28 ಕ್ಷೇತ್ರಗಳ ಅಭ್ಯರ್ಥಿ ಆಕಾಂಕ್ಷಿಗಳ ಪಟ್ಟಿ ಇನ್ನು 2-3 ದಿನಗಳಲ್ಲಿ ಬಿಜೆಪಿ ಹೈಕಮಾಂಡ್‌ಗೆ ರವಾನೆ : ಬಿ.ವೈ.ವಿಜಯೇಂದ್ರ – Vishwanews24

Featured, ಉಡುಪಿ

* ಯಾರನ್ನೆಲ್ಲ ಕಣಕ್ಕೆ ಇಳಿಸಬೇಕು ಎಂಬ ತೀರ್ಮಾನವನ್ನು ವರಿಷ್ಠರೇ ತೆಗೆದುಕೊಳ್ಳುತ್ತಾರೆ..

* ಟಿಕೆಟ್‌ಗಾಗಿ ಶೋಭಾ ಕರಂದ್ಲಾಜೆ ವಿರುದ್ಧ ನೇರವಾಗಿ ಅಖಾಡಕ್ಕೆ ಇಳಿದ ಪ್ರಮೋದ್ ಮಧ್ವರಾಜ್..

* ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ?

 * ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಅಚ್ಚರಿಯ ಹೆಸರು?

ಬೆಂಗಳೂರು: ಇನ್ನು 2-3 ದಿನಗಳಲ್ಲಿ 28 ಕ್ಷೇತ್ರಗಳ ಅಭ್ಯರ್ಥಿ ಆಕಾಂಕ್ಷಿಗಳ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್‌ಗೆ ರವಾನೆ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿ ಗಳನ್ನು ಕಣಕ್ಕೆ ಇಳಿಸುವ ಸಂಬಂಧ ಪಕ್ಷದ ಪ್ರಮುಖ ನಾಯಕರ ಸಭೆಯಲ್ಲಿ ಚರ್ಚೆ ನಡೆದಿದ್ದು, ಚರ್ಚೆಗೆ ಬಂದ ಎಲ್ಲ ಆಕಾಂಕ್ಷಿಗಳ ಹೆಸರುಗಳನ್ನು ಇನ್ನು 2–3 ದಿನಗಳಲ್ಲಿ ವರಿಷ್ಠರಿಗೆ ಕಳುಹಿಸಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, ಇಬ್ಬರು ವೀಕ್ಷಕರು ಕಳೆದ 2-3 ದಿನಗಳಿಂದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ಹೋಗಿ ಕಾರ್ಯಕರ್ತರು ಮತ್ತು ನಾಯಕರ ಜತೆ ಚರ್ಚಿಸಿ, ಆಕಾಂಕ್ಷಿಗಳ ಹೆಸರುಗಳನ್ನು ಸಂಗ್ರಹಿಸಿದ್ದಾರೆ. ಆ ಹೆಸರುಗಳ ಬಗ್ಗೆ ಇವತ್ತಿನ ಸಭೆಯಲ್ಲಿ ಚರ್ಚೆ ನಡೆಯಿತು. ರಾಜ್ಯದಲ್ಲಿ 28 ಸ್ಥಾನಗಳನ್ನೂ ಗೆಲ್ಲುವ ವಾತಾವರಣವಿದೆ. ಬಿಜೆಪಿ– ಜೆಡಿಎಸ್‌ ಜತೆಯಾಗಿ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಿ ಎಲ್ಲ ಸ್ಥಾನಗಳನ್ನು ಗೆದ್ದು ದಾಖಲೆ ಸೃಷ್ಟಿಸಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಯಾರನ್ನೆಲ್ಲ ಕಣಕ್ಕೆ ಇಳಿಸಬೇಕು ಎಂಬ ತೀರ್ಮಾನವನ್ನು ವರಿಷ್ಠರೇ ತೆಗೆದುಕೊಳ್ಳುತ್ತಾರೆ ಎಂದು ತಿಳಿಸಿದರು.

