Featured

3ನೇ ವರ್ಷದ ಅಪ್ಪು ಪುಣ್ಯ ಸ್ಮರಣೆ : ಕುಟುಂಬಸ್ಥರಿಂದ ಸಮಾಧಿಗೆ ಪೂಜೆ – vishwanews24

3ನೇ ವರ್ಷದ ಅಪ್ಪು ಪುಣ್ಯ ಸ್ಮರಣೆ : ಕುಟುಂಬಸ್ಥರಿಂದ ಸಮಾಧಿಗೆ ಪೂಜೆ

ಬೆಂಗಳೂರು: ನಗುವಿನ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿಕೆಗೆ ಭರ್ತಿ ಮೂರು ವರ್ಷ. 3 ವರ್ಷವಲ್ಲ, ಇನ್ನೂ ನೂರು ವರ್ಷ ಕಳೆದರೂ ಅಪ್ಪು ಮರೆಯಲಾಗದ ಮಾಣಿಕ್ಯ. 3ನೇ ವರ್ಷದ ಅಪ್ಪು ಪುಣ್ಯ ಸ್ಮರಣೆಯಲ್ಲಿ ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳು ಭಾಗಿಯಾಗಿದ್ದಾರೆ.

ನಗುಮೊಗದ ಒಡೆಯ ಪುನೀತ್‌ ಸ್ಟಾರ್ ಬ್ಯಾಕ್‌ಗ್ರೌಂಡ್‌ನಿಂದ ಬಂದಿದ್ದರೂ ಹಮ್ಮು ಬಿಮ್ಮಿಲ್ಲದೇ ಎಲ್ಲರನ್ನೂ ತನ್ನವರೆಂದು ಬಾಚಿ ತಬ್ಬಿಕೊಳ್ಳುತ್ತಿದ್ದರು. ಹೀಗಾಗಿಯೇ ಅವರನ್ನು ಎಲ್ಲರೂ ಪ್ರೀತಿಯಿಂದ ಅಪ್ಪು ಎಂದೇ ಕರೆಯುತ್ತಿದ್ದರು. ಅಪ್ಪು ಕಳೆದುಕೊಂಡು ಇಂದಿಗೆ ಭರ್ತಿ ಮೂರು ವರ್ಷಗಳು. ಇಂದಿಗೂ ಕೂಡಾ ಅವರನ್ನು ಕಳೆದುಕೊಂಡ ದುಃಖ ಮಾತ್ರ ಅವರ ಭಕ್ತಗಣದ ಎದೆಯಿಂದ ಮಾಸಿಲ್ಲ.

ಅಪ್ಪು 3ನೇ ವರ್ಷದ ಪುಣ್ಯಸ್ಮರಣೆಯಲ್ಲಿ ಪತ್ನಿ ಅಶ್ವಿನಿ, ರಾಘವೇಂದ್ರ ರಾಜ್‌ಕುಮಾರ್, ವಿನಯ್ ರಾಜ್‌ಕುಮಾರ್, ಯುವರಾಜ್ ಕುಮಾರ್, ಅಪ್ಪು ಪುತ್ರಿಯರು ಭಾಗಿಯಾಗಿದ್ದಾರೆ. ಕಂಠೀರವ ಸ್ಟುಡಿಯೋದಲ್ಲಿ ಅಪ್ಪು ಸಮಾಧಿ ಬಳಿ ಇಷ್ಟದ ತಿನಿಸುಗಳನ್ನಿಟ್ಟು ಪೂಜೆ ಸಲ್ಲಿಸಿದ್ದಾರೆ. ಸಮಾಧಿಯನ್ನ ವಿಶೇಷವಾಗಿ ಹೂವುಗಳಿಂದ, ದೀಪಗಳಿಂದ ಅಲಂಕಾರ ಮಾಡಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದ ಅಭಿಮಾನಿಗಳ ದಂಡು ಅಪ್ಪು ಸಮಾಧಿ ಬಳಿ ಜಮಾಯಿಸಿ ನೆಚ್ಚಿನ ನಟನಿಗೆ ನಮನ ಸಲ್ಲಿಸುತ್ತಿದ್ದಾರೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

5 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

7 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

7 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

7 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

8 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

8 hours ago