ಕೊಡಗು : ಮಡಿಕೇರಿಯಲ್ಲಿ ಎಂದಿನಂತೆ ಕೆಲಸಕ್ಕೆ ಹೊರಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದ ಹರೆಯದ ವಯಸ್ಸಿನ ಯುವತಿ ಹೃದಯಾಘಾತಕ್ಕೆ ಬಲಿಯಾಗಿದ್ದಾಳೆ.
ಎಂದಿನಂತೆ ತನ್ನ ಕರ್ತವ್ಯಕ್ಕೆ ಹೊರಡಬೇಕಾಗಿದ್ದ ಯುವತಿ ಹೃದಯಾಘಾತದಿಂದ ಮನೆಯಲ್ಲಿ ಮೃತಪಟ್ಟ ದಾರುಣ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ.
ನೆಲಜಿ ಗ್ರಾಮದ ಕಾಫಿ ಬೆಳೆಗಾರರಾದ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ (24) ಮೃತ ಯುವತಿ ಎಂದು ತಿಳಿದುಬಂದಿದೆ. ಆಕೆ ಮಡಿಕೇರಿಯಲ್ಲಿರುವ ಕೊಡಗು ವೈದ್ಯಕೀಯ ಕಾಲೇಜು ಮತ್ತು ಬೋಧಕ ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಇಂದು ಕೂಡ ಕರ್ತವ್ಯಕ್ಕೆ ಹೊರಟಾಗ ಮನೆಯಲ್ಲಿ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಯುವತಿ ನಿಲಿಕಾ ವಾಪಸ್ ತನ್ನ ಕೋಣೆಗೆ ಹೋಗಿ ಹಾಸಿಗೆ ಮೇಲೆ ಕುಸಿದು ಬಿದ್ದಿದ್ದಾಳೆ.
ನಂತರ ಯುವತಿಯ ತಾಯಿ ಹಿಂದಿನಿಂದ ಹೋಗಿ ಏನಾಯಿತು ಮಗಳೆ ಎಂದು ಕೇಳುವಷ್ಟರಲ್ಲಿಯೇ ನಿಲಿಕಾಳ ಪ್ರಾಣ ಪಕ್ಷಿ ಹಾರಿ ಹೋಗಿದೆ. ಆಸ್ಪತ್ರೆಗೆ ಕರೆದೊಯ್ದರೂ ಆಕೆ ಸಾವನ್ನಪ್ಪಿದ್ದಾಳೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.
ತಮ್ಮ ಕಣ್ಣೆದುರೇ ಮಗಳನ್ನು ಕಳೆದುಕೊಂಡು ದುಃಖ ಸಾಗರದಲ್ಲಿ ಮುಳುಗಿದ್ದಾರೆ. ಏಕಾಏಕಿ ಹರೆಯದ ವಯಸ್ಸಲ್ಲಿ ಹೃದಯಾಘಾತಕ್ಕೆ ಬಲಿಯಾದ ನೀಲಿಕಾ ನೋಡಲು ಸುತ್ತಲಿನ ಗ್ರಾಮಸ್ಥರು ನೆರೆದಿದ್ದಾರೆ
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…