Featured

4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ನಟಿ ಹನ್ಸಿಕಾ ಮೊಟ್ವಾನಿ – vishwanews24

ಜೀವನಾಂಶ ಕೇಳದೇ  4 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯಹಾಡಿದ ನಟಿ ಹನ್ಸಿಕಾ ಮೊಟ್ವಾನಿ

‘ಬಿಂದಾಸ್’‌ ನಟಿ ಹನ್ಸಿಕಾ ಮೊಟ್ವಾನಿ ಅವರು ಉದ್ಯಮಿ ಸೊಹೇಲ್‌ ಖತುರಿಯಾ ಜೊತೆಗಿನ ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ.

ಮುಂಬೈನ ಬಾಂದ್ರಾ ಉಪನಗರದಲ್ಲಿರುವ ಕೌಟುಂಬಿಕ ನ್ಯಾಯಾಲಯವು ನಟಿ ಹನ್ಸಿಕಾ ಮೊಟ್ವಾನಿ ಮತ್ತು ಉದ್ಯಮಿ ಸೊಹೇಲ್ ಖತುರಿಯಾ ಅವರಿಗೆ ವಿಚ್ಛೇದನ ನೀಡಿದೆ ಎಂದು ಅವರ ವಕೀಲ ಅದ್ನಾನ್ ಶೇಖ್ ದೃಢಪಡಿಸಿದ್ದಾರೆ.

ಕಳೆದ ಆಗಸ್ಟ್‌ನಲ್ಲಿ ಹನ್ಸಿಕಾ ಮೋಟ್ವಾನಿ ಮತ್ತು ಸೊಹೇಲ್ ಖತುರಿಯಾ ಬೇರ್ಪಟ್ಟಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಡಿದ್ದವು. ಈ ಹಿಂದಿನ ದಂಪತಿಗಳು ಕೆಲವು ಸಮಯದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಎಂಬ ವರದಿಗಳು ಬಂದವು.’

ಇದನ್ನೂ ಓದಿ: 

ಕನ್ನಡದ ಬಿಂದಾಸ್‌ ಹಾಗೂ ಆಪ್ ಕಾ ಸುರೂರ್, ಒರು ಕಲ್ ಒರು ಕನ್ನಡಿ, ಮತ್ತು ಮೈ ನೇಮ್ ಈಸ್ ಶ್ರುತಿ ಸಿನಿಮಾಗಳ ಮೂಲಕ ಜನಪ್ರಿಯತೆ ಗಳಿಸಿರುವ ನಟಿ 2022ರ ಡಿಸೆಂಬರ್‌ನಲ್ಲಿ ಜೈಪುರದ ಮುಂಡೋಟಾ ಫೋರ್ಟ್ ಮತ್ತು ಅರಮನೆಯಲ್ಲಿ ಸೋಹೆಲ್‌ ಖತುರಿಯಾ ಅವರನ್ನು ವಿವಾಹವಾದರು.

ನಮ್ಮ ಕಕ್ಷಿದಾರ ಹನ್ಸಿಕಾ ಮೋಟ್ವಾನಿ ಅವರಿಗೆ ಬಾಂದ್ರಾದ ಗೌರವಾನ್ವಿತ ಕುಟುಂಬ ನ್ಯಾಯಾಲಯವು ವಿಚ್ಛೇದನದ ತೀರ್ಪು ನೀಡಿದೆ. ಎರಡೂ ಕಡೆಯವರು ಒಪ್ಪಿಕೊಂಡ ನಂತರ ಪರಸ್ಪರ ಒಪ್ಪಿಗೆಯ ಮೂಲಕ ವಿಚ್ಛೇದನವನ್ನು ನೀಡಲಾಗಿದೆ. ಸೊಹೇಲ್ ಅವರಿಂದ ನಟಿ ಯಾವುದೇ ಜೀವನಾಂಶ ಕೇಳಿಲ್ಲ ಎಂದು ವಕೀಲ ಅದ್ನಾನ್ ಶೇಖ್ ತಿಳಿಸಿದ್ದಾರೆ.‌

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

23 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

23 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

24 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago