ದೇವನಹಳ್ಳಿ : ಪ್ರೀತಿ, ಮದುವೆ ಎಂಬ ನಾಟಕವಾಡಿ ಪುರುಷರನ್ನು ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ಹಣ ದೋಚುತ್ತಿದ್ದ ಕಿರಾತಕ ಮಹಿಳೆಯೊಬ್ಬಳ ಅಸಲಿ ಮುಖ ಇದೀಗ ದೊಡ್ಡಬಳ್ಳಾಪುರದಲ್ಲಿ ಬಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅಣಬೆ ಗ್ರಾಮದ ಸುಧಾರಾಣಿ ವಿರುದ್ಧ ಆರೋಪ ಕೇಳಿಬಂದಿದ್ದು, ಮೊದಲ ಹಾಗೂ ಎರಡನೇ ಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಸುಧಾರಾಣಿ ಹಣವಿರುವವರನ್ನೇ ಗುರಿಯಾಗಿಸಿಕೊಂಡು ವಂಚಿಸುತ್ತಿದ್ದಳು ಎನ್ನಲಾಗಿದೆ.
ಸುಧಾರಾಣಿ ಮೊದಲು ವೀರೆಗೌಡ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದಳು. ದಂಪತಿಗೆ ಇಬ್ಬರು ಮಕ್ಕಳೂ ಜನಿಸಿದ್ದರು. ಆದರೆ, ದಾಂಪತ್ಯ ಜೀವನದ ನಡುವೆಯೇ ಪತಿಗೆ ‘ಕಾರು ಮತ್ತು ಬುಲೆಟ್ ಓಡಿಸಲು ಬರಲ್ಲ’ ಎಂಬ ಕ್ಷುಲ್ಲಕ ಕಾರಣ ನೀಡಿ, ಮಕ್ಕಳನ್ನು ಹಾಗೂ ವೀರೆಗೌಡರನ್ನು ತೊರೆದು ಹೋಗಿದ್ದಳು.
ಎರಡನೇ ಪತಿಗೆ 20 ಲಕ್ಷ ರೂ. ಪಂಗನಾಮ
ಮೊದಲ ಪತಿಯಿಂದ ದೂರಾದ ಸುಧಾರಾಣಿ, ನಂತರ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಅನಂತಮೂರ್ತಿ ಎಂಬುವವರನ್ನು ಸಂಪರ್ಕಿಸಿದ್ದಳು. ಗಂಡ ತೀರಿಹೋಗಿದ್ದಾರೆ ಎಂದು ಸುಳ್ಳು ಹೇಳಿ ಆತನನ್ನು ನಂಬಿಸಿ, ದೇವಸ್ಥಾನವೊಂದರಲ್ಲಿ ಸರಳವಾಗಿ ಮದುವೆಯಾಗಿದ್ದಳು. ಸುಮಾರು ಒಂದೂಕಾಲು ವರ್ಷಗಳ ಕಾಲ ಅನಂತಮೂರ್ತಿ ಜೊತೆ ಸಂಸಾರ ಮಾಡಿದ್ದಳು. ಈ ಅವಧಿಯಲ್ಲಿ ವಿವಿಧ ಕಾರಣಗಳನ್ನು ನೀಡಿ ಸುಮಾರು 15 ರಿಂದ 20 ಲಕ್ಷ ರೂಪಾಯಿ ಹಣವನ್ನು ಪಡೆದಿದ್ದಳು ಎಂದು ಆರೋಪಿಸಲಾಗಿದೆ.
ಎರಡನೇ ಪತಿಗೆ ಪಂಗನಾಮ ಹಾಕಿದ ನಂತರ ಮೂರನೇ ಮದುವೆ
ಅನಂತಮೂರ್ತಿಯಿಂದ ಹಣ ಪಡೆದ ನಂತರ ಆತನನ್ನೂ ತೊರೆದಿರುವ ಸುಧಾರಾಣಿ, ಇದೀಗ ಕನಕಪುರ ಮೂಲದ ಮತ್ತೊಬ್ಬ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ ಎಂದು ತಿಳಿದುಬಂದಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಮೊದಲ ಪತಿ ವೀರೆಗೌಡ ಮತ್ತು ಎರಡನೇ ಪತಿ ಅನಂತಮೂರ್ತಿ ಒಟ್ಟಾಗಿ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಗೆ ತೆರಳಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
ಈಕೆ ಕೇವಲ ಹಣಕ್ಕಾಗಿ ಶ್ರೀಮಂತರನ್ನು ಮತ್ತು ಅಮಾಯಕರನ್ನು ಗುರಿಯಾಗಿಸಿಕೊಂಡು ವಂಚಿಸುತ್ತಿದ್ದಾಳೆ. ಇಂತಹ ಮಹಿಳೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತ ಪತಿಯರು ಒತ್ತಾಯಿಸಿದ್ದಾರೆ. ಸದ್ಯ ದೊಡ್ಡಬಳ್ಳಾಪುರ ಪೊಲೀಸರು ಈ ಕುರಿತು ದೂರು ದಾಖಲಿಸಿಕೊಂಡಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…