Featured

3 ಮದುವೆ – ಲಕ್ಷಾಂತರ ರೂ. ಹಣ ಪಡೆದು ವಂಚನೆ : ಖತರ್ನಾಕ್ ಮಹಿಳೆ ವಿರುದ್ಧ ಠಾಣೆ ಮೆಟ್ಟಿಲೇರಿದ ಗಂಡಂದಿರು – vishwanews24

3 ಮದುವೆ – ಲಕ್ಷಾಂತರ ರೂ. ಹಣ ಪಡೆದು ವಂಚನೆ : ಖತರ್ನಾಕ್ ಮಹಿಳೆ ವಿರುದ್ಧ ಠಾಣೆ ಮೆಟ್ಟಿಲೇರಿದ ಗಂಡಂದಿರು

ದೇವನಹಳ್ಳಿ : ಪ್ರೀತಿ, ಮದುವೆ ಎಂಬ ನಾಟಕವಾಡಿ ಪುರುಷರನ್ನು ನಂಬಿಸಿ ಅವರಿಂದ ಲಕ್ಷಾಂತರ ರೂಪಾಯಿ ಹಣ ದೋಚುತ್ತಿದ್ದ ಕಿರಾತಕ ಮಹಿಳೆಯೊಬ್ಬಳ ಅಸಲಿ ಮುಖ ಇದೀಗ ದೊಡ್ಡಬಳ್ಳಾಪುರದಲ್ಲಿ ಬಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಅಣಬೆ ಗ್ರಾಮದ ಸುಧಾರಾಣಿ ವಿರುದ್ಧ ಆರೋಪ ಕೇಳಿಬಂದಿದ್ದು, ಮೊದಲ ಹಾಗೂ ಎರಡನೇ ಪತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಸುಧಾರಾಣಿ ಹಣವಿರುವವರನ್ನೇ ಗುರಿಯಾಗಿಸಿಕೊಂಡು ವಂಚಿಸುತ್ತಿದ್ದಳು ಎನ್ನಲಾಗಿದೆ.

ಬುಲೆಟ್ ಓಡಿಸಲು ಬರಲ್ಲ ಎಂದು ಮೊದಲ ಪತಿಗೆ ಕೈಕೊಟ್ಟಿದ್ದಳು

ಸುಧಾರಾಣಿ ಮೊದಲು ವೀರೆಗೌಡ ಎಂಬುವವರನ್ನು ಪ್ರೀತಿಸಿ ಮದುವೆಯಾಗಿದ್ದಳು. ದಂಪತಿಗೆ ಇಬ್ಬರು ಮಕ್ಕಳೂ ಜನಿಸಿದ್ದರು. ಆದರೆ, ದಾಂಪತ್ಯ ಜೀವನದ ನಡುವೆಯೇ ಪತಿಗೆ ‘ಕಾರು ಮತ್ತು ಬುಲೆಟ್ ಓಡಿಸಲು ಬರಲ್ಲ’ ಎಂಬ ಕ್ಷುಲ್ಲಕ ಕಾರಣ ನೀಡಿ, ಮಕ್ಕಳನ್ನು ಹಾಗೂ ವೀರೆಗೌಡರನ್ನು ತೊರೆದು ಹೋಗಿದ್ದಳು.

ಎರಡನೇ ಪತಿಗೆ 20 ಲಕ್ಷ ರೂ. ಪಂಗನಾಮ

ಮೊದಲ ಪತಿಯಿಂದ ದೂರಾದ ಸುಧಾರಾಣಿ, ನಂತರ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಅನಂತಮೂರ್ತಿ ಎಂಬುವವರನ್ನು ಸಂಪರ್ಕಿಸಿದ್ದಳು. ಗಂಡ ತೀರಿಹೋಗಿದ್ದಾರೆ ಎಂದು ಸುಳ್ಳು ಹೇಳಿ ಆತನನ್ನು ನಂಬಿಸಿ, ದೇವಸ್ಥಾನವೊಂದರಲ್ಲಿ ಸರಳವಾಗಿ ಮದುವೆಯಾಗಿದ್ದಳು. ಸುಮಾರು ಒಂದೂಕಾಲು ವರ್ಷಗಳ ಕಾಲ ಅನಂತಮೂರ್ತಿ ಜೊತೆ ಸಂಸಾರ ಮಾಡಿದ್ದಳು. ಈ ಅವಧಿಯಲ್ಲಿ ವಿವಿಧ ಕಾರಣಗಳನ್ನು ನೀಡಿ ಸುಮಾರು 15 ರಿಂದ 20 ಲಕ್ಷ ರೂಪಾಯಿ ಹಣವನ್ನು ಪಡೆದಿದ್ದಳು ಎಂದು ಆರೋಪಿಸಲಾಗಿದೆ.

ಎರಡನೇ ಪತಿಗೆ ಪಂಗನಾಮ ಹಾಕಿದ ನಂತರ ಮೂರನೇ ಮದುವೆ

ಅನಂತಮೂರ್ತಿಯಿಂದ ಹಣ ಪಡೆದ ನಂತರ ಆತನನ್ನೂ ತೊರೆದಿರುವ ಸುಧಾರಾಣಿ, ಇದೀಗ ಕನಕಪುರ ಮೂಲದ ಮತ್ತೊಬ್ಬ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ ಎಂದು ತಿಳಿದುಬಂದಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಮೊದಲ ಪತಿ ವೀರೆಗೌಡ ಮತ್ತು ಎರಡನೇ ಪತಿ ಅನಂತಮೂರ್ತಿ ಒಟ್ಟಾಗಿ ದೊಡ್ಡಬಳ್ಳಾಪುರ ಪೊಲೀಸ್ ಠಾಣೆಗೆ ತೆರಳಿ ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.

ಈಕೆ ಕೇವಲ ಹಣಕ್ಕಾಗಿ ಶ್ರೀಮಂತರನ್ನು ಮತ್ತು ಅಮಾಯಕರನ್ನು ಗುರಿಯಾಗಿಸಿಕೊಂಡು ವಂಚಿಸುತ್ತಿದ್ದಾಳೆ. ಇಂತಹ ಮಹಿಳೆಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂತ್ರಸ್ತ ಪತಿಯರು ಒತ್ತಾಯಿಸಿದ್ದಾರೆ. ಸದ್ಯ ದೊಡ್ಡಬಳ್ಳಾಪುರ ಪೊಲೀಸರು ಈ ಕುರಿತು ದೂರು ದಾಖಲಿಸಿಕೊಂಡಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

3 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

3 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

3 hours ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

3 hours ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

4 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

4 hours ago