Featured

26-12-2019 ಗುರುವಾರ ಕಂಕಣ ಸೂರ್ಯಗ್ರಹಣ, ಅನುಸರಿಸಬೇಕಾದ ಕ್ರಮ ಮತ್ತು ಸುಲಭ ಪರಿಹಾರ : ದೈವೀಕ ಪಂಡಿತ್ ಶ್ರೀ ಗಣಪತಿ ಭಟ್ 8088827292

ಕಂಕಣ ಸೂರ್ಯಗ್ರಹಣ

ಶ್ರೀ ವಿಕಾರಿ ನಾಮ ಸಂವತ್ಸರದ ಮಾರ್ಗಶಿರ
ಅಮಾವಾಸ್ಯೆ 26-12-2019 ಗುರುವಾರ ರಂದು ಮೂಲಾ ನಕ್ಷತ್ರ ಧನು ರಾಶಿಯಲ್ಲಿ ಸೂರ್ಯನಿಗೆ ಕೇತುಗ್ರಸ್ತ ಗ್ರಹಣ ಸಂಭವಿಸುತ್ತದೆ.

ಗ್ರಹಣ ಸ್ಪರ್ಶ ಕಾಲ : 8.04 am
ಗ್ರಹಣ ಮಧ್ಯಕಾಲ 9.25 am
ಗ್ರಹಣ ಮೋಕ್ಷ ಕಾಲ : 11.03 am

ಗ್ರಹಣವು ಭಾರತ ದೇಶಕ್ಕೆ ಕಾಣಿಸುವುದರಿಂದ ಗ್ರಹಣಾಚರಣೆ ಇರುತ್ತದೆ.

೧. ಭೋಜನ ವಿಚಾರ :

25 ಬುಧವಾರ ರಾತ್ರಿ 8.04 ವೇದ ಆರಂಭ.ಭೋಜನ 08.00pm ಗಂಟೆಯವರೆಗೂ ಸೇವಿಸಬಹುದು

೨. ತರ್ಪಣ ವಿಚಾರ :

ಗ್ರಹಣ ದಿನ ಮಧ್ಯಕಾಲದಲ್ಲಿ 09-00am ಗಂಟೆಯ ನಂತರ ತರ್ಪಣ ಮಾಡುವುದು.

೩. ಶ್ರಾದ್ಧ ವಿಚಾರ :

ದಿನಾಂಕ : 26-12-2019ಶ್ರಾದ್ಧವನ್ನು ಮಾರನೇ ದಿನ
27-12-2019 ಶುಕ್ರವಾರ ನಡೆಸುವುದು.

ಸೂಚನೆ: ಆ ದಿನ ಸೂರ್ಯೋದಯಾದಿ ಹಗಲು 11.04 am ತನಕ ಆಹಾರವನ್ನು ಸ್ವೀಕರಿಸಬಾರದು. ಅಶಕ್ತರು, ರೋಗಿಗಳು, ಮಕ್ಕಳು ಬೆಳಿಗ್ಗೆ 7.00am ಗಂಟೆಯವರೆಗೆ ಲಘು ಆಹಾರವನ್ನು ಸ್ವೀಕರಿಸಬಹುದು.

೪. ಶಾಂತಿ ವಿಚಾರ :

ಅರಿಷ್ಠ ಇರುವ ರಾಶಿಯವರು ಗ್ರಹಣಾನಂತರ ಯಥಾಯೋಗ್ಯತಾ ಹುರುಳಿ (ಕುಳಿತ್ಥ) ಮತ್ತು ಗೋಧಿ ದಕ್ಷಿಣೆಸಹಿತ ಕೆಂಪು ವಸ್ತ್ರದಲ್ಲಿ ಇಟ್ಟು ದಾನ ಮಾಡಬಹುದು.ಈ ಕೆಳಗಿನ ಶ್ಲೋಕವನ್ನು ಗ್ರಹಣಕಾಲದಲ್ಲಿ ಪಠಿಸುವುದು.

ಶ್ಲೋಕ :

