Featured

2028ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ್ರೆ ಗೃಹಲಕ್ಷ್ಮಿ ಹಣ 4,000 ರೂ.ಗೆ ಏರಿಕೆ :  ಕುಣಿಗಲ್ ರಂಗನಾಥ್ – vishwanews24

2028ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ್ರೆ ಗೃಹಲಕ್ಷ್ಮಿ ಹಣ 4,000 ರೂ.ಗೆ ಏರಿಕೆ :  ಕುಣಿಗಲ್ ರಂಗನಾಥ್

ಬೆಂಗಳೂರು: 2028ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ 2,000 ರೂ. ಇರುವ ಗೃಹಲಕ್ಷ್ಮಿ ಹಣವನ್ನ 4,000 ರೂ.ಗೆ ಏರಿಸುತ್ತೇವೆ ಎಂದು ಶಾಸಕ ಕುಣಿಗಲ್ ರಂಗನಾಥ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಗ್ಯಾರಂಟಿ ಯೋಜನೆಗಳ ಕುರಿತು ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರು ಪದಗ್ರಹಣ ಮಾಡಿದ ದಿನವೇ ನಾನು ಹೇಗಾದರೂ ಬಡವರಿಗೆ ಸಹಾಯ ಮಾಡಬೇಕು ಎಂದು ಹೇಳಿದ್ದರು. ಗೃಹಲಕ್ಷ್ಮಿಯು ವಿಶೇಷವಾದ ಹಣಕಾಸು ಯೋಜನೆಯಾಗಿದೆ. ಇವತ್ತು ಬಹಳಷ್ಟು ಜನರು ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಾರೆ. 2,000 ರೂ ಏನಾಗುತ್ತೆ? 2,000ದಲ್ಲಿ ಏನು ಬದಲಾಗುತ್ತದೆ. ಈ ಬದಲಾವಣೆಯನ್ನು ನಾನು ಕಣ್ಣಾರೆ ನೋಡಿದ್ದೇನೆ ಎಂದು ಹೇಳಿದರು.

ಹಳ್ಳಿಯಲ್ಲಿ ಇರುವವರಿಗೆ ಇನ್ನೂ 5,000 ಮನೆಗಳನ್ನು ಕೊಡಿಸಬೇಕು ಎಂದು ನಾವು ಹೋರಾಟ ಮಾಡುತ್ತಿದ್ದೇವೆ. ಕೆಲವು ಕುಟುಂಬಗಳು ಗುಡಿಸಲಲ್ಲಿ ವಾಸಮಾಡುತ್ತಿದ್ದಾರೆ. 24,000 ಸಾವಿರ ರೂ. ಪ್ರತಿ ವರ್ಷ ಕೊಟ್ಟರೇ ಆ ಬದುಕಿನ ಬದಲಾವಣೆಯ ಬೆಳಕನ್ನು ನೋಡಬೇಕು ಅಂದರೆ ಬೆಂಗಳೂರಲ್ಲಿ ಇರೋರು ಬಂದು ನೋಡಬೇಕು ಎಂದರು.

ದಯವಿಟ್ಟು ಗ್ಯಾರಂಟಿ ಯೋಜನೆಯ ಗೃಹಲಕ್ಷ್ಮಿ ಬಗ್ಗೆ ಯಾರಾದರು ವಿರೋಧ ಮಾಡಿದರೆ ಆ ಶಾಪ ತಟ್ಟುತ್ತದೆ. ಇವತ್ತು ನಾನು ಚಾಲೆಂಜ್ ಹಾಕುತ್ತಿದ್ದೇನೆ. ಮುಂದಿನ ಸರ್ಕಾರ ಯಾವುದೇ ಬದಲಾವಣೆ ಆದರೂ ಯಾರೂ ಗ್ಯಾರೆಂಟಿ ಯೋಜನೆ ನಿಲ್ಲಸಲು ಆಗುವುದಿಲ್ಲ. ಮುಂದಿನ ಸಾಲಿನ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಪುನಃ ಅಧಿಕಾರಕ್ಕೆ ಬಂದರೆ 2,000 ರೂ. ಅನ್ನು 4,000 ರೂ.ಗೆ ಏರಿಕೆ ಮಾಡಲು ನಾವು ಸಿದ್ಧರಾಗುತ್ತೇವೆ ಎಂದು ನುಡಿದರು

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago