ಬೆಂಗಳೂರು: ನಗುವಿನ ಅರಸ ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಅಗಲಿಕೆಗೆ ಭರ್ತಿ ಮೂರು ವರ್ಷ. 3 ವರ್ಷವಲ್ಲ, ಇನ್ನೂ ನೂರು ವರ್ಷ ಕಳೆದರೂ ಅಪ್ಪು ಮರೆಯಲಾಗದ ಮಾಣಿಕ್ಯ. 3ನೇ ವರ್ಷದ ಅಪ್ಪು ಪುಣ್ಯ ಸ್ಮರಣೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಭಾಗಿಯಾಗಿದ್ದಾರೆ.
ನಗುಮೊಗದ ಒಡೆಯ ಪುನೀತ್ ಸ್ಟಾರ್ ಬ್ಯಾಕ್ಗ್ರೌಂಡ್ನಿಂದ ಬಂದಿದ್ದರೂ ಹಮ್ಮು ಬಿಮ್ಮಿಲ್ಲದೇ ಎಲ್ಲರನ್ನೂ ತನ್ನವರೆಂದು ಬಾಚಿ ತಬ್ಬಿಕೊಳ್ಳುತ್ತಿದ್ದರು. ಹೀಗಾಗಿಯೇ ಅವರನ್ನು ಎಲ್ಲರೂ ಪ್ರೀತಿಯಿಂದ ಅಪ್ಪು ಎಂದೇ ಕರೆಯುತ್ತಿದ್ದರು. ಅಪ್ಪು ಕಳೆದುಕೊಂಡು ಇಂದಿಗೆ ಭರ್ತಿ ಮೂರು ವರ್ಷಗಳು. ಇಂದಿಗೂ ಕೂಡಾ ಅವರನ್ನು ಕಳೆದುಕೊಂಡ ದುಃಖ ಮಾತ್ರ ಅವರ ಭಕ್ತಗಣದ ಎದೆಯಿಂದ ಮಾಸಿಲ್ಲ.
ಅಪ್ಪು 3ನೇ ವರ್ಷದ ಪುಣ್ಯಸ್ಮರಣೆಯಲ್ಲಿ ಪತ್ನಿ ಅಶ್ವಿನಿ, ರಾಘವೇಂದ್ರ ರಾಜ್ಕುಮಾರ್, ವಿನಯ್ ರಾಜ್ಕುಮಾರ್, ಯುವರಾಜ್ ಕುಮಾರ್, ಅಪ್ಪು ಪುತ್ರಿಯರು ಭಾಗಿಯಾಗಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ಬಳಿ ಇಷ್ಟದ ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಸಮಾಧಿಯನ್ನ ವಿಶೇಷವಾಗಿ ಹೂವುಗಳಿಂದ, ದೀಪಗಳಿಂದ ಅಲಂಕಾರ ಮಾಡಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳ ದಂಡು ಅಪ್ಪು ಸಮಾಧಿ ಬಳಿ ಜಮಾಯಿಸಿ ನೆಚ್ಚಿನ ನಟನಿಗೆ ನಮನ ಸಲ್ಲಿಸುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…