ಅಹಮದಾಬಾದ್: 260 ಜನರ ಸಾವಿಗೆ ಕಾರಣವಾದ ಅಹಮದಾಬಾದ್ ಏರ್ ಇಂಡಿಯಾ ವಿಮಾನ ದುರಂತ ನಡೆದು ಇಂದಿಗೆ 1 ವರ್ಷ ತುಂಬಿದೆ.
ಅಂದು 2025ರ ಜೂನ್ 12 (ಗುರುವಾರ). ಅಹಮಾದಾಬಾದ್‌ನ ಸರ್ದಾರ್ ವಲ್ಲಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ನ ಗ್ಯಾಟ್ವಿಕ್‌ಗೆ ತೆರಳಲು 171 ಏರ್ ಇಂಡಿಯಾ ಟೇಕ್ ಆಫ್ ಆಗಿತ್ತು. ಮಧ್ಯಾಹ್ನ 1:38ಕ್ಕೆ ಅಹಮದಾಬಾದ್‌ನಿಂದ ಹೊರಟ 12 ವರ್ಷದ ಹಳೆಯ ಬೋಯಿಂಗ್ 787-8 ವಿಮಾನ 230 ಪ್ರಯಾಣಿಕರು ಹಾಗೂ 12 ಸಿಬ್ಬಂದಿಯನ್ನ ಹೊತ್ತೊಯ್ಯುತ್ತಿತ್ತು. ಆದರೆ ದುರಾದೃಷ್ಟವೆಂದರೆ ಟೇಕ್ ಆಫ್ ಕೆಲವೇ ಸೆಕೆಂಡುಗಳಲ್ಲಿಯೇ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ಗೆ ಅಪ್ಪಳಿಸಿ, ವಿಮಾನ ಅಪಘಾತಕ್ಕೀಡಾಯಿತು.
ದುರಂತದಲ್ಲಿ ಪೈಲಟ್ ಸೇರಿದಂತೆ ವಿಮಾನದಲ್ಲಿದ್ದ 241 ಮಂದಿ ಹಾಗೂ ಇತರ 19 ಜನರು ಸಾವನ್ನಪ್ಪಿದ್ದರು. ಘಟನೆ ನಡೆದು ವರ್ಷವಾದರೂ ಅಪಘಾತಕ್ಕೆ ನಿಖರ ಕಾರಣ ಏನು ಎಂಬುದರ ತನಿಖಾ ವರದಿ ಇನ್ನೂ ಸಿದ್ಧಗೊಂಡಿಲ್ಲ.
ಮಡಿದವರ ಕುಟುಂಬಗಳ ಪೈಕಿ ಶೇ.96ರಷ್ಟು ಕುಟುಂಬಗಳಿಗೆ ಇದುವರೆಗೆ ಮಧ್ಯಂತರ ಪರಿಹಾರವಾಗಿ ತಲಾ 25 ಲಕ್ಷ ರೂ. ಪರಿಹಾರ ವಿತರಿಸಲಾಗಿದೆ. ಈ ನಡುವೆ ವಿಮಾನ ಅಪಘಾತದಲ್ಲಿ ಮಡಿದವರಿಗೆ ಗೌರವ ಸಲ್ಲಿಸುವ ಸಲುವಾಗಿ ಏರ್ ಇಂಡಿಯಾ ಸಿಬ್ಬಂದಿ ಶುಕ್ರವಾರ ತಮ್ಮ ಕಾರ್ಯಸ್ಥಳಗಳಲ್ಲಿ ಮಧ್ಯಾಹ್ನ 1.39ರಿಂದ 1.41ರವರೆಗೆ ಎರಡು ನಿಮಿಷಗಳ ಮೌನಾಚರಣೆ ನಡೆಸಲಿದ್ದಾರೆ.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ವಿಜಯ್ ಕೊಲ್ಲೂರು : ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಇಂದು ಕೊಲ್ಲೂರು ಶ್ರೀ…
ಛಾಯಾಗ್ರಾಹಕ ಅನೀಶ್ ಕಾಪು ಅವರಿಗೆ ಕರ್ನಾಟಕ ಛಾಯಾರತ್ನ ಪ್ರಶಸ್ತಿ ಪ್ರಧಾನ ಸನ್ನಿಧಿ ಸ್ಟುಡಿಯೋ ಶ್ರೀಯುತ ಅನೀಶ್ ಕಾಪು ಇವರು ಫೋಟೋಗ್ರಫಿ…
ತಮಿಳುನಾಡು ಸಿಎಂ ವಿಜಯ್ ವಿರುದ್ಧ ಪ್ರತಿಭಟನೆಗೆ ಯತ್ನ : 20ಕ್ಕೂ ಹೆಚ್ಚು ಕರವೇ ಕಾರ್ಯಕರ್ತರು ವಶಕ್ಕೆ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್…
ಮಂಗಳೂರಿಗೆ ಆಗಮಿಸಿದ ತಮಿಳುನಾಡು ಸಿಎಂ ವಿಜಯ್ ಮಂಗಳೂರು: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ…
ಮೇಕೆದಾಟು ಯೋಜನೆಗೆ ಅನುಮತಿ ನೀಡಿ : ಪ್ರಧಾನಿ ಮೋದಿಗೆ ಸಿಎಂ ಡಿಕೆಶಿ ಮನವಿ ಬೆಂಗಳೂರು: ಮಹತ್ವಾಕಾಂಕ್ಷಿ ಮೇಕೆದಾಟು ಜಲಾಶಯ ಯೋಜನೆಗೆ…
ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು ; ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ: ಪ್ರಿಯಾಂಕ್…