Featured

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್

ಚೆನ್ನೈ: ತಮಿಳುನಾಡಿನಾದ್ಯಂತ ದೇವಾಲಯಗಳ ಹುಂಡಿ ಹಣದ ಮೇಲೆ ಪರಿಣಾಮ ಬೀರುವ ಪ್ರಮುಖ ನಿರ್ಧಾರವೊಂದರಲ್ಲಿ, ರಾಜ್ಯ ಸರ್ಕಾರವು ದೇವಾಲಯದ ನಿಧಿಯನ್ನು ಬಳಸಿಕೊಂಡು ನಿರ್ಮಾಣ ಮಾಡಲು ಉದ್ದೇಶಿಸಿದ್ದ ಸುಮಾರು 246 ಕೋಟಿ ರೂ.ಗಳ 46 ಯೋಜನೆಗಳನ್ನು ರದ್ದುಗೊಳಿಸಿದೆ. ಹಿಂದೂ ಧಾರ್ಮಿಕ ಮತ್ತು ದತ್ತಿ ದತ್ತಿ ಇಲಾಖೆಯ ಅಡಿಯಲ್ಲಿ ಮದುವೆ ಮಂಟಪಗಳು ಮತ್ತು ವಾಣಿಜ್ಯ ಸಂಕೀರ್ಣಗಳ ನಿರ್ಮಾಣವೂ ಸೇರಿತ್ತು ಎಂದು ವರದಿ ತಿಳಿಸಿದೆ.

ಜೂನ್‌ 19ರ ಸರ್ಕಾರಿ ಆದೇಶದ ಪ್ರಕಾರ, 115.77 ಕೋಟಿ ರೂಪಾಯಿ ವೆಚ್ಚದ 29 ಮದುವೆ ಮಂಟಪಗಳು ಹಾಗೂ 130.08 ಕೋಟಿ ರೂಪಾಯಿ ವೆಚ್ಚದ ವಾಣಿಜ್ಯ ಸಂಕೀರ್ಣ ನಿರ್ಮಾಣದ ಆದೇಶವನ್ನು ರದ್ದುಗೊಳಿಸಿರುವುದಾಗಿ ತಿಳಿಸಿದೆ.

ಹಿಂದಿನ ಡಿಎಂಕೆ ನೇತೃತ್ವದ ಸರ್ಕಾರ ಈ ಯೋಜನೆಗೆ ಅನುಮತಿ ನೀಡಿತ್ತು. ಆದರೆ ನಿರ್ಮಾಣ ಕಾರ್ಯ ಆರಂಭಗೊಂಡಿರಲಿಲ್ಲವಾಗಿತ್ತು. ಒಟ್ಟು 245.85 ಕೋಟಿ ರೂಪಾಯಿ ವೆಚ್ಚದ ನಿರ್ಮಾಣ ಕಾರ್ಯಕ್ಕಾಗಿ ದೇವಾಲಯದ ನಿಧಿಯನ್ನು ಬಳಸಲು ಉದ್ದೇಶಿಸಿತ್ತು.

ಹಲವಾರು ಯೋಜನೆಗಳು ಕಾನೂನು ಸಮಸ್ಯೆಗಳನ್ನು ಎದುರಿಸುತ್ತಿವೆ. ಅಲ್ಲದೇ ದೇವಾಲಯಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಬಹುದು ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸಿಎಂ ವಿಜಯ್‌ ನೇತೃತ್ವದ ಸರ್ಕಾರ ಹೇಳಿದೆ. ಬದಲಾಗಿ, ಈ ಹಣವನ್ನು ಈಗ ದೇವಾಲಯಗಳು ಮತ್ತು ಭಕ್ತರಿಗೆ ನೇರವಾಗಿ ಸಂಬಂಧಿಸಿದ ಕೆಲಸಗಳಿಗೆ ಬಳಸಲಾಗುವುದು ಎಂದು ಸ್ಪಷ್ಟಪಡಿಸಿದೆ.

ದೇವಾಲಯದ ಮೂಲಸೌಕರ್ಯ ಸುಧಾರಣೆ, ನವೀಕರಣ ಮತ್ತು ಸಂರಕ್ಷಣಾ ಕಾರ್ಯಗಳನ್ನು ಕೈಗೊಳ್ಳುವುದು ಮತ್ತು ಭಕ್ತರಿಗೆ ಉತ್ತಮ ಸೌಲಭ್ಯಗಳನ್ನು ಕಲ್ಪಿಸಲು ಈ ಹಣವನ್ನು ಖರ್ಚು ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೇವಾಲಯದ ಆದಾಯವನ್ನು ಪ್ರಾಥಮಿಕವಾಗಿ ದೇವಾಲಯಗಳ ನಿರ್ವಹಣೆ ಮತ್ತು ಅಭಿವೃದ್ಧಿಗೆ ಬಳಸುವುದು ಇದರ ಉದ್ದೇಶವಾಗಿದೆ ಎಂದು ಅವರು ಹೇಳಿದರು.

ತಮಿಳುನಾಡು ಸರ್ಕಾರದ ಈ ನಿರ್ಧಾರ ಇದೀಗ ರಾಜಕೀಯ ಚರ್ಚೆಗೆ ನಾಂದಿ ಹಾಡಿದೆ. ದೇವಾಲಯದ ನಿಧಿ ಬಳಸಿ ಮದುವೆ ಮಂಟಪಗಳು ಹಾಗೂ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸುವ ಮೂಲಕ ದೇವಾಲಯ ಮತ್ತು ಭಕ್ತರಿಗೆ ಹೆಚ್ಚುವರಿ ಆದಾಯ ಪಡೆಯಲು ಸಾಧ್ಯವಾಗಲಿದೆ ಎಂಬುದು ವಿಪಕ್ಷಗಳ ವಾದವಾಗಿದೆ. ಈ ಎಲ್ಲಾ ಟೀಕೆಯ ನಡುವೆಯೂ ದೇವಾಲಯದ ಹಣವನ್ನು ದೇವಾಲಯದ ಅಭಿವೃದ್ಧಿಗೆ ಬಳಸಬೇಕೆಂಬುದಾಗಿ ಹಿಂದಿನಿಂದಲೂ ಪ್ರತಿಪಾದಿಸಲಾಗುತ್ತಿತ್ತು.‌ ಇದೀಗ ಸಿಎಂ ವಿಜಯ್‌ ನೇತೃತ್ವದ ತಮಿಳುನಾಡು ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಂಡಂತಾಗಿದೆ.‌

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

20 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

21 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

21 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

24 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

24 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago