2ನೇ ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ‘ಭೂಪೇಂದ್ರ ಪಟೇಲ್ : ಡಿ.12ರಂದು ಪ್ರಮಾಣ ವಚನ ಸ್ವೀಕಾರ – Vishwanews24
2ನೇ ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ‘ಭೂಪೇಂದ್ರ ಪಟೇಲ್ : ಡಿ.12ರಂದು ಪ್ರಮಾಣ ವಚನ ಸ್ವೀಕಾರ
ಬಿಜೆಪಿ ನಾಯಕ ಮತ್ತು ಹಾಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಗುಜರಾತ್’ನ 17 ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಭಾರತೀಯ ಜನತಾ ಪಕ್ಷವು ಗುಜರಾತ್’ನಲ್ಲಿ ಪ್ರಚಂಡ ಚುನಾವಣಾ ಗೆಲುವಿಗೆ ಸಜ್ಜಾಗಿದೆ.
ಭಾರತೀಯ ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, ಗುಜರಾತ್ನ 182 ಸದಸ್ಯರ ವಿಧಾನಸಭೆಯಲ್ಲಿ ಬಿಜೆಪಿ 154 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

‘ಗುಜರಾತ್ ಚುನಾವಣೆಯ ಫಲಿತಾಂಶಗಳು ಸಾಕಷ್ಟು ಸ್ಪಷ್ಟವಾಗಿವೆ. ಗುಜರಾತ್’ನಲ್ಲಿ ಅಭಿವೃದ್ಧಿಯ ಪಯಣವನ್ನ ಮುಂದುವರಿಸಲು ಜನರು ಮನಸ್ಸು ಮಾಡಿದ್ದಾರೆ. ನಾವು ಜನರ ಜನಾದೇಶವನ್ನು ವಿನಮ್ರತೆಯಿಂದ ಸ್ವೀಕರಿಸುತ್ತೇವೆ. ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರು ಸಾರ್ವಜನಿಕ ಸೇವೆಗೆ ಬದ್ಧರಾಗಿದ್ದಾರೆ’ ಎಂದು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೇಳಿದ್ದಾರೆ.
