ಬ್ರಿಟನ್ ರೂಪಾಂತರ ಕೊರೋನಾ : ಭಾರತಕ್ಕೆ ಪ್ರವೇಶಿಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ -Vishwanews24
ಬ್ರಿಟನ್ ರೂಪಾಂತರ ಕೊರೋನಾ : ಭಾರತಕ್ಕೆ ಪ್ರವೇಶಿಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ -Vishwanews24
ನವದೆಹಲಿ: ಬ್ರಿಟನ್ ನಲ್ಲಿ ಕಾಣಿಸಿಕೊಂಡಿರುವ ಕೊರೋನಾ ರೂಪಾಂತರ ಸೋಂಕು ಭಾರತಕ್ಕೆ ಪ್ರವೇಶಿಸಿಲ್ಲ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.
ನೀತಿ ಆಯೋಗದ ಆರೋಗ್ಯ ವಿಭಾಗದ ಸದಸ್ಯ ಡಾ.ವಿ.ಕೆ. ಪಾಲ್ ಸುದ್ದಿಗಾರರಿಗೆ ಈ ಮಾಹಿತಿ ನೀಡಿದ್ದಾರೆ. ಈ ರೂಪಾಂತರ ಸೋಂಕು ದೇಶವನ್ನು ಪ್ರವೇಶಿಸದಂತೆ ಸೂಕ್ತ ಪ್ರತಿಬಂಧಕ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.
ಜನತೆ ಆತಂಕಕ್ಕೆ ಒಳಗಾಗಬೇಕಿಲ್ಲ. ಹಾಗೆಂದ ಮಾತ್ರಕ್ಕೆ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ. ಎಚ್ಚರಿಕೆಯಿಂದ ಇರುವುದು ಅಗತ್ಯ ಎಂದು ಕೇಂದ್ರ ಸರ್ಕಾರ ತಿಳಿಸಿದರು.
ಈ ಪರಿವರ್ತಿತ ಸೋಂಕು ಅಪಾಯಕಾರಿಯೂ ಅಲ್ಲ. ಕೊರೋನಾ ಸೋಂಕಿನ ಹೊಸ ರೂಪಾಂತರವು ರೋಗ ಉಲ್ಬಣ ಮತ್ತು ಸಾವು-ನೋವಿಗೆ ಕಾರಣವಾಗುತ್ತಿಲ್ಲ. ಕೋವಿಡ್-೧೯ ನಿಯಂತ್ರಣಕ್ಕೆ ಈಗಾಗಲೇ ಅಭಿವೃದ್ಧಿಪಡಿಸಿರುವ ಲಸಿಕೆ ವಿತರಣೆ ಮಾಡಲಾಗುವುದು ಎಂದು ಹೇಳಿದರು.
ಈ ನಡುವೆ ಐಸಿಎಂಆರ್ ಕೂಡ ಹೇಳಿಕೆ ನೀಡಿದ್ದು, ಬ್ರಿಟನ್ನಿನಲ್ಲಿ ಪತ್ತೆಯಾಗಿರುವ ಕೊರೋನಾ ವೈರಸ್’ನ ಹೊಸ ಪ್ರಭೇದ ಭಾರತದಲ್ಲಿ ಇನ್ನೂ ಯಾರಲ್ಲೂ ಪತ್ತೆಯಾಗಿಲ್ಲ ಎಂದಿದೆ.
