ಹಾಸನ: ಬಿಜೆಪಿ ಜತೆ ಜೆಡಿಎಸ್ ವಿಲೀನ ಮಾತು ಸುಳ್ಳು ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರೇವಣ್ಣ, ಎರಡು ರಾಷ್ಟ್ರೀಯ ಪಕ್ಷಗಳಿಗೆ ಜೆಡಿಎಸ್ ಮುಗಿಸುವುದು ಒಂದೇ ಗುರಿಯಾಗಿದೆ. ಇದೇ ಕಾರಣಕ್ಕೆ ಜೆಡಿಎಸ್ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಈ ರೀತಿ ಸುಳ್ಳು ಸುದ್ದಿ ಹರಡುವುದು ತಪ್ಪು. ಗ್ರಾ.ಪಂ.ಚುನಾವಣೆ ಸಂದರ್ಭದಲ್ಲಿ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ.
ಅರವಿಂದ ಲಿಂಬಾವಳಿ ಒಬ್ಬ ಥರ್ಡ್ ಕ್ಲಾಸ್ ಇಂಥವರಿಂದಲೇ ಅವರ ಪಕ್ಷ ಸರ್ವನಾಶವಾಗಲಿದೆ. ಪಕ್ಷದ ಇತರೆ ನಾಯಕರು ಅವರಿಗೆ ಬುದ್ಧಿವಾದ ಹೇಳಲಿ ಎಂದು ಎಂದು ಎಚ್‌ಡಿ ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ಅರವಿಂದ ಲಿಂಬಾವಳಿ ಕೂಡಲೇ ಕ್ಷಮೆಯಾಚನೆ ಮಾಡುವಂತೆ ರೇವಣ್ಣ ಒತ್ತಾಯಿಸಿದರು. ಬಿಜೆಪಿ ಅಥವಾ ಕಾಂಗ್ರೆಸ್ ಜೊತೆ ಹೊಂದಾಣಿಕೆ ಪ್ರಶ್ನೆ ಇಲ್ಲ. ಹಾಗಾದರೆ ನಾನು ರಾಜಕೀಯದಿಂದ ನಿವೃತ್ತಿ ಹೊಂದುವೆ.
ಈ ಸಂಬಂಧ ಈಗಾಗಲೇ ದೇವೇಗೌಡರು, ಕುಮಾರಸ್ವಾಮಿ ಜೊತೆ ಮಾತನಾಡಿದ್ದೇನೆ. 2023ರಲ್ಲಿ ನಮ್ಮ ಶಕ್ತಿ ಏನು ಎಂಬುದನ್ನು ತೋರಿಸುತ್ತೇವೆ. ನಮ್ಮ ಪಕ್ಷ ಅಧಿಕಾರಕ್ಕೆ ತರಲು ಎಲ್ಲರೂ ಶ್ರಮಿಸುತ್ತೇವೆ ಎಂದು ಇದೆ ವೇಳೆ ತಿಳಿಸಿದರು. ನಾನು ಜಿಲ್ಲೆ ಬಿಟ್ಟು ಹೋಗಿರಲಿಲ್ಲ, ಇನ್ನು ಮುಂದೆ ಎಲ್ಲೆಡೆ ಹೋಗುವೆ. ಸಂಕ್ರಾಂತಿ ನಂತರ ಎಲ್ಲರ ಜೊತೆ ಈ ಕುರಿತು ಮಾತನಾಡುತ್ತೇವೆ. ಬಿಜೆಪಿ ಸರ್ಕಾರ ಬಂದರ ನಂತರ ಎಲ್ಲಾ ಅಭಿವೃದ್ಧಿ ಕಾಮಗಾರಿ ನಿಲ್ಲಿಸಿದ್ದಾರೆ. ಕಾಮಗಾರಿ ಎಲ್ ಒ ಸಿ ಪಡೆಯಲು ಕಮಿಷನ್ ಕೊಡಬೇಕು.
ಸರಕಾರದಲ್ಲಿ ಲೂಟಿ ನಡೆಯುತ್ತಿದೆ. ಜಿಲ್ಲೆಯ ಎಲ್ಲಾ ಕೆಲಸಗಳನ್ನು ತಡೆ ಹಿಡಿಯಲಾಗುತ್ತಿದೆ. ಹೀಗೆ ಮಾಡುವುದರಿಂದ ನಾವು ಹೆದರಿಕೊಂಡು ಹೋಗಲ್ಲ ಎಂದು ರೇವಣ್ಣ ಗುಡುಗಿದರು. ದ್ವೇಷ ರಾಜಕಾರಣ ಅವರಿಗೇ ರಿವರ್ಸ್ ಆಗಲಿದೆ. ನಾನು ಹಾಸನದಲ್ಲಿ ಬಿಜೆಪಿ ಶಾಸಕರಿದ್ದಾರೆ ಅಂತ ಹಣ ಕೊಡದೇ ಇರಲಿಲ್ಲ.ಕಷ್ಟ ಕಾಲದಲ್ಲಿ ಈ ಪಕ್ಷದಲ್ಲಿ ಅನೇಕರು ಆಶ್ರಯ ಪಡೆದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…