4 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ ಚಹಲ್‌, ಧನಶ್ರೀ  – vishwanews24

Featured, ರಾಷ್ಟ್ರ ನ್ಯೂಸ್

4 ವರ್ಷಗಳ ದಾಂಪತ್ಯ ಜೀವನಕ್ಕೆ ಗುಡ್‌ಬೈ ಹೇಳಿದ ಚಹಲ್‌, ಧನಶ್ರೀ 

ಮುಂಬೈ: ಟೀಂ ಇಂಡಿಯಾದ  ಸ್ಪಿನ್ನರ್ ಯಜುವೇಂದ್ರ ಚಹಲ್ ಮತ್ತು ನಟಿ ಧನಶ್ರೀ  ಅಧಿಕೃತವಾಗಿ ಬೇರೆ ಬೇರೆಯಾಗಿದ್ದಾರೆ.

ಫೆ.20 ರಂದು ಬಾಂದ್ರಾ ಕುಟುಂಬ ನ್ಯಾಯಾಲಯದಲ್ಲಿ ದಂಪತಿಯ ಅಂತಿಮ ವಿಚ್ಛೇದನ (Divorce) ವಿಚಾರಣೆ ನಡೆಯಿತು. ಚಹಲ್ ಮತ್ತು ಧನಶ್ರೀ ಇಬ್ಬರೂ ಬೆಳಿಗ್ಗೆ 11 ಗಂಟೆಯಿಂದ ವಿಚಾರಣೆಗೆ ಹಾಜರಾಗಿದ್ದರು. ನ್ಯಾಯಾಲಯವು ಸುಮಾರು 45 ನಿಮಿಷಗಳ ಕಾಲ ನಡೆದ ಕೌನ್ಸಿಲಿಂಗ್‌ಗೆ ಹಾಜರಾಗುವಂತೆ ಅವರಿಗೆ ಸೂಚಿಸಿತು. ಅಲ್ಲಿ ಅವರು ಪರಸ್ಪರ ಒಪ್ಪಿಗೆಯ ಮೂಲಕ ಡಿವೋರ್ಸ್‌ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.

ತಮ್ಮ ವಿಚ್ಛೇದನದ ಹಿಂದಿನ ಕಾರಣದ ಬಗ್ಗೆ ಪ್ರಶ್ನಿಸಿದಾಗ, ಚಹಲ್ ಮತ್ತು ಧನಶ್ರೀ ‘ಹೊಂದಾಣಿಕೆಯ ಸಮಸ್ಯೆ’ ಕಾರಣವನ್ನು ನೀಡಿದ್ದಾರೆ. ಪ್ರಕರಣವನ್ನು ಪರಿಶೀಲಿಸಿದ ನಂತರ ಮತ್ತು ಎಲ್ಲಾ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆಯೇ ಎಂದು ಖಚಿತಪಡಿಸಿಕೊಂಡ ನಂತರ ನ್ಯಾಯಾಧೀಶರು ಸಂಜೆ 4:30ಕ್ಕೆ ಅಧಿಕೃತವಾಗಿ ಅವರ ವಿಚ್ಛೇದನ ತೀರ್ಪು ಪ್ರಕಟಿಸಿದರು.

ಉಡುಪಿ : ಆಟೋ ರಿಕ್ಷಾಗಳಿಗೆ ವಲಯವಾರು ಸ್ಟಿಕ್ಕರ್ ಅಳವಡಿಕೆ ಕಡ್ಡಾಯ – vishwanews24

Leave a Reply