್ರದೇಶದ ಜಬಲ್ಪುರದಲ್ಲಿನ ಬಾರ್ಗಿ ಅಣೆಕಟ್ಟು ಬಳಿ ದುರಂತಕ್ಕೀಡಾದ…
ಖರ್ಗೆ ಅವರು ರಾಜ್ಯದ ಮುಖ್ಯಮಂತ್ರಿಯಾದರೆ ಪಕ್ಷದ ಎಲ್ಲರೂ ಸ್ವಾಗತಿಸುತ್ತಾರೆ : ಗೃಹ ಸಚಿವ ಪರಮೇಶ್ವರ್ ಬೆಂಗಳೂರು: ಅನುಭವ ಹೊಂದಿರುವ ಎಐಸಿಸಿ…
ಪವನ್ ಖೇರಾಗೆ ಕಾನೂನು ಹೋರಾಟದಲ್ಲಿ ಗೆಲುವು - ಸುಪ್ರೀಂ ಕೋರ್ಟ್‌ನ ಮಹತ್ವದ ಆದೇಶ ನವದೆಹಲಿ: ಪವನ್ ಖೇಡಾ ವಿರುದ್ಧ ಅಸ್ಸಾಂ…
ಸಿಲಿಂಡರ್ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು…
ಬೆಳ್ತಂಗಡಿ : ಇಲಿಪಾಷಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಮೃತ್ಯು ಬೆಳ್ತಂಗಡಿ : ಮನೆಯಲ್ಲಿ ಇಲಿಪಾಷಣ ತೆಗೆದುಕೊಂಡು…
ಉಡುಪಿ: ಮಹಿಳೆಯ ಉಸಿರುಗಟ್ಟಿಸಿ ಕೊಲೆ ಯತ್ನ ಪ್ರಕರಣ; ಇಬ್ಬರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಉಡುಪಿ: ನಾಲ್ಕು ವರ್ಷಗಳ ಹಿಂದೆ ಮಂಚಿಕುಮೇರಿಯಲ್ಲಿ…