‘ಬಿಂದಾಸ್’ ನಟಿ ಹನ್ಸಿಕಾ ಮೊಟ್ವಾನಿ ಅವರು ಉದ್ಯಮಿ ಸೊಹೇಲ್ ಖತುರಿಯಾ ಜೊತೆಗಿನ ನಾಲ್ಕು ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ.
ಮುಂಬೈನ ಬಾಂದ್ರಾ ಉಪನಗರದಲ್ಲಿರುವ ಕೌಟುಂಬಿಕ ನ್ಯಾಯಾಲಯವು ನಟಿ ಹನ್ಸಿಕಾ ಮೊಟ್ವಾನಿ ಮತ್ತು ಉದ್ಯಮಿ ಸೊಹೇಲ್ ಖತುರಿಯಾ ಅವರಿಗೆ ವಿಚ್ಛೇದನ ನೀಡಿದೆ ಎಂದು ಅವರ ವಕೀಲ ಅದ್ನಾನ್ ಶೇಖ್ ದೃಢಪಡಿಸಿದ್ದಾರೆ.
ಕಳೆದ ಆಗಸ್ಟ್‌ನಲ್ಲಿ ಹನ್ಸಿಕಾ ಮೋಟ್ವಾನಿ ಮತ್ತು ಸೊಹೇಲ್ ಖತುರಿಯಾ ಬೇರ್ಪಟ್ಟಿದ್ದಾರೆ ಎಂಬ ವದಂತಿಗಳು ಸಾಮಾಜಿಕ ಮಾಧ್ಯಮದಲ್ಲಿ ಹರಡಿದ್ದವು. ಈ ಹಿಂದಿನ ದಂಪತಿಗಳು ಕೆಲವು ಸಮಯದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಎಂಬ ವರದಿಗಳು ಬಂದವು.’
ಇದನ್ನೂ ಓದಿ:
ಕನ್ನಡದ ಬಿಂದಾಸ್ ಹಾಗೂ ಆಪ್ ಕಾ ಸುರೂರ್, ಒರು ಕಲ್ ಒರು ಕನ್ನಡಿ, ಮತ್ತು ಮೈ ನೇಮ್ ಈಸ್ ಶ್ರುತಿ ಸಿನಿಮಾಗಳ ಮೂಲಕ ಜನಪ್ರಿಯತೆ ಗಳಿಸಿರುವ ನಟಿ 2022ರ ಡಿಸೆಂಬರ್‌ನಲ್ಲಿ ಜೈಪುರದ ಮುಂಡೋಟಾ ಫೋರ್ಟ್ ಮತ್ತು ಅರಮನೆಯಲ್ಲಿ ಸೋಹೆಲ್ ಖತುರಿಯಾ ಅವರನ್ನು ವಿವಾಹವಾದರು.
ನಮ್ಮ ಕಕ್ಷಿದಾರ ಹನ್ಸಿಕಾ ಮೋಟ್ವಾನಿ ಅವರಿಗೆ ಬಾಂದ್ರಾದ ಗೌರವಾನ್ವಿತ ಕುಟುಂಬ ನ್ಯಾಯಾಲಯವು ವಿಚ್ಛೇದನದ ತೀರ್ಪು ನೀಡಿದೆ. ಎರಡೂ ಕಡೆಯವರು ಒಪ್ಪಿಕೊಂಡ ನಂತರ ಪರಸ್ಪರ ಒಪ್ಪಿಗೆಯ ಮೂಲಕ ವಿಚ್ಛೇದನವನ್ನು ನೀಡಲಾಗಿದೆ. ಸೊಹೇಲ್ ಅವರಿಂದ ನಟಿ ಯಾವುದೇ ಜೀವನಾಂಶ ಕೇಳಿಲ್ಲ ಎಂದು ವಕೀಲ ಅದ್ನಾನ್ ಶೇಖ್ ತಿಳಿಸಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…