Featured

2023 ಹೊಸ ವರ್ಷಾಚರಣೆ: ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಂಗಳೂರು ಪೊಲೀಸ್ ಆಯುಕ್ತರ ನಿರ್ದೇಶನ – Vishwanews24

ಹೊಸ ವರ್ಷಾಚರಣೆ ನಡೆಸಲು ಅನುಮತಿ ಪಡೆದುಕೊಳ್ಳುವುದು ಕಡ್ಡಾಯ

ರಾತ್ರಿ 10 ಗಂಟೆಯೊಳಗೆ ಧ್ವನಿವರ್ಧಕ ಮೈಕ್ ಬಂದ್‌

ಕಮಿಷನರ್ ಶಶಿಕುಮಾರ್ ಖಡಕ್ ವಾರ್ನಿಂಗ್

ಮಂಗಳೂರು: ಮಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 2023ರ ಹೊಸ ವರ್ಷಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ, ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳಿಗೆ ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್‌ ಅವರು ನಿರ್ದೇಶಿಸಿದ್ದಾರೆ.

ಹೊಸ ವರ್ಷಾಚರಣೆಯ ಸಂತೋಷ ಕೂಟಗಳನ್ನು ನಡೆಸುವ ನಗರದ ಎಲ್ಲಾ ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳ ಮಾಲಕರು, ವ್ಯವಸ್ಥಾಪಕರು, ಆಡಳಿತ ವರ್ಗದವರು ಈ ಬಗ್ಗೆ ಕಡ್ಡಾಯವಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಅರ್ಜಿ ಸಲ್ಲಿಸಿ ಪೂರ್ವಾನುಮತಿ ಪಡೆದುಕೊಳ್ಳಬೇಕು.

ಡಿಸೆಂಬರ್ 31ರ ರಾತ್ರಿ ಆರಂಭವಾಗುವ ಹೊಸ ವರ್ಷಾಚರಣೆಯ ಸಂತೋಷ ಕೂಟಗಳನ್ನು ನಡೆಸಲು ಡಿಸೆಂಬರ್ 15ರ ಸಂಜೆ 5ಗಂಟೆಯೊಳಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ವರ್ಷಾಚರಣೆ ಆಚರಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.

ಕಾರ್ಯಕ್ರಮಗಳ ಧ್ವನಿವರ್ಧಕವನ್ನು ರಾತ್ರಿ 10 ಗಂಟೆಯೊಳಗೆ ಒಳಾವರಣದಲ್ಲಿ ಮಾತ್ರ ಮುಕ್ತಾಯಗೊಳಿಸಬೇಕು ಎಂದು ತಿಳಿಸಿದ್ದಾರೆ. ಅಲ್ಲದೆ ಮದ್ಯವಿತರಣೆಗೆ ಅಬಕಾರಿಯಿಂದ ಅನುಮತಿ, ವಿದ್ಯಾರ್ಥಿಗಳಿಗೆ ಮದ್ಯಪಾನ ನಿಷೇಧ, ಬೈಕ ವೀಲಿಂಗ್ , ಹೆಣ್ಣುಮಕ್ಕಳನ್ನು, ಮಹಿಳೆಯರನ್ನು ಚುಡಾಯಿಸುವುದು, ಪಾರ್ಕಿಂಗ್ ವ್ಯವಸ್ಥೆ, ಹೊಸ ವರ್ಷಾಚರಣೆ ಸಂದರ್ಭ ಸಾಂಸ್ಕೃತಿಕ ಕಾರ್ಯಕ್ರಮಗಳ ನೆಪದಲ್ಲಿ ಅಶ್ಲೀಲ, ಅರೆಬೆತ್ತಲೆ ಅಥವಾ ಅಶ್ಲೀಲ ನೃತ್ಯ, ಜೂಜಾಟ ನಡೆಸುವುದನ್ನು ನಿಷೇಧಿಸಲಾಗಿದೆ.

ಹೊಸ ವರ್ಷಾಚರಣೆಯ ಕಾರ್ಯಕ್ರಮಗಳನ್ನು ಆಯೋಜಿಸುವವರು ತುರ್ತು ಪರಿಸ್ಥಿತಿಯನ್ನು ಎದುರಿಸಲು ಅಗ್ನಿಶಾಮಕ ಉಪಕರಣಗಳು, ತುರ್ತು ಚಿಕಿತ್ಸಾ ವಾಹನ ಹಾಗೂ ಇತರ ಮುಂಜಾಗ್ರತಾ ಕ್ರಮ ವಹಿಸಬೇಕು.

ಯಾವುದೇ ರೀತಿಯ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾದಲ್ಲಿ ವ್ಯವಸ್ಥಾಪಕರನ್ನೇ ಹೊಣೆಗಾರರನ್ನಾಗಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಎಚ್ಚರಿಸಿದ್ದಾರೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 day ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

1 day ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

1 day ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 day ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago