Featured

370ನೇ ವಿಧಿಯನ್ನು ರದ್ದು : ದೇಶದ ಸಮಗ್ರತೆ ಹಾಗೂ ಏಕತೆಗೆ ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಈ ತೀರ್ಮಾನ ಸ್ವಾಗತಾರ್ಹ : ಶಾಸಕ ಹರೀಶ್ ಪೂಂಜ -Vishwanews24

ಬೆಳ್ತಂಗಡಿ: ಕೇಂದ್ರ ಸರಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸುವ ಮೂಲಕ ಇಚ್ಚಾಶಕ್ತಿಯನ್ನು ಪ್ರದರ್ಶಿಸಿದ್ದು, ಭಾರತವನ್ನು ಪರಿಪೂರ್ಣ ಗಣರಾಜ್ಯಾವನ್ನಾಗಿಸಿದೆ.

ಇಂತಹ ಐತಿಹಾಸಿಕ ಕ್ಷಣಕ್ಕೆ ಇಡೀ ರಾಷ್ಟ್ರವೇ ಕಳೆದ ಏಳು ದಶಕಗಳಿಂದ ಕಾತರಿಸುತ್ತಿದ್ದು, ದೇಶದ ಸಮಗ್ರತೆ ಹಾಗೂ ಏಕತೆಗೆ ಪ್ರಧಾನಿ ನರೇಂದ್ರ ಮೋದಿ ಕೈಗೊಂಡ ಈ ತೀರ್ಮಾನ ಸ್ವಾಗತಾರ್ಹ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತಪಡಿಸಿದ್ದಾರೆ.

75 ವರ್ಷಗಳ ಹಿಂದೆ ಜಪಾನಿನ ಹಿರೋಶಿಮಾ ಮತ್ತು ನಾಗಸಾಕಿಯಲ್ಲಿ ಅಮೇರಿಕಾದ ಅಣು ದಾಳಿಯಿಂದ ಇಡೀ ಮನುಕುಲವೇ ಸಂಕಷ್ಟಕ್ಕೆ ಒಳಗಾಗಿ ವಿನಾಶದ ಅಂಚಿಗೆ ಬಂದಿತ್ತು ಆದರೆ ಇಂದಿನ ಕೇಂದ್ರ ಸರಕಾರದ ಈ ನಿರ್ಧಾರದಿಂದ ಕಾಶ್ಮೀರದಲ್ಲಿ ಭಯೋತ್ಪಾದನಾ ಚಟುವಟಿಕೆ ನಾಶವಾಗಿ, ನಾಡು ಸುಭೀಕ್ಷೆಗೊಳ್ಳಲಿದೆ.

ಇಂದಿನ ಐತಿಹಾಸಿಕ ಕ್ರಮದಿಂದ ಕಾಶ್ಮೀರದ ಉಳಿವಿಗಾಗಿ ಬಲಿದಾನಗೈದ ಡಾ.ಶ್ಯಾಮಪ್ರಸಾದ್ ಮುಖರ್ಜಿ ಅವರ ಆಶಯ ಈಡೇರಿದೆ. ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪರಿಕಲ್ಪನೆ ಅಕ್ಷರಶಃ ನಿಜವಾಗಿದೆ. ಮಂದಿನ ದಿನಗಳಲ್ಲಾದರೂ ವಿರೋಧಿಸುವ ವಿಪಕ್ಷಗಳು ಹಾಗೂ ಸ್ವಘೋಷಿತ ಬುದ್ಧಿಜೀವಿಗಳು ಪ್ರಧಾನಮಂತ್ರಿಯವರ ಈ ಸತ್ಕಾರ್ಯದಲ್ಲಿ ಸಹಕರಿಸಿ, ಕಾಶ್ಮೀರದ ಐತಿಹಾಸಿಕ ಗತವೈಭವವನ್ನು ಮರಳಿ ಸ್ಥಾಪಿಸುವಲ್ಲಿ ನೆರವಾಗಲಿ ಎಂದು ಶಾಸಕ ಹರೀಶ್ ಪೂಂಜ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago