ರಾಂಚಿ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟವನ್ನು ನಿರ್ಣಾಯಕ ಗೆಲುವಿನತ್ತ ಮುನ್ನಡೆಸಿದ ಹೇಮಂತ್ ಸೊರೆನ್ ಇಂದು (ನ.28) 4ನೇ ಬಾರಿಗೆ ಜಾರ್ಖಂಡ್ನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಂಚಿಯ ಮೊರ್ಹಬಾದಿ ಮೈದಾನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ಜಾರ್ಖಂಡ್ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ್, 49 ವರ್ಷದ ಹೇಮಂತ್ ಸೊರೆನ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ.
ಮೈತ್ರಿಕೂಟದ ನಡುವೆ ಸಚಿವ ಸಂಪುಟ ಪಟ್ಟಿ ಅಂತಿಮವಾಗದೇ ಇರುವುದರಿಂದ ಇಂದು ಹೇಮಂತ್ ಸೊರೆನ್ ಏಕೈಕ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಜೆಎಂಎಂ (JMM) ಮುಖ್ಯಮಂತ್ರಿ ಹುದ್ದೆಯೊಂದಿಗೆ 6 ಸಚಿವ ಸ್ಥಾನಗಳನ್ನು ಉಳಿಸಿಕೊಳ್ಳುವ ನಿರೀಕ್ಷೆಯಿದೆ. ಕಾಂಗ್ರೆಸ್ (Congress) ನಾಲ್ಕು ಸ್ಥಾನಗಳು ಮತ್ತು ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ದಳಕ್ಕೆ ಒಂದು ಸ್ಥಾನ ಸಿಗಲಿದೆ. ಇಬ್ಬರು ಶಾಸಕರನ್ನು ಹೊಂದಿರುವ ಸಿಪಿಐ-ಎಂಎಲ್ ಸರ್ಕಾರಕ್ಕೆ ಬಾಹ್ಯ ಬೆಂಬಲ ನೀಡಲಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…