ಬೆಂಗಳೂರು: ಇದೇ 28ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆಯೂ ಹಿಜಾಬ್‌ಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಆದೇಶವನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ.
ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳೆಯೂ ಹೈಕೋರ್ಟ್‌ನ ಆದೇಶ ಪಾಲಿಸಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಹಿಜಾಬ್ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಈ ವಿಷಯದ ಬಗ್ಗೆ ಅನಗತ್ಯ ಗೊಂದಲಗಳನ್ನು ಸೃಷ್ಟಿಸುವುದು ಬೇಡ. ಕೋವಿಡ್ ನಂತರ ಮೊದಲ ಬಾರಿ ವಿದ್ಯಾರ್ಥಿಗಳು ಸಹ ಉತ್ಸಾಹದಿಂದ ಪರೀಕ್ಷೆ ಬರೆಯಲು ಸಜ್ಜಾಗಿದ್ದಾರೆ. ವಿದ್ಯಾರ್ಥಿಗಳ ಮಾನಸಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಗೆ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳು ಸಭೆಗಳನ್ನು ನಡೆಸಿ ಎಲ್ಲ ರೀತಿಯ ಸಿದ್ಧತೆಗಳನ್ನು ಕೈಗೊಂಡಿದ್ದಾರೆ’ ಎಂದು ವಿವರಿಸಿದರು.
8.73 ಲಕ್ಷ ವಿದ್ಯಾರ್ಥಿಗಳು: ಎಸ್ಸೆಸ್ಸೆಲ್ಸಿಪರೀಕ್ಷೆ ಇದೇ 28ರಿಂದ ಏಪ್ರಿಲ್ 11ರವರೆಗೆ ನಡೆಯಲಿದ್ದು, ರಾಜ್ಯದಾದ್ಯಂತ ಒಟ್ಟು 15,387 ಶಾಲೆಗಳ 8,73,846 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 3,444 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದೆ. ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳನ್ನು ಕೈಬಿಡಲು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ (ಕೆಎಸ್‌ಇಇಬಿ) ನಿರ್ಧರಿಸಿದೆ.
ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ ಸಮುದ್ರಪಾಲಾದ ಘಟನೆ ಉತ್ತರ…
ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…
ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…
ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…
ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…