ಮದ್ದೂರು: ಜೆಡಿಎಸ್ ಕಾರ್ಯಕರ್ತರ ಪಕ್ಷವಾಗಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಲ್ಲಾ ಜಿಲ್ಲೆಗಳಲ್ಲಿ ಎಲ್ಲಾ ಧರ್ಮ, ಜಾತಿಯ ಯುವಕರನ್ನು ಸೆಳೆಯುವ ಮೂಲಕ ಪಕ್ಷ ಸಂಘಟನೆ ಮಾಡಲಾಗುವುದು ಜೊತೆಗೆ 2023ರ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಅಧಿಕಾರಕ್ಕೆ ತರುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಗ್ರಾ.ಪಂ ಚುನಾವಣೆಯಲ್ಲಿ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ” ಎಂದರು.
“ಬಿಜೆಪಿ- ಜೆಡಿಎಸ್ ಮೈತ್ರಿ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಮಾತ್ರ ಸೀಮಿತವಾಗಿದ್ದು, ಜಿಲ್ಲೆಯ ರೈತರಿಗೆ ಹಾಗೂ ಮಂಡ್ಯ ಜಿಲ್ಲೆಯ ಅನುಕೂಲವಾಗಲೆಂಬ ಉದ್ದೇಶದಿಂದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರು ಮತ್ತು ಮುಖ್ಯಮಂತ್ರಿ ಯ್ಡಿಯೂರಪ್ಪ ಸೇರಿ ತೀರ್ಮಾನ ಕೈಗೊಂಡಿದ್ದಾರೆ” ಎಂದು ಸ್ಪಷ್ಟಪಡಿಸಿದ್ದಾರೆ.
ಇನ್ನು “ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಜೆಡಿಎಸ್ ಪಕ್ಷದ ಬೆಂಬಲವಿದೆ ರೈತರಿಗೆ ಎಂದಿಗೂ ಅನ್ಯಾಯವಾಗಲು ನಮ್ಮ ಪಕ್ಷ ಬಿಡುವುದಿಲ್ಲ ನಮ್ಮ ಧ್ವನಿ ರೈತರ ಪರವಾಗಿ ಎಂದಿಗೂ ಇರುತ್ತದೆ” ಎಂದು ಹೇಳಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…