ಮೈಸೂರು: ಹತ್ತು ದಿನಗಳ ಹಿಂದೆ 21 ವರ್ಷದ ಅರ್ಚಕನ ಜೊತೆ ಪರಾರಿಯಾಗಿದ್ದ ವಿವಾಹಿತ ಮಹಿಳೆ ಕಾಡಂಚಿನಲ್ಲಿ ಪತ್ತೆಯಾಗಿದ್ದಾಳೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕೊಲ್ಲುಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. 21 ವರ್ಷದ ಅರ್ಚಕನ ಜೊತೆ ಪರಾರಿಯಾದ ಎರಡು ಮಕ್ಕಳ ತಾಯಿ ಈಗ ಅತಂತ್ರಕ್ಕೆ ಸಿಲುಕಿದ್ದಾಳೆ. ಬಾಳು ಕೊಡುವುದಾಗಿ ನಂಬಿಸಿ ಕರೆದೊಯ್ದ ಚಿಗುರು ಮೀಸೆಯ ಯುವ ಅರ್ಚಕ ಆಕೆಯೊಂದಿಗೆ ಹತ್ತು ದಿನ ಒಡನಾಟ ಬೆಳೆಸಿ ನಂತರ ಕಾಡಂಚಿನಲ್ಲಿ ಬಿಟ್ಟು ಪರಾರಿಯಾಗಿದ್ದಾನೆ ಎಂಬ ಆರೋಪಿಸಲಾಗಿದೆ.
ಗ್ರಾಮಸ್ಥರ ಕಣ್ಣಿಗೆ ಬಿದ್ದ ಗೃಹಿಣಿ ಅರ್ಚಕನ ಜೊತೆ ಇರಬೇಕೆಂದು ಪಟ್ಟು ಹಿಡಿದಿದ್ದಾಳೆ. ಆದರೆ ಪೂಜಾರಿ ಕೈ ಕೊಟ್ಟು ಪರಾರಿಯಾಗಿದ್ದಾನೆ. 35 ವರ್ಷದ ಗೃಹಿಣಿ ಜೂನ್ 12 ರಂದು ತಂದೆ ಮನೆಯಿಂದ ನಾಪತ್ತೆಯಾಗಿದ್ದಳು. ಈಗ ನಿರ್ಜನ ಪ್ರದೇಶದಲ್ಲಿ ಗೃಹಿಣಿ ಕಾಣಿಸಿಕೊಂಡಿದ್ದಾಳೆ. ಕೌಟುಂಬಿಕ ಸಮಸ್ಯೆಗೆ ಪರಿಹಾರ ಕೇಳಲು ಮಹದೇಶ್ವರನ ದೇವಸ್ಥಾನಕ್ಕೆ ಬಂದಾಗ 21 ವರ್ಷದ ಅರ್ಚಕ ಸಂತೋಷ್ ಈಕೆಯ ಜೊತೆ ಸಲುಗೆ ಬೆಳೆಸಿದ್ದಾನೆ. ನಿನಗೆ ಹೊಸ ಬಾಳು ಕೊಡುತ್ತೇನೆಂದು ನಂಬಿಸಿದ ಸಂತೋಷ್ ಗೃಹಿಣಿಯನ್ನ ಕರೆದೊಯ್ದಿದ್ದಾನೆ. ಹತ್ತು ದಿನಗಳ ಕಾಲ ಆಕೆಯೊಂದಿಗೆ ತಿರುಗಾಡಿ, ನಂತರ ಆತ್ಮಹತ್ಯೆ ನಾಟಕವಾಡಿ ಕಾಡಿಗೆ ಕರೆತಂದಿದ್ದಾನೆ. ಮಧ್ಯರಾತ್ರಿಯಲ್ಲಿ ಇದ್ದಕ್ಕಿದ್ದಂತೆ ಸಂತೋಷ್ ನಾಪತ್ತೆಯಾಗಿದ್ದಾನೆ ಎನ್ನಲಾಗುತ್ತಿದೆ.
ಇಡೀ ರಾತ್ರಿ ಒಂಟಿಯಾಗಿ ಕಾಡಿನಲ್ಲಿ ಕಾಲ ಕಳೆದ ಗೃಹಿಣಿ ಮುಂಜಾನೆ ಸ್ಥಳೀಯರ ಕಣ್ಣಿಗೆ ಬಿದ್ದಿದ್ದಾಳೆ. ಗೃಹಿಣಿಯ ಕಥೆ ಕೇಳಿದ ಗ್ರಾಮಸ್ಥರು ಹುಲ್ಲಹಳ್ಳಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಗೃಹಿಣಿಗೆ ರಕ್ಷಣೆ ನೀಡಿದ್ದಾರೆ. ಬಾಳು ಕೊಡುವುದಾಗಿ ನಂಬಿಸಿ ಕರೆದೊಯ್ದ ಪೂಜಾರಿ ಸಂತೋಷ್ ಇದೀಗ ನಾಪತ್ತೆಯಾಗಿದ್ದು, ಗಂಡನ ಮನೆಯೂ ಇಲ್ಲ, ಬಾಳು ಕೊಡುವುದಾಗಿ ನಂಬಿಸಿದ ಸಂತೋಷ್ ಸಹ ಇಲ್ಲದೆ, ಗೃಹಿಣಿ ಅತಂತ್ರಕ್ಕೆ ಸಿಲುಕಿದ್ದಾಳೆ. ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…