Featured

2nd PUC Result: ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?​ ಇಲ್ಲಿದೆ ಮಾಹಿತಿ – Vishwanews24

2nd PUC Result: ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?​ ಇಲ್ಲಿದೆ ಮಾಹಿತಿ

ಬೆಂಗಳೂರು : ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ  ಪ್ರಕಟಗೊಂಡಿದ್ದು, ಶೇ 81.15 ಮಂದಿ ಉತ್ತೀರ್ಣಗೊಂಡಿದ್ದಾರೆ. 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕಲಾ ವಿಭಾಗದಲ್ಲಿ 1,28,448 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೇ, ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಅನೇಕ ವಿದ್ಯಾರ್ಥಿಗಳಿಗೆ ತಮಗೆ ಬರಬೇಕಾದ ಅಂಕ ಬಂದಿಲ್ಲ ಅಥವಾ ಸಂದೇಹಗಳಿದ್ದರೇ, ಅಥವಾ ಉತ್ತರ ಪತ್ರಿಕೆಗಳ ಸ್ಕ್ಯಾನ್ಡ್​​ ಪ್ರತಿಗಾಗಿ, ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶವಿದೆ ಎಂದು ಮೌಲ್ಯಮಾಪನ ಮಂಡಳಿ ಹೇಳಿದೆ.

ಉತ್ತರ ಪತ್ರಿಕೆ ಸ್ಕ್ಯಾನ್ಡ್​​​ ಪ್ರತಿಯನ್ನು ಪಡೆಯಲು ಏಪ್ರಿಲ್​ 16ರ ತನಕ ಅರ್ಜಿ ಸಲ್ಲಿಸಬಹುದು. ಉತ್ತರ ಪತ್ರಿಕೆ ಸ್ಕ್ಯಾನ್ಡ್​​ ಪ್ರತಿಯನ್ನು ಡೌನ್​ಲೋಡ್ ಮಾಡಿಕೊಳ್ಳಲು ಏಪ್ರಿಲ್​ 19ರ ತನಕ, ಮತ್ತು ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಏಪ್ರಿಲ್​ 14 ರಿಂದ 20ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.

ದ್ವೀತಿಯ ಪಿಯುಸಿ ಪರೀಕ್ಷೆ 1ರ ವಿದ್ಯಾರ್ಥಿಗಳ ಫಲಿತಾಂಶ ಪ್ರತಿಯನ್ನು ಕೆಎಸ್​ಇಬಿಯು ಈಗಾಗಲೆ ಆಯಾ ಕಾಲೇಜು ಮಂಡಳಿಗಳಿಗೆ ಕಳುಹಿಸಿದೆ. ಇನ್ನು ಪರೀಕ್ಷೆ-2ಕ್ಕೆ ಅರ್ಜಿ ಸಲ್ಲಿಸುವವರು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬೇಕಿಲ್ಲ. ಮರು ಮೌಲ್ಯಮಾಪನದ ಮತ್ತು ಮರು ಎಣಿಕೆಯ ಫಲಿತಾಂಶವನ್ನು ಮಂಡಳಿಯು, kseab.karnataka.gov.inಎಂಬ ವೆಬ್​ಸೈಟ್​ನಲ್ಲಿ ಪ್ರಕಟಿಸಲಿದೆ.

 

 

 

ಉತ್ತರ ಪತ್ರಿಕೆಗಳ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಈ ಕೆಳಗಿನ ಸೂಚನೆಗಳನ್ನು ಅನುಸರಿಸುವ ಮೂಲಕ ಅರ್ಜಿ ಸಲ್ಲಿಸಿ:
  • ಅಧಿಕೃತ ವೆಬ್‌ಸೈಟ್ – kseab.karnataka.gov.in ಗೆ ಭೇಟಿ ನೀಡಿ
  • ಸ್ಕ್ಯಾನ್ ಮಾಡಿದ ಪ್ರತಿಗಳ ಅರ್ಜಿ ನಮೂನೆಗಾಗಿ ಲಿಂಕ್ ಅನ್ನು ಕ್ಲಿಕ್ ಮಾಡಿ
  • ಅರ್ಜಿ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ
  • ಫಾರ್ಮ್ ಜೊತೆಗೆ ಅರ್ಜಿ ಶುಲ್ಕವನ್ನು ಸಲ್ಲಿಸಿ
  • ಭವಿಷ್ಯದ ಉಲ್ಲೇಖಕ್ಕಾಗಿ ಸ್ವೀಕೃತಿ ಫಾರ್ಮ್ ಡೌನ್‌ಲೋಡ್ ಮಾಡಿ

ಸ್ಕ್ಯಾನ್ ಮಾಡಿದ ಪ್ರತಿಗಳಿಗೆ ಅರ್ಜಿ ಸಲ್ಲಿಸಿದ ನಂತರ, ಅಭ್ಯರ್ಥಿಗಳು ತಮ್ಮ ಸ್ಕ್ಯಾನ್ ಮಾಡಿದ ಉತ್ತರ ಪತ್ರಿಕೆಗಳ ಪಿಡಿಎಫ್ ಅನ್ನು ಸ್ವೀಕರಿಸುತ್ತಾರೆ. ನಂತರ ಅವರು ಮರುಪರಿಶೀಲಿಸಲು ಬಯಸುವ ಉತ್ತರಗಳನ್ನು ಶಾರ್ಟ್‌ಲಿಸ್ಟ್ ಮಾಡಬಹುದು. ಮರುಮೌಲ್ಯಮಾಪನ ಅರ್ಜಿಯುನ್ನು ಕೂಡ ಮೇಲೆ ತಿಳಿಸಿದ ವಿಧಾನದ ಮೂಲಕ ಭರ್ತಿ ಮಾಡಿ. ಪ್ರತಿ ವಿಷಯದ ಸ್ಕ್ಯಾನ್​ ಮಾಡಿದ ಪ್ರತಿಗೆ 530ರೂ. ನಿಗದಿಪಡಿಸಲಾಗಿದೆ. ಪ್ರತಿ ವಿಷಯದ ಮೌಲ್ಯಮಾಪನಕ್ಕೆ 1,670 ರೂ. ನಿಗದಿ ಮಾಡಲಾಗಿದೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

22 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago