Featured

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಶಿ ತರೂರ್‌ನ್ನು ಪರಾಭವಗೊಳಿಸುತ್ತೇನೆ : ಶ್ರೀಶಾಂತ್ -Vishwanews24

ನವದೆಹಲಿ: 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ತಿರುವನಂತಪುರಂ ಚುನಾವಣಾ ಕ್ಷೇತ್ರದಲ್ಲಿ ಸ್ಪರ್ಧಿಸಿ ಕಾಂಗ್ರೆಸ್ ಸಂಸದ ಶಶಿ ತರೂರ್‌ನ್ನು ಪರಾಭವಗೊಳಿಸುತ್ತೇನೆ ಎಂದು ಕ್ರಿಕೆಟಿಗ ಎಸ್.ಶ್ರೀಶಾಂತ್ ಹೇಳಿದ್ದಾರೆ.

ನಾನು ಅವರ ದೊಡ್ಡ ಅಭಿಮಾನಿ. ಅವರು  ನನ್ನ ಪರವಾಗಿ ನಿಂತಿದ್ದರು. ಆದರೆ ತಿರುವನಂತಪುರಂನಲ್ಲಿ ನಾನು ಚುನಾವಣೆ ಸ್ಪರ್ಧಿಸಿ ಅವರನ್ನು ಪರಾಭವಗೊಳಿಸುವೆ. ಈ ಬಗ್ಗೆ ಯಾವುದೇ ಸಂದೇಹ ಬೇಡ ಎಂದು ಶ್ರೀಶಾಂತ್,  ದಿ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

2013ರ ಐಪಿಎಲ್ ಪಂದ್ಯದಲ್ಲಿ ಸ್ಪಾಟ್ ಫಿಕ್ಸಿಂಗ್ ಮಾಡಿದ್ದಾರೆ ಎಂಬ ಆರೋಪದಡಿಯಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಅಜಿತ್ ಚಂಡೀಲಾ, ಅಂಕಿತ್ ಚವಾಣ್ ಮತ್ತು ಶ್ರೀಶಾಂತ್‌ಗೆ ಬಿಸಿಸಿಐ ನಿಷೇಧ ಹೇರಿತ್ತು.

2019 ಮಾರ್ಚ್ 15ರಂದು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆ ನಡೆದಿದ್ದು ಪಂದ್ಯಗಳಿಂದ ನಿಷೇಧ ಕಾಲಾವಧಿಯನ್ನು ಏಳು ವರ್ಷಕ್ಕೆ ಇಳಿಸಿತ್ತು. ಹಾಗಾಗಿ ಶ್ರೀಶಾಂತ್ ಮುಂದಿನ ವರ್ಷ ಆಡಬಹುದಾಗಿದೆ.

2016 ಮಾರ್ಚ್‌ನಲ್ಲಿ  ಬಿಜೆಪಿ ಸೇರಿದ ಶ್ರೀಶಾಂತ್, ಕೇರಳದ ವಿಧಾನಸಭಾ ಚುನಾವಣೆಯಲ್ಲಿ ತಿರುವನಂತಪುರಂನಲ್ಲಿ ಸ್ಪರ್ಧಿಸಿ ಪರಾಭವಗೊಂಡಿದ್ದರು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

7 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

7 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

8 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

8 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

9 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

10 hours ago