ಸುಳ್ಯ :  ಲೋ ಬಿ.ಪಿ  – ನಿಯಂತ್ರಣ ತಪ್ಪಿ ಆಟೋ ಪಲ್ಟಿ ; ಚಾಲಕ ಸಾವು – Vishwanews24

“ಇನ್ನೆರಡು ಮೂರು ದಿನಗಳಲ್ಲಿ ಹೆಸರು ಕಳುಹಿಸುತ್ತೇವೆ ಆಕಾಂಕ್ಷಿಗಳ ಹೆಸರು ಕಳುಹಿಸುವುದು ನಮ್ಮ ಕರ್ತವ್ಯ. ಎಲ್ಲಾ ಹೆಸರುಗಳನ್ನು ಕಳುಹಿಸುತ್ತೇವೆ. ಆದರೆ ಚುನಾವಣಾ ನಿರ್ವಹಣಾ ಸಮಿತಿಯು ಸೂಕ್ತವೆಂದು ಭಾವಿಸಿದೆವು. ಪಟ್ಟಿ ಕುರಿತು ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ವಿಜಯೇಂದ್ರ ಹೇಳಿದರು.

ಸಭೆಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾಮೋಹನ್ ದಾಸ್ ಅಗರ್ವಾಲ್, ಸಂಸದೀಯ ಮಂಡಳಿ ಸದಸ್ಯ ಹಾಗೂ ಮಾಜಿ ಸಿಎಂ ಯಡಿಯೂರಪ್ಪ, ಮಾಜಿ ಸಿಎಂ ಬೊಮ್ಮಾಯಿ, ಡಿವಿ ಸದಾನಂದಗೌಡ, ಮಾಜಿ ಸಚಿವರಾದ ಕೆ.ಎಸ್.ಈಶ್ವರಪ್ಪ, ಬಿ.ಶ್ರೀರಾಮುಲು, ಗೋವಿಂದ ಕಾರಜೋಳ, ವಿರೋಧ ಪಕ್ಷದ ನಾಯಕ ಆರ್.ಅಶೋಕ, ಡಾ.ಸಿ.ಎನ್.ಅಶ್ವತರಾಯರು, ಸಿ.ಟಿ.ರವಿ. ಸಹ ಉಪಸ್ಥಿತರಿದ್ದರು.

ಕರಂದ್ಲಾಜೆಗೆ ಇನ್ನೊಂದು ಭಾರಿ ಅವಕಾಶ ನೀಡಬಾರದು , ಮೋದಿ ಹೆಸರಿನಲ್ಲಿ ಅವರು ಮತ್ತೊಮ್ಮೆ ಗೆಲ್ಲುವುದು ಬೇಡ : ಉಡುಪಿ  ಜಿಲ್ಲಾಧ್ಯಕ್ಷರಿಗೆ ಮನವಿ ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು – Vishwanews24

ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಅಚ್ಚರಿಯ ಹೆಸರು?

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಲು ಹೆಚ್ಚಿನ ಕಾರ್ಯಕರ್ತರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹೊಸ ಅಭ್ಯರ್ಥಿಗೆ ಮಣೆ ಹಾಕುವ ಸಾಧ್ಯತೆ ಬಹುತೇಕ ಖಚಿತ ಎನ್ನಲಾಗಿದೆ. ಈ ನಡುವೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಟಿಕೆಟ್‌ಗಾಗಿ ಶೋಭಾ ಕರಂದ್ಲಾಜೆ ವಿರುದ್ಧ ನೇರವಾಗಿ ಅಖಾಡಕ್ಕೆ ಇಳಿದಿದ್ದು, ಮಾತ್ರವಲ್ಲದೆ ಪಕ್ಷಕ್ಕೂ ಡ್ಯಾಮೇಜ್ ಮಾಡುತ್ತಿರುವುದರಿಂದ ಅವರ ವಿರುದ್ಧ ರಾಜ್ಯ ಬಿಜೆಪಿ ಕೆಂಡಾಮಂಡಲವಾಗಿದೆ.

ಆದ್ದರಿಂದ ಹೊಸ ಅಭ್ಯರ್ಥಿಯಾಗಿ ಮಾಜಿ ಜಿಲ್ಲಾಧ್ಯಕ್ಷರಾದ ಕೆ.ಉದಯ ಕುಮಾರ್ ಶೆಟ್ಟಿ ಹೆಸರು ಕೇಳಿ ಬರುತ್ತಿದೆ.

ಬಾಂಬ್‌ ಇಟ್ಟವರು ದೇಶ ದ್ರೋಹಿಗಳು , ಮನುಷ್ಯತ್ವ, ಕರುಣೆ ಇಲ್ಲದವರನ್ನು ನಾವು ಯಾರೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ : ಸ್ಪೀಕರ್ ಯುಟಿ ಖಾದರ್ – Vishwanews24

Leave a Reply