Featured

2025ನೇ ಸಾಲಿನ ಶ್ರೀ ಶಿವಕುಮಾರ ಪ್ರಶಸ್ತಿಗೆ ಹಿರಿಯ ಕಲಾವಿದೆ ಉಮಾಶ್ರೀ ಆಯ್ಕೆ – vishwanews24

2025ನೇ ಸಾಲಿನ `ಶ್ರೀ ಶಿವಕುಮಾರ ಪ್ರಶಸ್ತಿ’ಗೆ ಹಿರಿಯ ಕಲಾವಿದೆ ಉಮಾಶ್ರೀ ಆಯ್ಕೆ

ಹೊಸದುರ್ಗ: ತಾಲೂಕಿನ ಸಾಣೇಹಳ್ಳಿ ಶ್ರೀ ಶಿವಕುಮಾರ ಕಲಾಸಂಘ ರಂಗಭೂಮಿಗೆ ಸಲ್ಲಿಸಿದ ಜೀವಮಾನದ ಕೊಡುಗೆಯನ್ನು ಮನ್ನಿಸಿ ಪ್ರತಿವರ್ಷ ಕೊಡಮಾಡುವ ಪ್ರತಿಷ್ಠಿತ `ಶ್ರೀ ಶಿವಕುಮಾರ ಪ್ರಶಸ್ತಿ’ಗೆ ಈ ಬಾರಿ ಬೆಂಗಳೂರಿನ ಕನ್ನಡ ರಂಗಭೂಮಿ ಮತ್ತು ಚಲನಚಿತ್ರರಂಗದ ಪ್ರತಿಭಾನ್ವಿತ ಅಭಿನೇತ್ರಿ, ರಂಗಭೂಮಿಯ ತಾಜಾ ಪ್ರತಿಭೆ, ಹಿರಿಯ ಕಲಾವಿದೆ ಉಮಾಶ್ರೀ ಅವರನ್ನು ಆಯ್ಕೆ ಮಾಡಿದೆ ಎಂದು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಯವರು ತಿಳಿಸಿದ್ದಾರೆ.

2004 ರಿಂದ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮಿಗಳವರ ಹೆಸರಿನಲ್ಲಿ `ಶ್ರೀ ಶಿವಕುಮಾರ ಪ್ರಶಸ್ತಿ’ಯನ್ನು ನಮ್ಮ ಕಲಾಸಂಘವು ಕೊಡುತ್ತಾ ಬಂದಿದೆ. ರಂಗಭೂಮಿ ಮತ್ತು ರಂಗಚಟುವಟಿಕೆಗಳಲ್ಲಿ ಮಹತ್ವದ ಸಾಧನೆ ಮಾಡಿದ ಸಾಧಕರಿಗೆ ಲಿಂಗಭೇದವಿಲ್ಲದೆ ಈ ಪ್ರಶಸ್ತಿಯನ್ನು ನೀಡುತ್ತಾ ಬರಲಾಗಿದೆ.

ಇದುವರೆಗೂ ಪ್ರಸನ್ನ(2004), ಸಿಜಿಕೆ(2005), ಪಿ ಜಿ ಗಂಗಾಧರಸ್ವಾಮಿ(2006), ಅಶೋಕ ಬಾದರದಿನ್ನಿ(2007), ಮಾಲತಿಶ್ರೀ(2008), 2009ರಲ್ಲಿ ಅತಿವೃಷ್ಠಿ ಕಾರಣ ನೀಡಿಲ್ಲ. ಸಿ ಬಸವಲಿಂಗಯ್ಯ(2010), ಬಿ ಜಯಶ್ರೀ(2011), ಡಾ. ಕೆ ಮರುಳಸಿದ್ಧಪ್ಪ(2012), ಚಿದಂಬರರಾವ್ ಜಂಬೆ(2013), ಕೋಟಗಾನಹಳ್ಳಿ ರಾಮಯ್ಯ(2014), ಡಾ. ಸುಭದ್ರಮ್ಮ ಮನ್ಸೂರು (2015), ಲಕ್ಷ್ಮೀ ಚಂದ್ರಶೇಖರ್ (2016), ಶ್ರೀನಿವಾಸ ಜಿ ಕಪ್ಪಣ್ಣ (2017), ಬಸವರಾಜ ಬೆಂಗೇರಿ(2018), ಟಿ ಎಸ್ ನಾಗಾಭರಣ (2019), 2020ರಲ್ಲಿ ಕರೋನಾ ಕಾರಣದಿಂದ ನೀಡಿಲ್ಲ. ಕೆ ವಿ ನಾಗರಾಜಮೂರ್ತಿ (2021), ಡಾ. ಎಂ ಜಿ ಈಶ್ವರಪ್ಪ(2022), ಶಶಿಧರ ಅಡಪ (2023), ಮಹಾಂತೇಶ್ ಗಜೇಂದ್ರ ಗಡ (2024) ಇವರಿಗೆ ನೀಡುತ್ತಾ ಬರಲಾಗಿದೆ.

