Featured

3 ತಿಂಗಳ ಬಳಿಕ ಕುಮಾರಸ್ವಾಮಿ ರಾಜೀನಾಮೆ ಬಿಎಸ್‌ವೈ ಮುಖ್ಯಮಂತ್ರಿ !!

ರಾಜ್ಯದಲ್ಲಿ‌ ಈ ಬಾರಿ ಚುನಾವಣೆಯಲ್ಲಿ‌ ಪಕ್ಕಾ ಜಾತಿ ಲೆಕ್ಕಾಚಾರ ವರ್ಕೌಟ್ ಆಗಿದ್ದು, ಲಿಂಗಾಯತರು ಬಿ.ಎಸ್ ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿ ಎಂದು ಬಯಸಿದ್ರು. ಆದ್ರೆ ಒಕ್ಕಲಿಗರು ಕುಮಾರಸ್ವಾಮಿ ಮುಖ್ಯಮಂತ್ರಿ ಆಗಲೇ ಬೇಕೆಂದು ಪಣತೊಟ್ಟಿದ್ದರು. ಕೊನೆಗೆ‌ ಒಕ್ಕಲಿಗ ಸಮುದಾಯದ ನಿರೀಕ್ಷೆಯಂತೆ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ. ಆದರೆ ಲಿಂಗಾಯತ ಸ್ವಾಮೀಜಿಗಳು ಮಾತ್ರ ಅಲ್ಲೊಂದು ಇಲ್ಲೊಂದು ಹೇಳಿಕೆ ಕೊಡುತ್ತಲೇ ಇದ್ದಾರೆ.

ಇದೀಗ ರಂಭಾಪುರಿ ಮಠದ ಶ್ರೀಗಳು ಮಾತನಾಡಿದ್ದು ಅಕ್ಟೋಬರ್ ಎರಡನೇ ವಾರದಲ್ಲಿ ಸಮ್ಮಿಶ್ರ ಸರ್ಕಾರ ಉರುಳುತ್ತೆ, ಮತ್ತೇ ಯಡಿಯೂರಪ್ಪ ಮುಖ್ಯಮಂತ್ರಿ ಆಗ್ತಾರೆ ಎಂದು ಭವಿಷ್ಯ ಹೇಳ್ತಿದ್ದಾರೆ. ಯಡಿಯೂರಪ್ಪ ಅವರ ಜಾತಕ ಕುಂಡಲಿಯಲ್ಲಿ ಈ ಮಹಾಯೋಗ ಇದೆ. ಹೀಗಾಗಿ ಅಕ್ಟೋಬರ್ ಎರಡನೇ ವಾರದಲ್ಲಿ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗ್ತಾರೆ, ಅವರ ಕುಂಡಳಿ ಪ್ರಕಾರ ಅವರಿಗೆ ಯೋಗ ಇದೆ ಎಂದಿದ್ದಾರೆ. ಅಕ್ಟೋಬರ್ ಎರಡನೇ ವಾರದ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸುವ ‌ಯೋಗ ಇದೆ. ಯಡಿಯೂರಪ್ಪ ಖಂಡಿತವಾಗಿ ಮುಖ್ಯಮಂತ್ರಿಯಾಗ್ತಾರೆ, ಯಡಿಯೂರಪ್ಪರ ದಿಟ್ಟತನ ಎಲ್ಲರಿಗೂ ಮಾದರಿ, ಕಷ್ಟ ಸಹಿಸಿಕೊಂಡು ಅವರು ಮುಂದೆ ಹೋಗುತಿದ್ದಾರೆ, ಹಾಗಾಗಿ ಅವರಿಗೆ ಮುಂದೆ ಯೋಗ ಕಾದಿದೆ ಎಂದು ತುಮಕೂರಿನ ನೋಣವಿನಕೆರೆ ಕಾಡುಸಿದ್ದೇಶ್ವರ ಮಠದ ಸ್ವಾಮೀಜಿ  ಹೇಳಿದ್ದಾರೆ.

ರಂಭಾಪುರಿ ಸ್ವಾಮೀಜಿ ಹೇಳಿರುವ ಪ್ರಕಾರ ಅಕ್ಟೋಬರ್ ಮೊದಲ ವಾರದಲ್ಲಿ ಕುಮಾರಸ್ವಾಮಿ ಸರ್ಕಾರ ಪತನ ಆಗಬೇಕಿದೆ. ಆದರೆ ಲೋಕಸಭೆ ತನಕ ಸರ್ಕಾರಕ್ಕೆ ಯಾವುದೇ ಕಾರಣಕ್ಕೂ ತೊಂದರೆ ಬರುವುದಿಲ್ಲ ಎಂದು ಸ್ವತಃ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಿದ್ದಾರೆ. ಇದನ್ನು ಕುಮಾರಸ್ವಾಮಿ ಅವರೂ ಕೂಡ  ಕೇಳಿದ್ದು, ಒಂದು ವರ್ಷ ಕಾಲ ನನ್ನನ್ನು ಅಲುಗಾಡಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದಿದ್ದಾರೆ.

ಇನ್ನೂ ಬಿಜೆಪಿ ಪಕ್ಷ ಆಪರೇಷನ್ ಕಮಲ ಮಾಡುವ ಮೂಲಕ ವಿಧಾನಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿ ಅಧಿಕಾರ ಹಿಡಿಯುವ ಸಂಭವ ಇದೆ ಅನ್ನೋದಕ್ಕೂ ಸಾಧ್ಯವಿಲ್ಲ. ಯಾಕಂದ್ರೆ ಒಮ್ಮೆ ಸದನದಲ್ಲಿ ವಿಶ್ವಾಸಮತ ಗೆಲುವು ಸಾಧಿಸಿದ್ರೆ ಮತ್ತೆ ಅವಿಶ್ವಾಸ ಮಂಡನೆಗೆ 6 ತಿಂಗಳ ಅಂತ ಇರಬೇಕು. ಸ್ವಾಮೀಜಿ ಹೇಳಿದ ಸಮಯ ಅದಕ್ಕೂ ಹೊಂದಾಣಿಕೆ ಆಗ್ತಿಲ್ಲ. ಒಟ್ಟಾರೆ ರಂಭಾಪುರಿ ಶ್ರೀಗಳು ಹೇಳಿದ್ದಾರೆ. ಯಡಿಯೂರಪ್ಪ ಅವರ ಕುಂಡಲಿ ನೋಡಿ ಹೇಳಿದ್ರೋ ಅಥವಾ ಯಡಿಯೂರಪ್ಪ ಅವರನ್ನು ಜಾತಿ ಆಧಾರಿತವಾಗಿ ಓಲೈಸಲು ಹೇಳಿದ್ರೋ ಅನ್ನೋದು ಮೂರು ತಿಂಗಳ ಬಳಿಕವಷ್ಟೇ ಗೊತ್ತಾಗಬೇಕಿದೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago