ಬೆಳಗಾವಿ (ಸುವರ್ಣ ವಿಧಾನಸೌಧ): ದಕ್ಷಿಣ ಕನ್ನಡ, ಉಡುಪಿ ಜಿಲ್ಲಾ ಕಂಬಳ ಸಮಿತಿಯಿಂದ ಅನುಮೋದನೆಗೊಂಡ 23 ಕಂಬಳೋತ್ಸವಗಳಿಗೆ ರಾಜ್ಯ ಸರಕಾರದಿಂದ ತಲಾ 5 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಘೋಷಣೆ ಮಾಡಿದ್ದಾರೆ.
ಮಂಗಳವಾರ ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಅಶೋಕ್ ಕುಮಾರ್ ರೈ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, 2025-26ನೆ ಸಾಲಿನಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಯೋಜಿಸಲಾಗುವ ಕಂಬಳ ಉತ್ಸವಗಳಿಗೆ ಅನುದಾನ ಕೋರಿ ಪ್ರಸ್ತಾವನೆಗಳು ಸ್ವೀಕೃತವಾಗಿವೆ. ಇದಕ್ಕೆ ಸರಕಾರದಿಂದ ಅನುಮೋದನೆ ನೀಡಿ ಅನುದಾನ ಬಿಡುಗಡೆಗೆ ಆರ್ಥಿಕ ಇಲಾಖೆ ಕಡತ ರವಾನಿಸಲಾಗಿದೆ. 2024-25ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ, ಮಂಗಳೂರು, ನರಿಂಗಾಣ, ಮೂಡಬಿದ್ರೆ, ಐಕಳ, ಜಪ್ಪು, ಪುತ್ತೂರು, ಬಂಟ್ವಾಳ, ಉಪ್ಪಿನಂಗಡಿ ಮತ್ತು ವೇಣೂರಿನಲ್ಲಿ ಆಯೋಜಿಸಿದ್ದ ಕಂಬಳೋತ್ಸವಗಳಿಗೆ ತಲಾ 5 ಲಕ್ಷದಂತೆ ಒಟ್ಟು 50 ಲಕ್ಷಗಳನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದ್ದಾರೆ ಎಂದರು.
ಈ ವೇಳೆ ಮಧ್ಯಪ್ರವೇಶಿಸಿದ ಕರಾವಳಿ ಭಾಗದ ಸದಸ್ಯರಾದ ಸುನೀಲ್ ಕುಮಾರ್, ವೇದವಾಸ್ ಕಮಾತ್, ಅಶೋಕ್ ಕುಮಾರ್ ರೈ ಸೇರಿದಂತೆ ಪ್ರಮುಖರು, ಕರಾವಳಿ ಭಾಗದಲ್ಲಿ ಕಂಬಳೋತ್ಸವ ಮುಖ್ಯವಾದ ಕ್ರೀಡೆ ಮಾತ್ರವಲ್ಲದೆ, ಪ್ರವಾಸೋದ್ಯಮ ಚಟುವಟಿಕೆಗಳನ್ನು ಉತ್ತೇಜನ ನೀಡಲಿದೆ. ಹೀಗಾಗಿ, ರಾಜ್ಯ ಸರಕಾರ ಜಿಲ್ಲಾ ಕಂಬಳ ಸಮಿತಿಯಿಂದ ಅನುಮೋದನೆಗೊಂಡ ಕಂಬಳೋತ್ಸವಗಳಿಗೆ ಪ್ರತಿ ವರ್ಷ ಬಜೆಟ್‍ನಲ್ಲಿ ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಉತ್ತರಿಸಿದ ಸಚಿವರು, ಶಾಸಕರುಗಳ ಅಭಿಪ್ರಾಯದಂತೆ 23 ಕಂಬಳೋತ್ಸವಗಳಿಗೆ ಅನುದಾನ ಬಿಡುಗಡೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ಆಗ ಸಚಿವರ ನಿರ್ಧಾರವನ್ನು ಸಭಾಧ್ಯಕ್ಷ ಯು.ಟಿ.ಖಾದರ್, ಸೇರಿ ಹಲವು ಶಾಸಕರುಗಳು ಒಕ್ಕೊರಲಿನಿಂದ ಅಭಿನಂದಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…