ಬೆಂಗಳೂರು: ‘2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ’ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, 2028ಕ್ಕೆ ನಮ್ಮ ಸರ್ಕಾರ ಬರುವ ಕನಸು ಕಾಣಬೇಡಿ ಕೆಲಸ ಮಾಡಿ ಎಂಬ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತೀನ್ ನಬಿನ್ ಅವರು ರಾಜ್ಯ ನಾಯಕರಿಗೆ ಸೂಚನೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಅಮಿತ್ ಶಾ ಅವರು ಬಿಜೆಪಿಗೆ 122 ಸೀಟು ಬರುತ್ತದೆ, ಎಲ್ಲರೂ ಸೂಟುಬೂಟು ಸಿದ್ಧಮಾಡಿಕೊಳ್ಳಿ ಎಂದಿದ್ದರು. ನಾನು ನಮಗೆ 136 ಸೀಟು ಬರಲಿದೆ ಎಂದು ಹೇಳಿದ್ದೆ. ಈಗಲೂ ಹೇಳುತ್ತಿದ್ದೇನೆ ಬರೆದುಕೊಳ್ಳಿ, 2028ಕ್ಕೆ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ’ ಎಂದು ಬಲವಾಗಿ ಭವಿಷ್ಯ ನುಡಿದರು.
ಇದನ್ನೂ ಓದಿ:
ನೀವು ದೆಹಲಿ ಪ್ರವಾಸ ಮಾಡುತ್ತೀರಾ ಎಂಬ ಪ್ರಶ್ನೆಗೆ, ‘ನಮ್ಮನ್ನು ಕರೆದರೆ ಹೋಗುತ್ತೇವೆ. ಸುರ್ಜೆವಾಲ ಅವರು ನಿಮಗೆ ಏನು ಹೇಳಿದ್ದಾರೋ ಗೊತ್ತಿಲ್ಲ. ಅವರು ದೆಹಲಿಗೆ ಬನ್ನಿ ಎಂದರೆ ನಾನು ಹೋಗುತ್ತೇನೆ. ಇಲ್ಲವಾದರೆ ಇಲ್ಲೇ ಉಳಿಯುತ್ತೇನೆ. ಪಕ್ಷ ಕರೆದಾಗ ನಾವು ಹೋಗಲೇಬೇಕಾಗುತ್ತದೆ’ ಎಂದು ಉತ್ತರಿಸಿದರು.
ಫಲಾನುಭವಿಗಳಿಗೆ ಗ್ಯಾರಂಟಿ ತಲುಪುವಂತೆ ಪರಿಶೀಲನೆ: ಗ್ಯಾರಂಟಿ ಪರಿಷ್ಕರಣೆ ಮಾಡಲಾಗುವುದೇ ಎಂದು ಕೇಳಿದಾಗ, ‘ಕೆಲವು ಗ್ಯಾರಂಟಿ ಫಲಾನುಭವಿಗಳು ಮೃತಪಟ್ಟಿದ್ದು, ಸುಮಾರು 100 ಕೋಟಿಯಷ್ಟು ಹಣ ಬೇರೆಯವರಿಗೆ ಹೋಗಿ ದುರ್ಬಳಕೆಯಾಗಿದೆ. ಇನ್ನು ಬೇರೆಯವರ ದೂರವಾಣಿ ಸಂಖ್ಯೆ ಕೊಟ್ಟಿರುವುದರಿಂದ ಸರಿಯಾದ ಫಲಾನುಭವಿಗಳಿಗೆ ಯೋಜನೆ ತಲುಪುತ್ತಿದಯೇ, ಇಲ್ಲವೇ ಎಂದು ತಿಳಿಯಬೇಕಿದೆ. ಹೀಗಾಗಿ ಫಲಾನುಭವಿಗಳ ದಾಖಲೆ ಸಂಗ್ರಹಿಸುವ ಬಗ್ಗೆ ಚರ್ಚೆ ಮಾಡುವ ಬಗ್ಗೆ ಸಲಹೆ ಬಂದಿದೆ. ಪ್ರತಿ ತಾಲೂಕಿನಲ್ಲಿ ಇದನ್ನು ಪರಿಶೀಲನೆ ಮಾಡುತ್ತಿದ್ದೇವೆ’ ಎಂದು ತಿಳಿಸಿದರು.
ಇದನ್ನೂ ಓದಿ:
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…