26/11 2008 ಭಾರತದಲ್ಲಿ ಕರಾಳ ಅಧ್ಯಾಯ ಬರೆದ ಮುಂಬೈ ಭಯೋತ್ಪಾದಕ ದಾಳಿಗೆ ಇಂದಿಗೆ 12 ವರ್ಷ ,ದೇಶಕ್ಕಾಗಿ ಜೀವ ತೆತ್ತ ಹುತಾತ್ಮರಿಗೆ ಗೌರವ -Vishwanews24
ನವದೆಹಲಿ: ಭಾರತದಲ್ಲಿ ಕರಾಳ ಅಧ್ಯಾಯ ಬರೆದ 26/11 2008ರಮುಂಬೈ ಭಯೋತ್ಪಾದಕ ದಾಳಿಗೆ 12 ವರ್ಷಗಳು ಕಳೆದಿದ್ದು, ಅಮಾಯಕ ಜನರು, ಹುತಾತ್ಮ ಯೋಧರನ್ನು ಕಳೆದುಕೊಂಡ ಕರಾಳ ದಿನವನ್ನು ದೇಶದ ಜನತೆ ನೆನೆಯುತ್ತಿದೆ.
ಪಾಕಿಸ್ತಾನದ ಕರಾಚಿಯಿಂದ ಸಮುದ್ರ ಮಾರ್ಗದ ಮೂಲಕ ಬಂದಿದ್ದ 10 ಮಂದಿ ಲಷ್ಕರ್-ಇ-ತೊಯ್ಬಾ ಉಗ್ರರು 2008ರ ನ.26ರಂದು ಮುಂಬೈನ ತಾಜ್ ಹೋಟೆಲ್, ಶಿವಾಜಿ ಟರ್ಮಿನಲ್ ಸೇರಿದಂತೆ 12 ಸ್ಥಳಗಳ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ವಿದೇಶಿಗರೂ ಸೇರಿದಂತೆ 174 ಮಂದಿ ನಾಗರೀಕರು ಸಾವನ್ನಪ್ಪಿದ್ದರು.
ಕಗ್ಗತ್ತಲಲ್ಲಿ ಸಮುದ್ರ ಮಾರ್ಗದ ಮೂಲಕ ಮುಂಬೈ ನಗರಕ್ಕೆ ಲಗ್ಗೆಯಿಟ್ಟಿದ್ದ ಪಾಕಿಸ್ತಾನ ಮೂಲಕ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಭಯೋತ್ಪಾದಕರು ನೆತ್ತರು ಹರಿಸಿದ್ದರು. ತಾಜ್ ಹೋಟೆಲ್ ನಲ್ಲಿದ್ದ ಜನರನ್ನು 3 ದಿನಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡಿದ್ದ ಉಗ್ರರು ಅಟ್ಟಹಾಸ ಮೆರೆದಿದ್ದರು.
ಭಾರತದ ಇತಿಹಾಸದಲ್ಲಿಯೇ ಎಂದೂ ಕಂಡಿರದಂತಹ ರೀತಿಯಲ್ಲಿ ದಾಳಿ ನಡೆಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಲ್, ಲಿಯೋಪೋಲ್ಡ್ ಕೆಫೆ, ಕಾಮಾ ಆಸ್ಪತ್ರೆ ಸೇರಿದಂತೆ ಒಟ್ಟು 7 ಕಡೆಗಳಲ್ಲಿ ಉಗ್ರರು ದಾಳಿ ನಡೆಸಿ 174 ಅಮಾಯಕ ಜನರನ್ನು ಬಲಿಪಡೆದುಕೊಂಡಿದ್ದರು.
ಸುಮಾರು 10 ಉಗ್ರರು ಮುಂಬೈ ಮೇಲೆ ದಾಳಿ ನಡೆಸಿದ್ದರು. 68 ಗಂಟೆಗಳ ಕಾಲ ಭದ್ರತಾ ಸಿಬ್ಬಂದಿಗಳು ಉಗ್ರರೊಡನೆ ಹೋರಾಟ ನಡೆಸಿದ್ದರು. ಉಗ್ರರ ವಿರುದ್ಧ ಹೋರಾಟದಲ್ಲಿ 17 ಜನ ಭಧ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದರು. ಈ ಕರಾಳ ದಿನಕ್ಕೆ ಇಂದಿಗೆ 12 ವರ್ಷಗಳು ಕಳೆದಿದ್ದು, ದಾಳಿಯಲ್ಲಿ ಅಸುನೀಗಿದವರಿಗೆ ದೇಶದ ಜನತೆ ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ.
ಜೀವಂತ ಸೆರೆ ಹಿಡಿದಿದ್ದ ಅಜ್ಮಲ್ ಕಸಬ್ ನನ್ನು ನಾಲ್ಕು ವರ್ಷಗಳ ಬಳಿಕ 2012ರ ನವೆಂಬರ್ 21ರಂದು ಗಲ್ಲಿಗೇರಿಸಲಾಯಿತು. ಇಂದಿಗೆ ದಾಳಿ ನಡೆದು ಹತ್ತು ವರ್ಷಗಳಾಗಿದೆ.
ದಕ್ಷಿಣ ಮುಂಬೈನ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಹೊಸದಾಗಿ ನಿರ್ಮಿಸಲಾದ ಹುತಾತ್ಮರ ಸ್ಮಾರಕದ ಬಳಿ ನಡೆದ ಗೌರವ ಸಮರ್ಪಣೆ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ, ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಗೃಹ ಸಚಿವ ಅನಿಲ್ ದೇಶ್ಮುಖ್, ಅರಣ್ಯ ಸಚಿವ ಆದಿತ್ಯ ಠಾಕ್ರೆ ಇತರರು ಭಾಗವಹಿಸಿದ್ದರು.
ಉಗ್ರರ ದಾಳಿಯನ್ನು ಹಿಮ್ಮೆಟ್ಟಿಸುವಲ್ಲಿ ರಕ್ಷಣಾ ಪಡೆಗಳು ನಡೆಸಿದ ಹೋರಾಟವನ್ನು ನೆನಪಿಸಿಕೊಂಡರು. ಹುತಾತ್ಮರ ಸ್ಮಾರಕಕ್ಕೆ ಹೂವಿನ ಹಾರ ಹಾಕಿ, ನಮನ ಸಲ್ಲಿಸಿದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…