Featured

2024ರಲ್ಲಿ ಬಿಜೆಪಿ ಪಕ್ಷ ಮತ್ತೆ ಪುನಃ ಹೆಚ್ಚಿನ ಸ್ಥಾನಗಳೊಂದಿಗೆ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದೇಯಾದರೆ ಸಂವಿಧಾನಕ್ಕೆ ಆಪತ್ತು ನಿಶ್ಚಿತ : ಮಲ್ಲಿಕಾರ್ಜುನ ಖರ್ಗೆ – Vishwanews24

2024ರಲ್ಲಿ ಬಿಜೆಪಿ ಪಕ್ಷ ಮತ್ತೆ ಪುನಃ ಹೆಚ್ಚಿನ ಸ್ಥಾನಗಳೊಂದಿಗೆ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದೇಯಾದರೆ ಸಂವಿಧಾನಕ್ಕೆ ಆಪತ್ತು ನಿಶ್ಚಿತ : ಮಲ್ಲಿಕಾರ್ಜುನ ಖರ್ಗೆ – Vishwanews24

ಕಲಬುರಗಿ : ಮುಂಬರುವ 2024 ರ ಸಂಸತ್‌ ಚುನಾವಣೆಯಲ್ಲಿ ಈ ದೇಶದಲ್ಲಿ ಬಿಜೆಪಿಯೇ ಮತ್ತೆ ಅಧಿಕಾರಕ್ಕೆ ಬಂದಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಸಂವಿಧಾನಕ್ಕೆ ವಿಪತ್ತು ಕಾದಿದೆ ಎಂದು ರಾಜ್ಯಸಭೆ ಪ್ರತಿಪಕ್ಷ ನಾಯಕ ಡಾ. ಮಲ್ಲಿಕಾರ್ಜುನ ಖರ್ಗೆ ಆತಂಕ ಹೊರಹಾಕಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗಾಳಿಗೆ ತೂರುತ್ತಿರುವ ಬಿಜೆಪಿ ಕೇಂದ್ರದಲ್ಲಿ ಮನ ಬಂದಂತೆ ಅಧಿಕಾರ ಮಾಡುತ್ತಿದೆ. ಇದೇ ಪಕ್ಷ ಮತ್ತೆ ಪುನಃ ಹೆಚ್ಚಿನ ಸ್ಥಾನಗಳೊಂದಿಗೆ, 2024ರಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದೇಯಾದರೆ ಸಂವಿಧಾನಕ್ಕೆ ಆಪತ್ತು ನಿಶ್ಚಿತ ಎಂದರು.

ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಾಯಿಸುವ ಎಲ್ಲ ಪ್ರಯತ್ನ ಬಿಜೆಪಿ ಹೊಂದಿದೆ. ಹೀಗಾಗಿ ಸಂವಿಧಾನ ಬದಲಾಯಿಸುವುದನ್ನು ತಪ್ಪಿಸಲು ಜನರು ಈಗಲಾದರೂ ಎಚ್ಚೆತ್ತುಕೊಳ್ಳುವುದು ಅಗತ್ಯವಾಗಿದೆ ಎಂದು ಖರ್ಗೆ ಹೇಳಿದರು.

ಬಲವಂತದ ಮತಾಂತರ ತಡೆಯಲು ಈಗಾಗಲೇ ಭಾರತೀಯ ದಂಡ ಸಂಹಿತೆಯಡಿ ಕ್ರಮ ಕೈಗೊಳ್ಳಲು ಅವಕಾಶವಿದೆ. ಇಷ್ಟಿದ್ದರೂ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ ಜಾರಿಗೆ ತರುತ್ತಿರುವುದನ್ನು ನೋಡಿದರೆ ಬಿಜೆಪಿ ತನ್ನ ಅಜೆಂಡಾ ಹೇಗಾದರೂ ಮಾಡಿ ಕಾರ್ಯರೂಪಕ್ಕೆ ತಂದೇ ತರುತ್ತೇವೆ ಎಂಬುದಕ್ಕೆ ಸಾಕ್ಷೀಕರಿಸುವಂತಿದೆ ಎಂದು ಟೀಕಿಸಿದರು.

 

Vishwa News 24

Recent Posts

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…

5 hours ago

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು – vishwanews24

ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…

11 hours ago

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ – vishwanews24

ಕೃಷಿ ಸಾಲ‌ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…

13 hours ago

ಮಂಗಳೂರು: ಯುವತಿ ನಾಪತ್ತೆ ; ಪೋಲಿಸರಿಂದ ಪತ್ತೆಗೆ ಮನವಿ – vishwanews24

ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…

13 hours ago

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ – vishwanews24

ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…

13 hours ago

ಮುಂಬೈ : ಭಾರೀ ಮಳೆ – ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು – vishwanews24

ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…

13 hours ago