Featured

25ನೇ ವಯಸ್ಸಿನಲ್ಲೇ ಅಪ್ರತಿಮ ಸಾಧನೆ – ರಾಜ್ಯದ ಅತ್ಯಂತ ಕಿರಿಯ ನ್ಯಾಯಾಧೀಶರಾಗಿ ಬಂಟ್ವಾಳದ ಅನಿಲ್ ಸಿಕ್ವೇರಾ  – Vishwanews24

25ನೇ ವಯಸ್ಸಿನಲ್ಲೇ ಅಪ್ರತಿಮ ಸಾಧನೆ – ರಾಜ್ಯದ ಅತ್ಯಂತ ಕಿರಿಯ ನ್ಯಾಯಾಧೀಶರಾಗಿ ಬಂಟ್ವಾಳದ ಅನಿಲ್ ಸಿಕ್ವೇರಾ

ಬಂಟ್ವಾಳ: ಬಂಟ್ವಾಳ ಮೂಲದ 25ರ ಹರೆಯದ ಯುವಕ ಅನಿಲ್ ಜಾನ್ ಸಿಕ್ವೆರಾ 2023ರ ಸಾಲಿನ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಪಾಸ್‌ ಮಾಡಿದ್ದು, ಆ ಮೂಲಕ ರಾಜ್ಯದಲ್ಲಿ ಜಡ್ಜ್ ಹುದ್ದೆಗೇರಲಿರುವ ಅತಿ ಕಿರಿಯ ವ್ಯಕ್ತಿ ಎನ್ನುವ ಶ್ರೇಯಸ್ಸಿಗೆ ಪಾತ್ರರಾಗಿದ್ದಾರೆ.

ಬಂಟ್ವಾಳ ತಾಲೂಕಿನ ಬೊರಿಮಾರು ಮೂಲದ ಅನಿಲ್‌ ಜಾನ್‌ ಸಿಕ್ವೆರಾ ಮಂಗಳೂರಿನ ಎಸ್‌ ಡಿಎಂ ಕಾನೂನು ಕಾಲೇಜಿನಲ್ಲಿ ಬಿಬಿಎ ಮತ್ತು ಎಲ್‌ಎಲ್​ಬಿ ಪೂರೈಸಿದ್ದಾರೆ. ಕಾಲೇಜು ದಿನಗಳಲ್ಲಿಯೇ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ ಇವರು ಬಂಟ್ವಾಳದ ಬೊರಿಮಾರಿನ ಸೈಂಟ್ ಜೋಸೆಫ್ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಮಾಣಿ ಕರ್ನಾಟಕ ಹೈಸ್ಕೂಲ್​ನಲ್ಲಿ ಪ್ರೌಢ ಶಿಕ್ಷಣ, ಪುತ್ತೂರು ಸೈಂಟ್ ಫಿಲೋಮಿನಾ ಕಾಲೇಜಿನಲ್ಲಿ ಪಿಯುಸಿ ಶಿಕ್ಷಣ ಪಡೆದಿದ್ದರು. ಕಾನೂನು ಪದವಿ ಬಳಿಕ ಮಂಗಳೂರಿನಲ್ಲಿ ಬಾ‌ರ್ ಅಸೋಸಿಯೇಶನ್ ಸದಸ್ಯರಾಗಿ ಪ್ರಾಕ್ಟಿಸ್ ಆರಂಭಿಸಿದ್ದರು. ಮಂಗಳೂರಿನ ವಕೀಲರಾದ ದೀಪಕ್ ಡಿಸೋಜ ಮತ್ತು ನವೀನ್ ಪಾಯಸ್ ರೊಂದಿಗೆ ವೃತ್ತಿ ನಿರ್ವಹಿಸುತ್ತಿದ್ದರು. ಅನಿಲ್ ಜಾನ್ ಸಿಕ್ವೆರಾ ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ತಮ್ಮ ಎರಡನೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದಾರೆ.

ಕಾಲೇಜು ದಿನಗಳಲ್ಲಿಯೇ ನಾಯಕತ್ವ ಬೆಳೆಸಿಕೊಂಡಿದ್ದ ಅನಿಲ್ ಸಿಕ್ವೆರಾ 2022ರಲ್ಲಿ ಮಂಗಳೂರು ಕ್ರೈಸ್ತ ಧರ್ಮ ಪ್ರಾಂತ್ಯದ ಇಂಡಿಯನ್ ಕೆಥೋಲಿಕ್ ಯೂತ್ ಮೂಮೆಂಟ್ ಸಂಘಟನೆ ಅಧ್ಯಕ್ಷರಾಗಿದ್ದರು. ಅನಿಲ್ ಸಿಕೆರಾ ಅವರು ಕರ್ನಾಟಕ ಸಿವಿಲ್ ಜಡ್ಜ್ ಪರೀಕ್ಷೆಯನ್ನು ಎರಡೇ ಪ್ರಯತ್ನದಲ್ಲಿ ತೇರ್ಗಡೆಯಾಗಿದ್ದು ಪ್ರಿಲಿಮಿನರಿ, ಮೈನ್ಸ್ ಮತ್ತು ಸಂದರ್ಶನ ಪಾಸ್ ಮಾಡುವ ಮೂಲಕ ಇತರರಿಗೆ ಸ್ಫೂರ್ತಿಯಾಗಿದ್ದಾರೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

2 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

2 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

2 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

2 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

3 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

3 hours ago