2024 ಸಂಕ್ರಾಂತಿ ವೇಳೆಗೆ ಅಯೋಧ್ಯೆಯ ರಾಮ ಮಂದಿರ ಪೂರ್ಣ: ಶ್ರೀ ವಿಶ್ವ ಪ್ರಸನ್ನತೀರ್ಥ  – Vishwanews24

Featured, ರಾಜ್ಯ ನ್ಯೂಸ್

2024 ಸಂಕ್ರಾಂತಿ ವೇಳೆಗೆ ಅಯೋಧ್ಯೆಯ ರಾಮ ಮಂದಿರ ಪೂರ್ಣ: ಶ್ರೀ ವಿಶ್ವ ಪ್ರಸನ್ನತೀರ್ಥ 

ಮಂಡ್ಯ : ಅಯೋಧ್ಯೆಯ ರಾಮ ಮಂದಿರ ನಿರ್ಮಾಣದ ಪ್ರತಿಷ್ಠಾಪನಾ ಮಹೋತ್ಸವ 2024ರ ಮಕರ ಸಂಕ್ರಾಂತಿ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ರಾಮ ಜನ್ಮಭೂಮಿ ಟ್ರಸ್ಟ್ ನ ಟ್ರಸ್ಟಿಗಳಾದ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಗಳು ಸೋಮವಾರ ಹೇಳಿದರು.

ಮದ್ದೂರು ಪಟ್ಟಣದ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯ ದೇಗುಲದಲ್ಲಿ ನಡೆದ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

ಅಯೋಧ್ಯೆಯ ರಾಮ ಮಂದಿರ ಪ್ರತಿಷ್ಠಾಪನಾ ಮಹೋತ್ಸವದ ಮುನ್ನ ನಿಧಿ ಸಂಗ್ರಹಣದ ಅವಶ್ಯಕತೆ ಇದೆ. ಹೀಗಾಗಿ ನಿಧಿ ಸಂಗ್ರಹಣಕ್ಕಾಗಿ ದೇಶಾದ್ಯಂತ ರಥಯಾತ್ರೆ ಹಮ್ಮಿಕೊಳ್ಳಲಾಗುವುದು ಎಂದರು.

ರಥಯಾತ್ರೆ ವೇಳೆ ಭಗವತ್ ಭಕ್ತರನ್ನು ಪ್ರತಿಷ್ಟಾಪನ ಮಹೋತ್ಸವಕ್ಕೆ ಆಹ್ವಾನಿಸಲಾಗುವುದು. ಎಲ್ಲಾ ಭಕ್ತರು ಮಹೋತ್ಸವದಲ್ಲಿ ಪಾಲ್ಗೊಳ್ಳುವ ಅವಕಾಶ ನೀಡುವ ಉದ್ದೇಶದಿಂದ ಒಂದು ತಿಂಗಳ ಕಾಲ ಕಾರ್ಯಕ್ರಮ ನಡೆಸುವ ಆಲೋಚನೆ ಇದೆ.

ದುಬೈ : ಶಿಕ್ಷಣಕ್ಕೆ ತೆರಳಿದ್ದ ಕಾಪು ಮೂಲದ ವಿದ್ಯಾರ್ಥಿ ಅನಾರೋಗ್ಯದಿಂದ ಮೃತ್ಯು – Vishwanews24

ಅಯೋಧ್ಯೆಯ ಮಂದಿರ ನಿರ್ಮಾಣಕ್ಕೆ ಬೇಕಾದ ವ್ಯವಸ್ಥೆ ಮಾಡಿಕೊಳ್ಳಿ ಎಂದು ಸರ್ವೋಚ್ಚ ನ್ಯಾಯಾಲಯ ಸೂಚಿಸಿದೆ. ಸರ್ಕಾರದ ಬೊಕ್ಕಸದಿಂದ ಮಂದಿರ ನಿರ್ಮಾಣವಾಗಬಾರದು. ಭಕ್ತರ ದೇಣಿಗೆಯಿಂದ ನಿರ್ಮಾಣವಾಗಬೇಕು ಎಂದು 3 ಸಾವಿರ ಕೋಟಿ ನಿಧಿ ಸಂಗ್ರಹಕ್ಕೆ ತೀರ್ಮಾನ ಕೈಗೊಳ್ಳಲಾಗಿದ್ದು, ಭಕ್ತರ ಮನೆಯಿಂದ ಕನಿಷ್ಠ 100 ರೂ ದೇಣಿಗೆ ಸಂಗ್ರಹಿಸುವುದು ನಮ್ಮ ಆಶಯವಾಗಿದೆ ಎಂದು ಶ್ರೀಗಳು ತಿಳಿಸಿದರು.

