2023ಕ್ಕೆ ಕುಮಾರಸ್ವಾಮಿಯವರು ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ : ನಿಖಿಲ್ ಕುಮಾರಸ್ವಾಮಿ -Vishwanews24
2023ಕ್ಕೆ ಕುಮಾರಸ್ವಾಮಿಯವರು ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ : ನಿಖಿಲ್ ಕುಮಾರಸ್ವಾಮಿ -Vishwanews24
ಮಂಡ್ಯ : 2023ಕ್ಕೆ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡುವುದೇ ನನ್ನ ಗುರಿಯಾಗಿದೆ. ಇದಕ್ಕಾಗಿ ರಾಜ್ಯಾಧ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗುತ್ತೇನೆ. 2023ಕ್ಕೆ ಕುಮಾರಸ್ವಾಮಿಯವರು ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂಬುದಾಗಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಎಂ.ದೊಡ್ಡಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಹೆಚ್ ಡಿ ಕುಮಾರಸ್ವಾಮಿಯವರು ಭಾವನಾತ್ಮಕ ಮನುಷ್ಯರಾಗಿದ್ದಾರೆ. ಇಂತಹ ಅವರನ್ನು ಮಂಡ್ಯ, ರಾಮನಗರ ಜಿಲ್ಲೆಗಳಿಗೆ ಮಾತ್ರವೇ ಸಿಎಂ ಆಗಿದ್ದಾರೆ ಎಂಬುದಾಗಿ ಅಣಕ ಮಾಡಿದ್ರು. ಆದ್ರೇ ಅವರು ಎಲ್ಲಾ ಜಿಲ್ಲೆಗಳಿಗೂ ಅನುದಾವನ್ನು ಪಕ್ಷ ಭೇದ ಮರೆತು ನೀಡಿದ್ದಾರೆ ಎಂದರು.
ಇನ್ನೂ ಮುಂದುವರೆದು ಮಾತನಾಡಿದಂತ ಅವರು, ಜೆಡಿಎಸ್ ಪಕ್ಷವು ಮಂಡ್ಯ, ಮೈಸೂರು, ರಾಮನಗರಕ್ಕೆ ಮಾತ್ರವೇ ಸೀಮಿತವಾಗಿಲ್ಲ. ಉತ್ತರ ಕರ್ನಾಟಕ ಭಾಗದಲ್ಲೂ ಪಕ್ಷ ಪ್ರಬಲವಾಗಿದೆ. 2023ಕ್ಕೆ ಹೆಚ್ ಡಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡುವುದೇ ನಮ್ಮ ಗುರಿಯಾಗಿದೆ. ಇದಕ್ಕಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಪ್ರವಾಸ ಕೈಗೊಳ್ಳಲಾಗುತ್ತದೆ. 2023ಕ್ಕೆ ಕುಮಾರಸ್ವಾಮಿಯವರು ಈ ರಾಜ್ಯ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಭವಿಷ್ಯ ನುಡಿದರು.
