24 ಕ್ಷೇತ್ರದಲ್ಲಿ ಗೆಲ್ಲೋದು ಬಿಜೆಪಿ ಗುರಿ: ಬಿಎಸ್‌ವೈ

Featured, ಜಿಲ್ಲೆ

ಶಿವಮೊಗ್ಗ: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ತಯಾರಿ ಆರಂಭಿಸಿದ್ದು, ಜು.27ರಂದು ಸಂಭವಿಸಲಿರುವ ಚಂದ್ರ ಗ್ರಹಣದ ನಂತರ ರಾಜ್ಯ ಪ್ರವಾಸ ಕೈಗೊಳ್ಳುವುದಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಬಿಜೆಪಿ ಕಾರ್ಯಕರ್ತರ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 24 ಲೋಕಸಭಾ ಕ್ಷೇತ್ರದಲ್ಲಿಗೆಲ್ಲುವುದು ಪಕ್ಷದ ಗುರಿ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬಿಜೆಪಿ ಅಧಿಕಾರಕ್ಕೆ ಬರಬೇಕು. ಇದಕ್ಕಾಗಿ ಎಲ್ಲ ಕಾರ್ಯತಂತ್ರ ರೂಪಿಸಲಾಗುವುದು ಎಂದರು.