2019 ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಿದ್ದು ; ರಾಹುಲ್ ಗಾಂಧಿ ಮೇಲಿನ ವಿಶ್ವಾಸಾರ್ಹತೆ ಹೆಚ್ಚಾಗುತ್ತಿದೆ , ಹಾಗಾಗಿ ಪ್ರಧಾನಿ ಹುದ್ದೆಗೆ ರಾಹುಲ್ ಗಾಂಧಿ ಅತ್ಯುತ್ತಮ ಆಯ್ಕೆ : ವೀರಪ್ಪ ಮೊಯ್ಲಿ
ಹೈದರಾಬಾದ್: 2019ರ ಲೋಕಸಭೆ ಬಿಜೆಪಿ ವಿರೋಧಿ ಪಕ್ಷಗಳನ್ನು ಒಗ್ಗೂಡಿಸಲು ಹಲವು ಪ್ರಯತ್ನಗಳು ನಡೆಯುತ್ತಿವೆ. ಈ ಸಂದರ್ಭದಲ್ಲಿ ಪ್ರಧಾನಿ ಹುದ್ದೆಗೆ ರಾಹುಲ್ ಗಾಂಧಿಯೇ ಪ್ರಧಾನಿಯಾಗಲು ಅತ್ಯುತ್ತಮ ಆಯ್ಕೆ ಎಂದು ಬುಧವಾರ ತೆಲಂಗಾಣದಲ್ಲಿ ಹೇಳಿದ್ದಾರೆ.
ತೆಲಂಗಾಣದಲ್ಲಿ ಪಕ್ಷದ ಪರ ಪ್ರಚಾರ ನಡೆಸಿದ ವೀರಪ್ಪ ಮೊಯ್ಲಿ, ನಮ್ಮ ಪಕ್ಷ ರಾಷ್ಟ್ರೀಯ ಮಟ್ಟದಲ್ಲಿ ಏರುಗತಿಯಲ್ಲಿದ್ರೆ, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ತನ್ನ ಮಿತ್ರಪಕ್ಷಗಳನ್ನು ಕಳೆದುಕೊಳ್ಳುತ್ತಿವೆ ಎಂದು ತಿಳಿಸಿದ್ದಾರೆ.
ಬಿಜೆಪಿ ವಿರೋಧಿ ಮೈತ್ರಿಕೂಟದ ಪಕ್ಷಗಳು ರಾಹುಲ್‌ನನ್ನು ನಾಯಕನನ್ನಾಗಿ ಬಿಂಬಿಸುತ್ತವಾ ಎಂಬ ಪ್ರಶ್ನೆಗೆ ವೀರಪ್ಪ ಮೊಯ್ಲಿ ,ರಾಹುಲ್ ಗಾಂಧಿಯೇ ಪ್ರಧಾನಿಯಾಗಲು ಉತ್ತಮ ಆಯ್ಕೆ ಎಂದು ವೀರಪ್ಪ ಮೊಯ್ಲಿ ಪಿಟಿಐಗೆ ತಿಳಿಸಿದ್ದಾರೆ.
”ಕಾಂಗ್ರೆಸ್ ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ, ಮಿಜೋರಾಂ ಸೇರಿ ಐದೂ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ” ಎಂದೂ ಮೊಯ್ಲಿ ವಿಶ್ವಾಸದಿಂದ ಹೇಳಿದ್ದಾರೆ. ಜತೆಗೆ, ”ವಿಪಕ್ಷಗಳು ಒಗ್ಗೂಡುವುದು ವಾಸ್ತವವಾಗುತ್ತಿದ್ದು, ಕಾಂಗ್ರೆಸ್ ಎಲ್ಲ ರಾಜ್ಯಗಳಲ್ಲೂ ಮೇಲೇಳುತ್ತಿದೆ. ಹೀಗಾಗಿ, ಅಧಿಕಾರಕ್ಕೆ ಬರುವ ಸಾಧ್ಯತೆ ಹೆಚ್ಚಿದ್ದು, ಇದರಿಂದ ನಮ್ಮ ರಾಹುಲ್ ಗಾಂಧಿ ಮೇಲಿನ ವಿಶ್ವಾಸಾರ್ಹತೆ ಹೆಚ್ಚಾಗುತ್ತಿದೆ” ಎಂದೂ ಅವರು ತಿಳಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…