Featured

2024ರ ಚುನಾವಣೆಯಲ್ಲೂ ನರೇಂದ್ರ ಮೋದಿ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ :ಅಮಿತ್ ಶಾ ಘೋಷಣೆ – Vishwanews24

2024ರ ಚುನಾವಣೆಯಲ್ಲೂ ನರೇಂದ್ರ ಮೋದಿ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ : ಅಮಿತ್ ಶಾ ಘೋಷಣೆ

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಪಾಟ್ನಾದಲ್ಲಿ ವಿವಿಧ ಬಿಜೆಪಿ ಮೋರ್ಚಾಗಳ ಎರಡು ದಿನಗಳ ಜಂಟಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ, ‘2024ರಲ್ಲಿ ಬಿಜೆಪಿ-ಜೆಡಿಯು ಒಟ್ಟಾಗಿ ಚುನಾವಣೆಯಲ್ಲಿ ಸ್ಪರ್ಧಿಸಲಿವೆ, ನರೇಂದ್ರ ಮೋದಿ ಬಿಜೆಪಿಯ ಪ್ರಧಾನಿ ಅಭ್ಯರ್ಥಿಯಾಗಲಿದ್ದಾರೆ’ ಎಂದು ಹೇಳಿದರು.

2024ರ ಲೋಕಸಭಾ ಚುನಾವಣೆಗೆ, ಪ್ರಧಾನಿ ಅಭ್ಯರ್ಥಿಗಳ ಚರ್ಚೆ ಯಾವಾಗಲೂ ಬಿಸಿ ವಿಷಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯದಿಂದ ನಿವೃತ್ತರಾಗುವ ಬಗ್ಗೆ ಮತ್ತು ಹೊಸ ಮುಖಗಳ ಪಟ್ಟಾಭಿಷೇಕದ ಬಗ್ಗೆ ಆಗಾಗ್ಗೆ ಊಹಾಪೋಹಗಳಿವೆ. ಆದ್ರೆ, ಕೇಂದ್ರ ಸಚಿವ ಮತ್ತು ಬಿಜೆಪಿ ಮಾಜಿ ಅಧ್ಯಕ್ಷ ಅಮಿತ್ ಶಾ ಅವರು 2024ರಲ್ಲಿ ನರೇಂದ್ರ ಮೋದಿಯವರನ್ನು ಬಿಜೆಪಿಯ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವ ಮೂಲಕ ರಹಸ್ಯವನ್ನ ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ : ಜ್ಞಾನವಾಪಿ ಪ್ರಕರಣದಲ್ಲಿ ಮುಸ್ಲಿಂ ಪರ ವಾದಿಸುತ್ತಿದ್ದ ವಕೀಲ ಯಾದವ್ ಹೃದಯಾಘಾತದಿಂದ​ ನಿಧನ – Vishwanews24 

Vishwa News 24

Recent Posts

ರಾಮಮಂದಿರ ದೇಣಿಗೆ ಅವ್ಯವಹಾರ: SIT ತನಿಖೆ ನಡೆಸುತ್ತಿರುವುದು ಸ್ವಾಗತಾರ್ಹ : ಪೇಜಾವರ ಶ್ರೀ – vishwanews24

ರಾಮ ಮಂದಿರದಲ್ಲಿ ಅವ್ಯವಹಾರದಂತಹ ಘೋರ ಅಪಚಾರಗಳು ನಡೆಯಬಾರದಿತ್ತು.. ಮಂದಿರದ ಅವ್ಯವಹಾರ ಆರೋಪಗಳು ಸತ್ಯವಾಗಿದ್ದರೆ, ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲೇಬೇಕು : ಪೇಜಾವರ…

6 minutes ago

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ – vishwanews24

ಪರ್ಕಳ: ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಪಲ್ಟಿ: ತಪ್ಪಿದ ದುರಂತ ಮಣಿಪಾಲ: ಪರ್ಕಳದ ಕೆಳಪರ್ಕಕಳ ಹೆದ್ದಾರಿಯಲ್ಲಿ ಕೆನರಾ ಬ್ಯಾಂಕಿನ ತಿರುವಿನಲ್ಲಿ ಕಂಟೇನರ್…

23 minutes ago

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ – vishwanews24

ಉಡುಪಿ: ಮೂವರು ರೌಡಿ ಶೀಟರ್‌ಗಳ ಗಡಿಪಾರು : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆದೇಶ ಉಡುಪಿ: ಉಡುಪಿ ಜಿಲ್ಲೆಯ ವಿವಿಧ ಪೊಲೀಸ್…

36 minutes ago

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

19 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

20 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

20 hours ago