ಕೊರೋನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ : ಕುಮಾರಸ್ವಾಮಿ -Vishwanews24

Featured, ರಾಜ್ಯ ನ್ಯೂಸ್

ಕೊರೋನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ : ಕುಮಾರಸ್ವಾಮಿ -Vishwanews24

ಬೆಂಗಳೂರು, : ”ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ” ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ನಾಯಕ ಹೆಚ್‌ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”ಡಿ.16 ನನ್ನ‌ ಜನ್ಮದಿನ. ಕೊರೋನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ. ಆ ದಿನ ಬೆಂಗಳೂರಿನಲ್ಲಿ ನಾನು ಲಭ್ಯವಿರುವುದಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನೀವಿರುವಲ್ಲಿಂದಲೆ ನನ್ನನ್ನು ಹಾರೈಸಿ. ನಿಮ್ಮ ಪ್ರೀತಿ ಅಭಿಮಾನ ದೊಡ್ಡದು” ಎಂದು ಹೇಳಿದ್ದಾರೆ.

”ಪ್ರತಿ ಜನ್ಮದಿನಗಳು ನಮ್ಮ ಇರುವಿಕೆಯನ್ನು ನೆನಪಿಸುತ್ತವೆ ನಿಜ, ಆದರೆ ಬದುಕಿದ್ದಷ್ಟು ದಿನ ಕಷ್ಟದಲ್ಲಿರುವ ಜನರ ಒಳಿತಿಗೆ ನಿಸ್ವಾರ್ಥವಾಗಿ, ಕಾರುಣ್ಯಭರಿತವಾಗಿ ದುಡಿದಾಗ ನಮ್ಮ‌ ಹುಟ್ಟು ಸಾರ್ಥಕವಾಗುತ್ತದೆ ಎಂಬುದು ನನ್ನ ನಂಬಿಕೆ ಮತ್ತು ನಡೆ” ಎಂದಿದ್ದಾರೆ.