3,800 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರಿಗೆ ಬಹುಮತ : ಸಿಎಂ ಯಡಿಯೂರಪ್ಪ -Vishwanews24

Featured, ರಾಜ್ಯ ನ್ಯೂಸ್

3,800 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರಿಗೆ ಬಹುಮತ ಲಭಿಸಿದೆ : ಸಿಎಂ ಯಡಿಯೂರಪ್ಪ -Vishwanews24

ಬೆಂಗಳೂರು: ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಶೇಕಡ 60ಕ್ಕಿಂತ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಬೆಂಬಲಿತರು ಗೆಲುವು ಸಾಧಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಗುರುವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು’ ‘ಒಟ್ಟು 5,728 ಗ್ರಾಮ ಪಂಚಾಯಿತಿಗಳ ಪೈಕಿ 3,800 ಗ್ರಾಮ ಪಂಚಾಯಿತಿಗಳಲ್ಲಿ ಬಿಜೆಪಿ ಬೆಂಬಲಿತರಿಗೆ ಬಹುಮತ ಲಭಿಸಿದೆ’ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿನ ಫಲವಾಗಿ ಬಿಜೆಪಿಗೆ ಈ ಜಯ ದೊರಕಿದೆ. ವಿಧಾನಸಭಾ ಕ್ಷೇತ್ರಗಳು ಉಪ ಚುನಾವಣೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಗೆಲುವು ದೊರಕಿದೆ. ಹಿಂದೆ ಬಿಜೆಪಿ ಗೆಲ್ಲದ ಕ್ಷೇತ್ರಗಳಲ್ಲೂ ಬಿಜೆಪಿಗೆ ಗೆಲುವು ಸಿಕ್ಕಿದೆ ಎಂದರು.

https://bit.ly/34XNVUg

ಕೋವಿಡ್ ಸಂಕಷ್ಟದ ನಡುವೆಯೂ ರಾಜ್ಯದ ಅಭಿವೃದ್ಧಿ ಕುಂಠಿತ ಆಗದಂತೆ ಸರ್ಕಾರ ಕೆಲಸ ಮಾಡುತ್ತಿದೆ. ಈ ವರ್ಷ ವರಮಾನ ಸಂಗ್ರಹದಲ್ಲಿ ₹30,000 ಕೋಟಿ ಕೊರತೆ ಆಗಲಿದೆ. ಆದರೂ, ಸಾಲ‌ ಪಡೆದು ಅಭಿವೃದ್ಧಿ ಕಾರ್ಯ ಮುಂದುವರಿಸಲಾಗುವುದು ಎಂದರು.

http://ಇಂದು ಮಧ್ಯಾಹ್ನದಿಂದ ಬೆಳಿಗ್ಗೆ 6 ರವರೆಗೆ ಬೆಂಗಳೂರಲ್ಲಿ ನಿಷೇಧಾಜ್ಞೆ, : ಯಡಿಯೂರಪ್ಪ -Vishwanews24 https://bit.ly/37YII0v

ರಾಜ್ಯವನ್ನು ಅಭಿವೃದ್ಧಿ ವಿಚಾರದಲ್ಲಿ ಮೊದಲ ಸ್ಥಾನಕ್ಕೇರಿಸುವುದೇ ತಮ್ಮ ಗುರಿ. ಬೇರೆ ಯಾವ ವಿಚಾರಗಳಿಗೂ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.

ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೋಳ, ಡಾ.ಸಿ.ಎನ್. ಅಶ್ವತ್ಥನಾರಾಯಣ, ಸಚಿವರಾದ ಆರ್. ಅಶೋಕ, ಬಸವರಾಜ ಬೊಮ್ಮಾಯಿ, ಎಸ್. ಸುರೇಶ್ ಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಇದ್ದರು.