ಈ ವರ್ಷ ಈ ಪ್ರಶಸ್ತಿಗೆ ಭಾಜನರಾದವರು ರಂಗಭೂಮಿ ಮತ್ತು ಚಲನಚಿತ್ರರಂಗದ ಶ್ರೇಷ್ಠ ಕಲಾವಿದೆ ಉಮಾಶ್ರೀ ಅವರು.

ಆಯ್ಕೆ ಸಮಿತಿಯ ಮುಂದೆ ಹತ್ತಾರು ಪ್ರತಿಭಾವಂತ ಮತ್ತು ಅರ್ಹ ರಂಗಕರ್ಮಿಗಳ ಹೆಸರುಗಳಿದ್ದವು. ಪ್ರಶಸ್ತಿ ಒಂದೇ ಆಗಿರುವುದರಿಂದ ಅಂತಿಮವಾಗಿ ರಂಗಕ್ಷೇತ್ರ, ಚಲನಚಿತ್ರ ಕ್ಷೇತ್ರ ಮತ್ತು ರಾಜಕೀಯ ಕ್ಷೇತ್ರದಲ್ಲಿ ಕ್ರಿಯಾಶೀಲರಾಗಿ ಈಗಲೂ ತೊಡಗಿಕೊಂಡಿರುವ ಶ್ರೀಮತಿ ಉಮಾಶ್ರೀ ಅವರನ್ನು ಆಯ್ಕೆ ಮಾಡಿದೆ. ಇಂತಹ ಅಪರೂಪದ ರಂಗಕಲಾವಿದೆ `ಶ್ರೀ ಶಿವಕುಮಾರ ಪ್ರಶಸ್ತಿ’ಗೆ ಭಾಜನರಾಗಿರುವುದು ನಮಗೆ ತುಂಬಾ ಸಂತೋಷವಾಗಿದೆ ಎಂದು ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ಉಮಾಶ್ರೀ ಅವರನ್ನು ಅಭಿನಂದಿಸಿ ಸುದ್ದಿಯನ್ನು ಮಾಧ್ಯಮಗಳಿಗೆ ಬಿಡುಗೊಳಿಸಿದರು.

ಪ್ರಶಸ್ತಿಯು 50 ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿದ್ದು, ಪ್ರಶಸ್ತಿಯನ್ನು ಇದೇ ನವೆಂಬರ್ 2 ರಿಂದ 7 ರವರೆಗೆ ಸಾಣೇಹಳ್ಳಿಯಲ್ಲಿ ನಡೆಯುವ ರಾಷ್ಟ್ರೀಯ ನಾಟಕೋತ್ಸವ’ದ ಸಮಾರೋಪ ಸಮಾರಂಭದ ದಿನ ಪ್ರದಾನ ಮಾಡಲಾಗುವುದು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಿದರು.

Vishwa News 24

Recent Posts

ಉಡುಪಿ: ಮಹಾವೀರ ಜಯಂತಿ – ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  – vishwanews24

ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ  ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…

19 hours ago

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ – vishwanews24

ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ  ಮಾ.31ಕ್ಕೆ ಮುಂದೂಡಿಕೆ…

20 hours ago

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ – vishwanews24

1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…

20 hours ago

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ – vishwanews24

ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…

21 hours ago

ಬಂಟ್ವಾಳ: ಯುವತಿ ನಾಪತ್ತೆ ; ಪ್ರಕರಣ ದಾಖಲು – vishwanews24

ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…

21 hours ago

ಉಡುಪಿ : ಗ್ಯಾರಂಟಿ ಯೋಜನೆಗಳಿಂದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ – vishwanews24

 ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…

21 hours ago