Featured

4ನೇ ಬಾರಿಗೆ ದಕ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನಿನ ಅಧ್ಯಕ್ಷರಾಗಿ ಯಶ್ಪಾಲ್  ಸುವರ್ಣ ಆಯ್ಕೆ – Vishwanews24

4ನೇ ಬಾರಿಗೆ ದಕ ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನಿನ ಅಧ್ಯಕ್ಷರಾಗಿ ಯಶ್ಪಾಲ್  ಸುವರ್ಣ ಆಯ್ಕೆ

ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಹಕಾರಿ ರಂಗದ ಹಿರಿಯ ಸಂಸ್ಥೆಯಾದ ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನಿಗೆ 2024-29ನೇ ಸಾಲಿಗೆ ಅಧ್ಯಕ್ಷರಾಗಿ ಸತತ 4ನೇ ಬಾರಿಗೆ ಅವಿರೋಧವಾಗಿ ಯಶ್ಪಾಲ್ ಎ ಸುವರ್ಣ ರವರು ಪುನರಾಯ್ಕೆಯಾಗಿದ್ದಾರೆ, ಉಪಾಧ್ಯಕ್ಷರಾಗಿ ದೇವಪ್ಪ ಕಾಂಚನ್ ರವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ದಿನಾಂಕ 13-03-24 ರಂದು ಬುಧವಾರ ಫೆಡರೇಶನಿನ ಆಡಳಿತ ಮಂಡಳಿಯ ಸಭೆಯಲ್ಲಿ ರಿಟರ್ನಿಂಗ್ ಅಧಿಕಾರಿ ಸುಧೀರ್ ಕುಮಾರ್ ಸಹಕಾರಿ ಸಂಘಗಳ ಸಹಾಯಕ ನಿಬಂಧಕರು ಮಂಗಳೂರು ಇವರು ಚುನಾವಣಾ ಪ್ರಕ್ರಿಯೆಯನ್ನು ನಡೆಸಿಕೊಟ್ಟರು.

ಯಶ್ಪಾಲ್ ಸುವರ್ಣ 2009 ರಲ್ಲಿ ಫೆಡರೇಶನಿನ ಅಧ್ಯಕ್ಷತೆಯನ್ನು ವಹಿಸಿಕೊಂಡ ಬಳಿಕ ಆಡಳಿತ ಮಂಡಳಿಯ ಸದಸ್ಯರು ಮತ್ತು ಸರ್ವಸದಸ್ಯರ ಸಹಕಾರದಿಂದ ತಮ್ಮ ವೈಯಕ್ತಿಕ ವರ್ಚಸ್ಸನ್ನು ಬಳಸಿ ಫೆಡರೇಶನಿನ ವ್ಯವಹಾರಗಳನ್ನು ವಿಸ್ತರಿಸಿ, ನೂತನ ಬ್ಯಾಂಕಿAಗ್ ವಿಭಾಗವನ್ನು ಆರಂಭಿಸಿ ರಾಜ್ಯ ಸರಕಾರದ ಮತ್ತು ಕೇಂದ್ರ ಸರಕಾರದ ಹಲವಾರು ಯೋಜನೆಗಳನ್ನು ಸಂಸ್ಥೆಗೆ ಪಡೆದು ಅನುಷ್ಠಾನಗೊಳಿಸಿ 46 ಕೋಟಿಗಳಷ್ಟು ಇದ್ದ ಸಂಸ್ಥೆಯ ವ್ಯವಹಾರವನ್ನು ಸುಮಾರು 350 ಕೋಟಿ ಮೀರುವಂತೆ ಮಾಡಿದ ಕೀರ್ತಿ ಶ್ರೀ ಯಶ್ಪಾಲ್ ಸುವರ್ಣ ನೇತೃತ್ವದ ಆಡಳಿತ ಮಂಡಳಿಗೆ ಸಲ್ಲುತ್ತದೆ.

ದ.ಕ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಈ ಹಿಂದೆ ಹಲವು ವರ್ಷಗಳಿಂದ ನಷ್ಟದಲ್ಲಿದ್ದ ಸಂದರ್ಭದಲ್ಲಿ ಯಶ್ಪಾಲ್ ಸುವರ್ಣ ಅಧ್ಯಕ್ಷರಾಗಿ ಸಂಸ್ಥೆಯ ನೇತೃತ್ವ ವಹಿಸಿಕೊಂಡ ಬಳಿಕ ನಿರಂತರವಾಗಿ ಲಾಭ ಗಳಿಸುತ್ತ 15 ವರ್ಷಗಳಲ್ಲಿ ಸುಮಾರು 60 ಕೋಟಿ ಲಾಭವನ್ನು ದಾಖಲಿಸಿದೆ.