ಯೋ ಸೌ ವಜ್ರಧರೋ ದೇವಃ ಆದಿತ್ಯಾನಾಂ ಪ್ರಭುರ್ಮತಃ |

ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 1 ||

ಯೋ ಸೌ ದಂಡಧರೋ ದೇವಃ ಯಮೋ ಮಹಿಷವಾಹನಃ |

ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 2 ||

ಯೋ ಸೌ ಶೂಲಧರೋ ದೇವಃ ಪಿನಾಕೀ ವೃಷವಾಹನಃ |

ಸೂರ್ಯ ಗ್ರಹೋಪರಾಗೋತ್ಥ ಗ್ರಹಪೀಡಾಂ ವ್ಯಪೋಹತು || 3 || ‌ ‌

ಗ್ರಹಣಕಾಲದಲ್ಲಿ ಪಾಲಿಸ ಬೇಕಾದ ಆಚರಣೆಗಳು :-

ಗ್ರಹಣದ ಆಚರಣೆ ಶಾಸ್ತ್ರದ ವಚನ, ಎಂದರೆ ಭಗವಂತನ ಆದೇಶ. ಪರಮಾತ್ಮ ನಮ್ಮ ಬದುಕಿಗೆ ಹಾಕಿದ ಸಂವಿಧಾನ ಅದು. ಅವಶ್ಯವಾಗಿ ಆಚರಣೆ ಮಾಡಲೇಬೇಕು. ಗ್ರಹಣ ಕಾಲವನ್ನು ಸೂತಕ ಸಮಯ ಎಂದು ಪರಿಗಣಿಸಲಾಗುತ್ತದೆ, ಏಕೆಂದರೆ ಆ ಸಮಯ ಬಹಳ ಅಶುಭ ಕಾಲವಾಗಿರುತ್ತದೆ.

೧. ಗ್ರಹಣದ ಆರಂಭ ಅಂತ್ಯಗಳಲ್ಲಿ ಸ್ನಾನವನ್ನು ಮಾಡಲೇಬೇಕು.

೨. ಗ್ರಹಣದ ಆರಂಭದಲ್ಲಿ ಮಾಡುವ ಸ್ನಾನದಿಂದ ಜಪ-ಪಾರಾಯಣ-ದಾನಾದಿಗಳಿಗೆ ಮಾತ್ರ ಅಧಿಕಾರ. ಊಟ, ಉಪಾಹಾರಗಳಿಗಿಲ್ಲ. ‌ ‌

೩ ಗ್ರಹಣದ ಸೂತಕವು ಗ್ರಹಣ ಆರಂಭದ ಒಂಬತ್ತು ಗಂಟೆಗಳ ಮೊದಲು ಆರಂಭವಾಗುತ್ತದೆ. ಗ್ರಹಣ ಮೋಕ್ಷ ಕಾಲದ ನಂತರ ಮಾಡುವ ಸ್ನಾನದ ನಂತರ ಸೂತಕ ಮುಕ್ತಾಯವಾಗುತ್ತದೆ.

೪. ಗ್ರಹಣ ಕಾಲದಲ್ಲಿ ಯಾವುದೇ ದ್ರವ ಅಹಾರವಾಗಲಿ ಅಥವಾ ಘನ ಆಹಾರವಾಗಲಿ ಸ್ವೀಕರಿಸಬಾರದು. ‌ ‌ ‌
೫. ಗ್ರಹಣ ಮೋಕ್ಷ ಕಾಲದ ನಂತರವೇ ಸ್ನಾನ, ಪೂಜೆ ಸಲ್ಲಿಸಿ, ಅಡುಗೆ ಮಾಡಿ, ಊಟ ಮಾಡಬೇಕು. ಗ್ರಹಣಕ್ಕಿಂತ ಮುಂಚೆ ಮಾಡಿಟ್ಟು ಅಥವಾ ಗ್ರಹಣಕಾಲದಲ್ಲಿ ಮಾಡಿಟ್ಟು ತಿನ್ನಬಾರದು. ‌
೬. ದೇವಾಲಯ ಅಥವಾ ಪೂಜಾ ಸ್ಥಳಗಳಿಗೆ ಪ್ರವೇಶ ಹಾಗೂ ದೇವರ ಮೂರ್ತಿಗಳ ಸ್ಪರ್ಶವನ್ನು ಮಾಡಬಾರದು. ‌
೭. ಶೌಚಾಲಯದ ಬಳಕೆಯನ್ನು ಮಾಡಬಾರದು. ‌ ‌

೮. ಗ್ರಹಣ ಕಾಲದಲ್ಲಿ ಲೈಂಗಿಕ ಸಂಪರ್ಕ ಯಾವುದೇ ಕಾರಣಕ್ಕೂ ಮಾಡಬಾರದು ಹಾಗೂ ಅಲಂಕಾರ ಮಾಡಿಕೊಳ್ಳಬಾರದು.
‌ ‌ ೯. “ಸರ್ವೇಷಾಮೇವ ವರ್ಣಾನಾಂ ಸೂತಕಂ ಕೇತುಸೂತಕೇ”
ಎಲ್ಲಾ ವರ್ಣದವರೂ ಗ್ರಹಣ ಕಾಲದಲ್ಲಿ ಮೈಲಿಗೆಯನ್ನು ಆಚರಿಸಬೇಕು.
‌ ೧೦. ಗ್ರಹಣ ಮೋಕ್ಷ ಕಾಲದ ನಂತರ ಅಗತ್ಯವಾಗಿ ಸ್ನಾನ ಮಾಡಲೇಬೇಕು. ಪವಿತ್ರ ಗಂಗಾಜಲ ಅಥವಾ ಶುದ್ದ ಜಲದಿಂದ ಮನೆಯ ಎಲ್ಲಾ ಭಾಗಗಳಲ್ಲಿಯೂ (ದೇವರ ಕೋಣೆ) ಪ್ರೋಕ್ಷಿಸಬೇಕು. ‌ ‌ ‌
೧೧. ಜನನ ಶೌಚವಿರುವವರು, ಮೃತ ಶೌಚವಿರುವವರು ಮತ್ತು ರಜಸ್ವಲೆಯಾದವರೂ ಸಹ ಗ್ರಹಣದ ಸ್ಪರ್ಶಸ್ನಾನ, ಮುಕ್ತಿಸ್ನಾನಗಳನ್ನು ಮಾಡಲೇಬೇಕು. ಆದರೆ, ಅವರು ಜಪ ಪಾರಾಯಣಗಳನ್ನು ಮಾಡಬಾರದು.

೧೨. ಗ್ರಹಣದ ಎರಡೂ ಸ್ನಾನಗಳಲ್ಲಿ ಉಟ್ಟ ಬಟ್ಟೆಯಲ್ಲಿಯೇ ಸ್ನಾನ ಮಾಡಬೇಕು.

೧೩‌. ಗ್ರಹಣ ಕಾಲದಲ್ಲಿ ನದಿಗಳಲ್ಲಿ, ಮಹಾನದಿಗಳಲ್ಲಿ ಮಾಡುವ ಸ್ನಾನ ಅತೀ ಶ್ರೇಷ್ಠ. ಸಮುದ್ರ ಸ್ನಾನ ಸರ್ವೋತ್ತಮ.

೧೪. ಗ್ರಹಣಕಾಲದಲ್ಲಿ ಬಿಸಿನೀರಿನ ಸ್ನಾನ ಮಾಡಬಾರದು ಎಂದು ಯಮನ ಆದೇಶವಿದೆ. ತೀರ ಅಶಕ್ತರಾದವರು ಮಾತ್ರ ಬಿಸಿನೀರಿನಿಂದ ಸ್ನಾನವನ್ನು ಮಾಡಬೇಕು.

೧೫. ಯಾರ ಮನೆಯಲ್ಲಿ ಬಾವಿ ಮುಂತಾದವುಗಳಿಂದ ಗ್ರಹಣದ ನಂತರ ಶುದ್ಧ ನೀರನ್ನು ತೆಗೆದುಕೊಳ್ಳಲು ಸಾಧ್ಯವಿದೆಯೋ ಅಂತಹವರು ಹಾಗೆಯೇ ಮಾಡಬೇಕು. ಯಾರ ಮನೆಯಲ್ಲಿ ನೀರನ್ನು ಹಿಡಿದಿಟ್ಟುಕೊಳ್ಳುವ ಅನಿವಾರ್ಯತೆ ಇದೆ ಅಂತಹವರು ನೀರಿನ ಪಾತ್ರೆಗಳ (ಹಾಲು, ಮೊಸರು, ತುಪ್ಪ ಮತ್ತು ಎಣ್ಣೆಯಲ್ಲಿ ಕರಿದ ಪದಾರ್ಥಗಳು ಇತರೆ) ಮೇಲೆ ದರ್ಭೆಅಥವ ತುಳಸಿ ಯನ್ನು ಹಾಕಿರಬೇಕು.

೧೬. ಗ್ರಹಣ ಆರಂಭದಿಂದ ಅಂತ್ಯದ ಕಾಲದವರೆಗೂ ದೇವರಸ್ಮರಣೆ, ನಮಸ್ಕಾರ, ಜಪ, ಪಾರಾಯಣಗಳನ್ನು ಮಾಡಬೇಕು. ಹೋಮ, ಶ್ರಾದ್ಧ, ಪಾರಾಯಣ, ದಾನಗಳನ್ನು ಮಾಡಬೇಕು. ‌ ‌ ‌ ‌

ಗ್ರಹಣದ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಸುಲಭ ಪರಿಹಾರಕ್ಕಾಗಿ ಸಂಪರ್ಕಿಸಿ

ಸಂಗ್ರಹ: ಶ್ರೀ ಮಹಾ ಕಾಲಭೈರವ ಜ್ಯೋತಿಷ್ಯ ಪೀಠಂ
ದೈವೀಕ ಪಂ ಶ್ರೀ ಗಣಪತಿ ಭಟ್ 8088827292

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago