Featured

2023ಕ್ಕೆ ಕಾಂಗ್ರೆಸ್‌ ಅಧಿಕಾರಕ್ಕೆ –  ಆಗ ಮತಾಂತರ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಎಲ್ಲವನ್ನು ವಾಪಸ್ ಪಡೆಯುತ್ತೇವೆ :  ಡಿಕೆಶಿ – Vishwanews24

2023ಕ್ಕೆ ಕಾಂಗ್ರೆಸ್‌ ಅಧಿಕಾರಕ್ಕೆ –  ಆಗ ಮತಾಂತರ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಎಲ್ಲವನ್ನು ವಾಪಸ್ ಪಡೆಯುತ್ತೇವೆ :  ಡಿಕೆಶಿ – Vishwanews24

ಬೆಳಗಾವಿ: “2023ಕ್ಕೆ ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ. ಆಗ ಮತಾಂತರ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆ ಎಲ್ಲವನ್ನು ವಾಪಸ್ ಪಡೆಯುತ್ತೇವೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮತಾಂತರ ನಿಷೇಧ ಕಾಯ್ದೆ ಮಾತ್ರವಲ್ಲ, ಯಾವುದೇ ಕಾಯ್ದೆ ಜಾರಿಗೆ ತಂದಲ್ಲಿ ನಾವು ವಾಪಸ್‌ ಪಡೆಯುತ್ತೇವೆ. ಇದನ್ನು ನಾನು ಅನ್‌‌‌‌ ರೆಕಾರ್ಡ್‌‌‌ ಹೇಳುತ್ತಿದ್ದೇನೆ” ಎಂದಿದ್ದಾರೆ.

“ಬಿಜೆಪಿಯಲ್ಲಿ ಸಂಖ್ಯಾಬಲವಿದ್ದು, ಏನು ಬೇಕಾದರೂ ಮಾಡಬಹುದು ಎಂದುಕೊಂಡಿದ್ದಾರೆ. ಯಾರೇ ಆಗಲಿ ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡುವುದು ಮುಖ್ಯ. ವಿಧೇಯಕವನ್ನು ಮತಕ್ಕೆ ಹಾಕುವ ಪ್ಲಾನ್‌ ನಡೆಯುತ್ತಿದೆ. ನಮಗೆ ವಿಧಾನಸಭೆಯಲ್ಲಿ ಅಗತ್ಯ ಸಂಖ್ಯಾಬಲವಿಲ್ಲ. ಆದರೆ, ನಮಗೆ ವಿಧಾನ ಪರಿಷತ್‌‌ನಲ್ಲಿ ಬಹುಮತವಿದೆ” ಎಂದು ಹೇಳಿದ್ದಾರೆ.

ಈ ಸಂದರ್ಭ ಜೆಡಿಎ‌ಸ್‌ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ಅವರು, “ಜೆಡಿಎಸ್‌ ವಿಧಾನಸಭೆಯಲ್ಲಿ ಹೇಳುವುದು ಒಂದು ಮಾಡುವುದು ಇನ್ನೊಂದು. ವಿಧೇಯಕ ಮಂಡನೆಯ ಸಂದರ್ಭ ವಿರೋಧ ಮಾಡುತ್ತಾರೆ. ಕೊನೆಯ ಹಂತದಲ್ಲಿ ಕೈಕೊಡುತ್ತಾರೆ. ಸಭಾತ್ಯಾಗ ಮಡುವುದು ಸಹ ಬಿಜೆಪಿಗೆ ಬೆಂಬಲಿಸಿದಂತೆ” ಎಂದಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

9 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

9 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

10 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

10 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

10 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

10 hours ago