ಬೆಂಗಳೂರು, : ”ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ” ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಡಿ.16 ನನ್ನ ಜನ್ಮದಿನ. ಕೊರೋನಾ ಸಂಕಷ್ಟವು ಜನರನ್ನು ಬಾಧಿಸುತ್ತಿರುವ ಈ ಹೊತ್ತಿನಲ್ಲಿ ಜನ್ಮದಿನ ಆಚರಿಸದಿರಲು ನಿರ್ಧರಿಸಿದ್ದೇನೆ. ಆ ದಿನ ಬೆಂಗಳೂರಿನಲ್ಲಿ ನಾನು ಲಭ್ಯವಿರುವುದಿಲ್ಲ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ನೀವಿರುವಲ್ಲಿಂದಲೆ ನನ್ನನ್ನು ಹಾರೈಸಿ. ನಿಮ್ಮ ಪ್ರೀತಿ ಅಭಿಮಾನ ದೊಡ್ಡದು” ಎಂದು ಹೇಳಿದ್ದಾರೆ.
”ಪ್ರತಿ ಜನ್ಮದಿನಗಳು ನಮ್ಮ ಇರುವಿಕೆಯನ್ನು ನೆನಪಿಸುತ್ತವೆ ನಿಜ, ಆದರೆ ಬದುಕಿದ್ದಷ್ಟು ದಿನ ಕಷ್ಟದಲ್ಲಿರುವ ಜನರ ಒಳಿತಿಗೆ ನಿಸ್ವಾರ್ಥವಾಗಿ, ಕಾರುಣ್ಯಭರಿತವಾಗಿ ದುಡಿದಾಗ ನಮ್ಮ ಹುಟ್ಟು ಸಾರ್ಥಕವಾಗುತ್ತದೆ ಎಂಬುದು ನನ್ನ ನಂಬಿಕೆ ಮತ್ತು ನಡೆ” ಎಂದಿದ್ದಾರೆ.
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…
ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…
ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…
Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ…
ಶೂಟಿಂಗ್ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…
ಉಡುಪಿ : ಮೂವರು ಪೊಲೀಸ್ ಸಿಬ್ಬಂದಿಗೆ ಸಿಎಂ ಚಿನ್ನದ ಪದಕ ಉಡುಪಿ: ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ ಸಲ್ಲಿಸಿದ ಹಿನ್ನೆಲೆಯಲ್ಲಿ…