ರಾಮ ಮಂದಿರ ನಿರ್ಮಾಣ ಕೇವಲ ನಮ್ಮ ಕನಸಲ್ಲ ಇಡೀ ದೇಶದ ರಾಮ ಭಕ್ತರ ಕನಸಾಗ ಬೇಕು. ಗೋ ಸಾಗಾಣಿಕೆ ಸಹಿತ ವಿವಿಧ ಸಾಮಾಜಿಕ ಕಾರ್ಯಗಳನ್ನು ರಾಮ ಮಂದಿರ ನಿರ್ಮಾಣದ ಬಳಿಕ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯ ವ್ಯಾಪಾರ ಮಾಡುವುದನ್ನು ನಿಷೇಧ ಮಾಡಲಾಗಿದೆ. ಇದೇ ರೀತಿ ಉಡುಪಿಯಲ್ಲೂ ಇಂತಹ ವ್ಯವಸ್ಥೆ ಜಾರಿಗೊಳಿಸುತ್ತಿರ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ವಿಶ್ವ ಪ್ರಸನ್ನ ತೀರ್ಥರು ಈ ವಿಚಾರ ಪ್ರಸ್ತಾಪವಾದಾಗ ಕಾನೂನು ಪರಿಣಿತರಿಂದ ಸಲಹೆ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇನ್ನು ಹನುಮ ಜಯಂತಿ ನಿಮಿತ್ತ ಪುರಾಣ ಪ್ರಸಿದ್ಧ ಶ್ರೀ ಹೊಳೆ ಆಂಜನೇಯ ಸ್ವಾಮಿ ದೇವಾಲಯ ಸೇರಿದಂತೆ ವಿವಿಧ ಹನುಮ ದೇವಾಲಯಗಳಲ್ಲಿ ಸೋಮವಾರ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು.

ಹೊಳೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಮುಖ್ಯ ಪ್ರಾಣ ದೇವರಿಗೆ ಮುಂಜಾನೆ ಪಂಚಾಮೃತ, ಮದು ಅಭಿಷೇಕದ ನಂತರ ವಿಶೇಷ ಪುಷ್ಪಾಲಂಕಾರ ಸೇವೆಯ ನಂತರ ಮಹಾ ಮಂಗಳಾರತಿ ನೆರವೇರಿಸಲಾಯಿತು.

ಬೆಳಿಗ್ಗೆ 11 ಗಂಟೆಗೆ ಸುಮಾರಿಗೆ ಸೀತಾ ರಾಮ ಲಕ್ಷ್ಮಣ ಸಮೇತ ಆಂಜನೇಯ ಉತ್ಸವ ಮೂರ್ತಿಗಳನ್ನು ರಥದಲ್ಲಿ ಪ್ರತಿಪ್ಟಾಪನೆ ಮಾಡಿ ದೇಗುಲದ ಪ್ರಾಂಗಣದಲ್ಲಿ ರಥೋತ್ಸವವನ್ನು ವಿಜ್ರಂಭಣೆಯಿಂದ ನೆರವೇರಿಸಲಾಯಿತು.

ದುಬೈ : ಶಿಕ್ಷಣಕ್ಕೆ ತೆರಳಿದ್ದ ಕಾಪು ಮೂಲದ ವಿದ್ಯಾರ್ಥಿ ಅನಾರೋಗ್ಯದಿಂದ ಮೃತ್ಯು – Vishwanews24

ಮುಜರಾಯಿ ಇಲಾಖೆ ಪರವಾಗಿ ತಹಶೀಲ್ದಾರ್ ಟಿ.ಎನ್.ನರಸಿಂಹಮೂರ್ತಿ ಪ್ರಥಮ ಪೂಜೆ ಸಲ್ಲಿಸುವುದರೊಂದಿಗೆ ರಥೋತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಿದರು.

ಹೈಕೋರ್ಟ್ ನ ನ್ಯಾಯಮೂರ್ತಿ ಇಂದ್ರೇಶ್, ಶಾಸಕ ಡಿ.ಸಿ.ತಮ್ಮಣ್ಣ, ಮನ್ ಮುಲ್ ಮಾಜಿ ಅಧ್ಯಕ್ಷ ಕದಲೂರು ರಾಮಕೃಷ್ಣ, ರಾಜ್ಯ ಹಾಲು ಪ್ರಕೋಷ್ಟದ ಸಂಚಾಲಕಿ ರೂಪ, ಮನ್ ಮುಲ್ ವ್ಯವಸ್ಥಾಪಕ ನಿರ್ದೇಶಕ ಡಾ.ಮಂಜೇಶ್, ಆರ್.ಕೆ.ವಿದ್ಯಾಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ವಿನಯ್ ರಾಮಕೃಷ್ಣ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು, ಕನ್ನಡ ಪರ ಸಂಘಟನೆಗಳು ಮುಖಂಡರು ಹಾಗೂ ಮಂಡ್ಯ ಸೇರಿದಂತೆ ನೆರೆ ಜಿಲ್ಲೆಗಳಿಂದ ಆಗಮಿಸಿದ್ದ ಅಸಂಖ್ಯಾತ ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡು ಧನ್ಯತಾ ಭಾವ ಮೆರೆದರು.

ದೇಗುಲದ ಪ್ರಧಾನ ಅರ್ಚಕ ಪ್ರದೀಪಾಚಾರ್ಯ, ಸಹಾಯಕ ಸುರೇಶ್ ಆಚಾರ್ಯ, ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್, ಮನ್ ಮುಲ್ ನಿರ್ದೇಶಕಿ ರೂಪಾ ಮತ್ತಿತ್ತರರು ಇದ್ದರು.

Leave a Reply