ಕಳೆದ 15 ವರ್ಷಗಳಲ್ಲಿ ಫೆಡರೇಷನ್ ಕಾರ್ಯಚಟುವಟಿಕೆಗಳಿಗೆ ಹಲವಾರು ರಾಷ್ಟç ಹಾಗೂ ರಾಜ್ಯಮಟ್ಟದ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದು, 2023 ನೇ ಸಾಲಿನಲ್ಲಿ ಕೇಂದ್ರ ಸರಕಾರದ ಮೀನುಗಾರಿಕೆ ಇಲಾಖೆಯ ರಾಷ್ಟಿçÃಯ ಅತ್ಯುತ್ತಮ ಮೀನುಗಾರಿಕಾ ಮಹಾಮಂಡಲ ಪ್ರಶಸ್ತಿ, 2020ನೇ ಸಾಲಿನ ರಾಜ್ಯ ಮಟ್ಟದ ಅತ್ಯುತ್ತಮ ಮೀನುಗಾರಿಕಾ ಮಹಾಮಂಡಲ ಪ್ರಶಸ್ತಿ ಸಹಿತ ಸಹಕಾರ ಕ್ಷೇತ್ರದ ಸಾಧನೆಯನ್ನು ಗುರುತಿಸಿ 2022ನೇ ಸಾಲಿನ ರಾಜ್ಯ ಮಟ್ಟದ ಸಹಕಾರ ರತ್ನ ಪ್ರಶಸ್ತಿಗೆ ಯಶ್ಪಾಲ್ ಸುವರ್ಣ ಭಾಜನರಾಗಿದ್ದಾರೆ.

ಈಗಾಗಲೇ ಸಂಸ್ಥೆಯ ಲಾಭಾಂಶದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಂಸ್ಥೆಯ ಸದಸ್ಯರಿಗೆ ಉಚಿತ ಆರೋಗ್ಯಕಾರ್ಡ್ ವಿತರಣೆ, ಸದಸ್ಯ ಸಹಕಾರಿ ಸಂಸ್ಥೆಗಳಿಗೆ ಮತ್ತು ಗ್ರಾಹಕರಿಗೆ ಪ್ರೋತ್ಸಾಹಕ ಉಡುಗೊರೆಗಳನ್ನು ನೀಡುತ್ತಾ ಬಂದಿದ್ದು, ವಿಶಿಷ್ಟ ಕಾರ್ಯ ಚಟುವಟಿಕೆಯ ಮೂಲಕ ಸಂಸ್ಥೆಯನ್ನು ಇನ್ನಷ್ಟು ಅಭಿವೃದ್ದಿಗೊಳಿಸುವ ಜೊತೆ ಜೊತೆಯಲ್ಲಿ ಅವಿಭಜಿತ ದ.ಕ. ಜಿಲ್ಲೆಯ ಮೀನುಗಾರಿಕೆ ಹಾಗೂ ಮೀನುಗಾರರ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳ ಪರಿಣಾಮಕಾರಿ ಅನುಷ್ಟಾನಕ್ಕಾಗಿ ಸರಕಾರ ಹಾಗೂ ಮೀನುಗಾರರ ನಡುವಿನ ಕೊಂಡಿಯಾಗಿ ಸೇವೆ ಸಲ್ಲಿಸುವ ಉದ್ದೇಶ ನೂತನ ಆಡಳಿತ ಮಂಡಳಿಯ ಮುಂದಿದೆ.

ಪ್ರಸ್ತುತ ಉಡುಪಿ ಕ್ಷೇತ್ರದ ಶಾಸಕರಾಗಿ, ಕರಾವಳಿ ಕರ್ನಾಟಕದ ಪ್ರತಿಷ್ಟಿತ ಮಹಾಲಕ್ಷಿö್ಮ ಕೋ. ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾಗಿ, ಬಿಜೆಪಿ ಹಿಂದುಳಿದ ವರ್ಗಗಳ ಮೊರ್ಚಾದ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿಯಾಗಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಯಶ್ಪಾಲ್ ಸುವರ್ಣ ತಮ್ಮ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ವಿಶೇಷವಾಗಿ ಗುರುತಿಸಿಕೊಂಡಿರುತ್ತಾರೆ.

ಫೆಡರೇಶನಿನ ಆಡಳಿತ ಮಂಡಳಿ ಸಭೆಯಲ್ಲಿ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ದೇವಪ್ಪ ಕಾಂಚನ್, ನೂತನ ಆಡಳಿತ ಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾದ ಶ್ರೀ ರಾಮಚಂದ್ರ ಕುಂದರ್, ಶ್ರೀ ಶಿವಾಜಿ ಎಸ್. ಅಮೀನ್, ಶ್ರೀ ಸುರೇಶ್ ಸಾಲ್ಯಾನ್, ಶ್ರೀ ಚಿದಾನಂದ, ಶ್ರೀಮತಿ ಉಷಾರಾಣಿ ಡಿ. ಕೆ., ಶ್ರೀ ಹೇಮಚಂದ್ರ ಸಾಲ್ಯಾನ್, ಶ್ರೀ ಟಿ ನಾರಾಯಣ, ಶ್ರೀ ಜಯರಾಜ್ ಮೆಂಡನ್, ಶ್ರೀಮತಿ ಬೇಬಿ ಹೆಚ್ ಸಾಲ್ಯಾನ್, ಶ್ರೀಮತಿ ಇಂದಿರಾ, ಶ್ರೀ ಸುಧಾಕರ, ಶ್ರೀ ಸುಧೀರ್ ಶ್ರೀಯಾನ್ ಹಾಗೂ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ದರ್ಶನ್ ಕೆ. ಟಿ. ಉಪಸ್ಥಿತರಿದ್ದರು.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago