ಮೈಸೂರು: ಮುಂದಿನ ವಿಧಾನಸಭಾ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ನಿಲ್ಲುವ ಪ್ರಶ್ನೆಯೇ ಇಲ್ಲ. ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ನಗರದ ಕಾಂಗ್ರೆಸ್ ಭವನದಲ್ಲಿ ಭಾನುವಾರ ನಡೆದ ಚಾಮುಂಡೇಶ್ವರಿ, ಇಲವಾಲ ಬ್ಲಾಕ್ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಇದು ನನ್ನ ಕೊನೆಯ ಚುನಾವಣೆ, 2023 ನನ್ನ ಕೊನೆಯ ಚುನಾವಣಾ ಯುದ್ಧವಾಗಿದೆ. ನಾನು ರಾಜ್ಯಸಭಾ ಸದಸ್ಯತ್ವ ಸೇರಿದಂತೆ ಯಾವುದೇ ಸ್ಥಾನಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದ್ದಾರೆ. 2018ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜೆಡಿಎಸ್‌ನ ಜಿಟಿ ದೇವೇಗೌಡ ವಿರುದ್ಧ ಸೋತಿದ್ದರು. ಆದರೆ ಅವರು ಬಾದಾಮಿಯಿಂದ ಬಿಜೆಪಿಯ ಶ್ರೀರಾಮುಲು ಅವರನ್ನು ಸೋಲಿಸಿ ಗೆದ್ದಿದ್ದಾರೆ. ಬಾದಾಮಿಯ ಜನ ತಮ್ಮ ಮೇಲೆ ನಂಬಿಕೆ ಇಟ್ಟು 2018 ರಲ್ಲಿ ವಿಧಾನಸೌಧಕ್ಕೆ ಕಳುಹಿಸಿದರು ಎಂದು ಹೇಳಿದರು.
ಪಕ್ಷದಲ್ಲಿ ಶಿಸ್ತು ಇರಬೇಕು. ಶಿಸ್ತು ಇಲ್ಲದ ಪಕ್ಷ ಬಲಯುವತವಾಗಿ ಬೆಳೆಯಲು ಸಾಧ್ಯವಿಲ್ಲ. ಪಕ್ಷದಲ್ಲಿ ಶಿಸ್ತು ಇಲ್ಲದೆ ಇದ್ದರೆ ಒಬ್ಬರ ಕಾಲನ್ನು ಮತ್ತೊಬ್ಬರು ಎಳೆಯುತ್ತಾರೆ. ನನ್ನ ಮೇಲಿನ ಅಭಿಮಾನಕ್ಕೆ ಚಾಮುಂಡೇಶ್ವರಿ ಸ್ಪರ್ಧೆಗೆ ಮರಿಗೌಡ ಆಹ್ವಾನ ನೀಡಿದರು. ಅದಕ್ಕೆ ಬಸವರಾಜು ಹಾಗೂ ಇತರರು ವಿರೋಧ ವ್ಯಕ್ತಪಡಿಸಿದರು. ಇಬ್ಬರ ಅಭಿಪ್ರಾಯ ಕೂಡ ಸರಿ ಇದೆ. ಇಬ್ಬರೂ ನನ್ನ ಮೇಲಿನ ಅಭಿಮಾನಕ್ಕೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…